Site icon Vistara News

Actor Vishnuvardhan: ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆಗೆ ಸೇರಿದ ವಿಷ್ಣುವರ್ಧನ್‌ ಕಟೌಟ್ ಜಾತ್ರೆ

Vishnuvardhan Cutouts Fair

ಬೆಂಗಳೂರು: ಡಾ.ವಿಷ್ಣುವರ್ಧನ್‌ (Actor Vishnuvardhan) ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್‌ 18ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ “ಕಟೌಟ್‌ ಜಾತ್ರೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು 40 ಲಕ್ಷದಷ್ಟು ಹಣ ಖರ್ಚಾಗಿತ್ತು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು . ಇದೀಗ ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆಯಾಗಿ ದಾಖಲೆಯಾಗಿ ವಿಷ್ಣು ಅಭಿಮಾನಿಗಳಿಗೆ ಹೆಮ್ಮೆ ಮೂಡಿಸಿದೆ.

ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು, ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆಯಾಗಿ ದಾಖಲೆಯಾಗಿದೆ.

ಇದನ್ನೂ ಓದಿ: Actor-Director Manobala: ವಿಷ್ಣುವರ್ಧನ್‌‌ ಸಿನಿಮಾಗೆ ನಿರ್ದೇಶನ ಮಾಡಿದ ನಟ, ನಿರ್ದೇಶಕ ಮನೋಬಾಲ ನಿಧನ

ʻʻತೆರೆಮುಂದೆ ತೆರೆಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ. ಈ ದಾಖಲೆಯು ಡಾ.ವಿಷ್ಣುವರ್ಧನ್‌ ಅವರ ಅಗಲಿಕೆಯ 13 ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ. ಈ ಕಟೌಟ್‌ ಜಾತ್ರೆಗೆ ಬೆನ್ನೆಲುಬಾಗಿ ನಿಂತ 50 ಸೇನಾನಿಗಳಿಗೆ, ಯೋಜನೆ ಕಾರ್ಯಸಾಧುಗೊಳಿಸಿದ ಆನಂದ್‌ ರಾಚ್‌, ಕಟೌಟ್‌ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್‌ ರಾವ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುತ್ತೇನೆʼʼಎಂದು ವಿಷ್ಣುಸೇನೆಯ ಮುಖಂಡ ವೀರಕಪುತ್ರ ಶ್ರೀನಿವಾಸ್. .

Exit mobile version