ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್ ಸ್ಟಾರ್ ಯಶ್ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.
ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.
ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಪ್ರಕರಣ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.
YASH BOSS ❤️🔥❤️🔥❤️🔥@TheNameIsYash#YASHBOSS #YashToxic #ToxicTheMovie #KVN #radhikapandit #yash19 #yashfans #yashradhika #trending pic.twitter.com/C8uqx1r3Z2
— Yash.Offical.fanpage (@FanpageofYash) July 25, 2024
ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.
ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್ಗೆ ನೀಡಿತ್ತು. ಇದೀಗ ಕೆವಿಎನ್ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.
20 ಎಕರೆ ಜಾಗದಲ್ಲಿ ಕೋಟಿ ವೆಚ್ಚ ಮಾಡಿ ಸೆಟ್ ನಿರ್ಮಾಣ ಮಾಡಲಾಗಿದ್ದು, ಒಂದೊಮ್ಮೆ ಸೆಟ್ ತೆರವು ಮಾಡಬೇಕು ಎಂದರೆ ಟಾಕ್ಸಿಕ್ ಚಿತ್ರತಂಡಕ್ಕೆ ಭಾರಿ ನಷ್ಟವಾಗಲಿದೆ. ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.
ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!