Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌! - Vistara News

ಸಿನಿಮಾ

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

Actor Yash: ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

VISTARANEWS.COM


on

Actor Yash to recreate the 50s and 70s era in Toxic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್‌ ಆಗುತ್ತಿದೆ.

ʼಟಾಕ್ಸಿಕ್‌ʼ (Toxic) ಸಿನಿಮಾ 1950- 1970ರ ಘಟ್ಟದಲ್ಲಿ ನಡೆಯುವ ಕಥೆಯಾಗಿದೆ ಎಂದು ವರದಿಯಾಗಿದೆ. ಡ್ರಗ್ಸ್ ಮಾಫಿಯಾ ಹಿನ್ನಲೆಯಲ್ಲಿ ಈ ಚಿತ್ರವು ತಯಾರಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

VISTARANEWS.COM


on

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇಂದು ಭಾರತೀಯ ಚಿತ್ರರಂಗದ ‘ನ್ಯಾಷನಲ್ ಕ್ರಶ್’ ಆಗಿ ಬೆಳೆದಿರಬಹುದು, ಆದರೆ ಅವರ ಈ ಯಶಸ್ಸಿನ ಪಯಣದ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ದೊಡ್ಡ ಪಾತ್ರವಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿದ ರಶ್ಮಿಕಾ, “ನನ್ನ ವೃತ್ತಿಜೀವನದ ಆರಂಭದಲ್ಲಿ ನನಗೆ ನನ್ನ ಪ್ರತಿಭೆಯ ಮೇಲೆ ನಂಬಿಕೆ ಇರಲಿಲ್ಲ. ಆದರೆ ನನಗಿಂತ ಮೊದಲೇ ನನ್ನೊಳಗಿನ ಶಕ್ತಿಯನ್ನು ಗುರುತಿಸಿದ್ದು ಅಪ್ಪು ಸರ್” ಎಂದು ಸ್ಮರಿಸಿದ್ದಾರೆ. ‘ಕಿರಿಕ್ ಪಾರ್ಟಿ’ ನಂತರ ಸಿಕ್ಕ ಅವಕಾಶಗಳು ಕೇವಲ ಅದೃಷ್ಟ ಎಂದು ಭಾವಿಸಿದ್ದ ರಶ್ಮಿಕಾ ಅವರಿಗೆ, ಆತ್ಮವಿಶ್ವಾಸ ತುಂಬಿದವರು ಪುನೀತ್ ರಾಜ್‌ಕುಮಾರ್.

‘ಅಂಜನಿಪುತ್ರ’ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಪುನೀತ್ ಅವರು ರಶ್ಮಿಕಾ ಅವರ ನಟನೆಗೆ ಮೆಚ್ಚುಗೆ ಸೂಚಿಸುತ್ತಿದ್ದರಂತೆ. “ನಿನ್ನ ಪ್ರತಿಭೆಯ ಮೇಲೆ ನಂಬಿಕೆ ಇಡು, ಯಾವುದಕ್ಕೂ ಹಿಂಜರಿಯಬೇಡ” ಎಂದು ಅಪ್ಪು ನೀಡಿದ ಆ ಕಿವಿಮಾತು ರಶ್ಮಿಕಾ ಅವರ ಆಲೋಚನಾ ಕ್ರಮವನ್ನೇ ಬದಲಿಸಿತ್ತು. ಒಬ್ಬ ದೊಡ್ಡ ಸ್ಟಾರ್ ಆಗಿದ್ದರೂ, ಸೆಟ್‌ನಲ್ಲಿ ಹೊಸಬರಿಗೆ ಅವರು ನೀಡುತ್ತಿದ್ದ ಗೌರವ ಮತ್ತು ಪ್ರೋತ್ಸಾಹವೇ ತಾನು ವೃತ್ತಿಜೀವನದಲ್ಲಿ ಗಟ್ಟಿಯಾಗಿ ನೆಲೆಯೂರಲು ಅಡಿಪಾಯವಾಯಿತು ಎಂದು ರಶ್ಮಿಕಾ ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.

ಅಂದು ಅಪ್ಪು ನೀಡಿದ ಆ ದೃಢವಾದ ನಂಬಿಕೆಯ ಫಲವಾಗಿಯೇ ರಶ್ಮಿಕಾ ಇಂದು ಕೇವಲ ಕನ್ನಡಕ್ಕೆ ಸೀಮಿತವಾಗದೆ ತೆಲುಗಿನ ‘ಪುಷ್ಪ’ ಮತ್ತು ಹಿಂದಿಯ ‘ಅನಿಮಲ್’ನಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ‘ಗೀತಾ ಗೋವಿಂದಂ’ನಿಂದ ಆರಂಭವಾದ ಅವರ ಪ್ಯಾನ್ ಇಂಡಿಯಾ ಜರ್ನಿ ಇಂದು ಬಾಲಿವುಡ್‌ನಲ್ಲೂ ಸೈ ಎನಿಸಿಕೊಳ್ಳುವಂತೆ ಮಾಡಿದೆ. “ಅಪ್ಪು ಸರ್ ಕೇವಲ ಸಹ-ನಟನಲ್ಲ, ನನ್ನ ಸಾಮರ್ಥ್ಯವನ್ನು ನನಗೆ ಪರಿಚಯಿಸಿದ ಶಕ್ತಿ” ಎನ್ನುವ ರಶ್ಮಿಕಾ ಅವರ ಮಾತುಗಳು ಕನ್ನಡಿಗರ ಮನಗೆದ್ದಿವೆ.

Continue Reading

Latest

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

VISTARANEWS.COM


on

‘ಕಾಂತಾರ’ ಸಿನಿಮಾದ ಭರ್ಜರಿ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಿಷಬ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಈಗ ಸದ್ದಿಲ್ಲದೆ ತೆಲುಗಿನಲ್ಲಿ ಬಿಡುಗಡೆಗೆ ಸಜ್ಜಾಗಿದೆ. 2022ರಲ್ಲಿ ಕನ್ನಡದಲ್ಲಿ ತೆರೆಕಂಡಿದ್ದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವು ಈಗ ತೆಲುಗಿಗೆ ಡಬ್ ಆಗಿದ್ದು, ‘ಎ ಫಿಲ್ಮ್ ಬೈ ಗಿರಿ’ (A Film By Giri) ಎಂಬ ಹೆಸರಿನಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ. ಮೇ 8ರಂದು ಈ ಸಿನಿಮಾ ತೆಲುಗು ರಾಜ್ಯಗಳಲ್ಲಿ ತೆರೆಗೆ ಬರಲಿದೆ.

‘ಕಾಂತಾರ’ ಬಿಡುಗಡೆಗೂ ಮುನ್ನವೇ ಸಿದ್ಧವಾಗಿದ್ದ ಈ ಚಿತ್ರವು ಕನ್ನಡದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಆದರೆ ಈಗ ರಿಷಬ್ ಶೆಟ್ಟಿ ಅವರಿಗೆ ದಕ್ಷಿಣ ಭಾರತದಾದ್ಯಂತ ದೊಡ್ಡ ಅಭಿಮಾನಿ ಬಳಗ ಇರುವುದರಿಂದ, ಅವರ ಹಳೆಯ ಸಿನಿಮಾವನ್ನು ತೆಲುಗಿಗೆ ತರಲು ವಿತರಕರು ಆಸಕ್ತಿ ತೋರಿಸಿದ್ದಾರೆ. ವಿಶೇಷವಾಗಿ ರಿಷಬ್ ಶೆಟ್ಟಿ ಅವರು ಮುಂದಿನ ದಿನಗಳಲ್ಲಿ ‘ಜೈ ಹನುಮಾನ್’ ನಂತಹ ದೊಡ್ಡ ತೆಲುಗು ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿರುವುದರಿಂದ, ಟಾಲಿವುಡ್ ಮಾರುಕಟ್ಟೆಯಲ್ಲಿ ಅವರಿಗೆ ಈಗ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇದನ್ನೇ ಬಂಡವಾಳವಾಗಿಸಿಕೊಂಡು ಎಂಜಿ ಮೂವೀಸ್ ಸಂಸ್ಥೆಯು ಈ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡುತ್ತಿದೆ.

ಕರಣ್ ಆನಂದ್ ಮತ್ತು ಅನಿರುದ್ಧ ಮಹೇಶ್ ನಿರ್ದೇಶನದ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ಜೊತೆಗೆ ತಪಸ್ವಿನಿ ಪೂಣಚ್ಚ ಹಾಗೂ ರಚನಾ ಇಂದರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮತ್ತು ರಿಷಬ್ ಶೆಟ್ಟಿ ಫಿಲ್ಮ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದವು. ಹರಿಹರಪುರ ಎಂಬ ಊರಿನಲ್ಲಿ ಸಿನಿಮಾ ಮಾಡುವ ಕನಸು ಹೊತ್ತ ಯುವಕರ ಕಥೆ ಹೊಂದಿರುವ ಈ ಚಿತ್ರವು ಹಾಸ್ಯ ಮತ್ತು ಭಾವನಾತ್ಮಕ ಸನ್ನಿವೇಶಗಳಿಂದ ಕೂಡಿದೆ. ಕನ್ನಡದಲ್ಲಿ ಈಗಾಗಲೇ ಓಟಿಟಿಯಲ್ಲಿ ಲಭ್ಯವಿದ್ದರೂ, ತೆಲುಗು ಪ್ರೇಕ್ಷಕರು ಬೆಳ್ಳಿತೆರೆಯ ಮೇಲೆ ರಿಷಬ್ ಶೆಟ್ಟಿ ಅವರ ನಟನೆಯನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

Continue Reading

Latest

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

VISTARANEWS.COM


on

ಧ್ರುವ ಸರ್ಜಾ ನಟನೆಯ ‘ಕೆಡಿ-ದಿ ಡೆವಿಲ್’ ಸಿನಿಮಾದ “ಸರ್ಸೆ ಸೆರಗ ಸರ್ಸೆ” ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯು ಮಹಿಳೆಯರನ್ನು ಅಶ್ಲೀಲವಾಗಿ ಬಿಂಬಿಸಿದೆ ಎಂಬ ಆರೋಪದ ಮೇಲೆ ಆಯೋಗವು ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆ ವೇಳೆ ಸಂಜಯ್ ದತ್ ಅವರು, ಈ ಹಾಡಿನ ಸಾಹಿತ್ಯ ರಚನೆಯಲ್ಲಾಗಲಿ ಅಥವಾ ಅದರ ಅನುವಾದದಲ್ಲಾಗಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸುತ್ತಲೇ, ಈ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕೇವಲ ಕ್ಷಮೆಯಾಚನೆಗೆ ಸೀಮಿತವಾಗದ ಸಂಜಯ್ ದತ್, ಬುಡಕಟ್ಟು ಸಮುದಾಯದ ಹೆಣ್ಣುಮಕ್ಕಳ ಏಳಿಗೆಗಾಗಿ ಒಂದು ಮಹತ್ವದ ಭರವಸೆ ನೀಡಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಮಹಾರಾಷ್ಟ್ರದ ನಾಗ್ಪುರ ಭಾಗದ ಬುಡಕಟ್ಟು ಸಮುದಾಯದ 50 ಹೆಣ್ಣುಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಅವರು ಆಯೋಗಕ್ಕೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾವು ನಟಿಸುವ ಯಾವುದೇ ದೃಶ್ಯ ಅಥವಾ ಹಾಡುಗಳಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಅಥವಾ ಯಾವುದೇ ಸಮುದಾಯಕ್ಕೆ ಅಗೌರವ ಆಗದಂತೆ ಎಚ್ಚರಿಕೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ವಿವಾದಕ್ಕೀಡಾಗಿದ್ದ ಈ ಹಾಡನ್ನು ಈಗಾಗಲೇ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿಷೇಧಿಸಿದ್ದು, ಚಿತ್ರತಂಡವು ಯೂಟ್ಯೂಬ್‌ನಿಂದ ಇದನ್ನು ತೆಗೆದುಹಾಕಿದೆ. ಪ್ರೇಮ್ ನಿರ್ದೇಶನದ ಈ ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಕಾಣಲು ಸಜ್ಜಾಗಿದೆ. ಸಂಜಯ್ ದತ್ ಅವರ ಈ ಮಾನವೀಯ ನಡೆಯಿಂದ ಸದ್ಯ ವಿವಾದ ತಣ್ಣಗಾದಂತಿದೆ. ಅವರ ಈ ಶೈಕ್ಷಣಿಕ ನೆರವಿನ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಸಿನಿಮಾ

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

VISTARANEWS.COM


on

ತಮಿಳುನಾಡು ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಎದುರಾಗಿದೆ. ಇದೇ ವೇಳೆ ಟಿವಿಕೆ ಯ ಪ್ರಮುಖ ನಾಯಕ ‘ದಳಪತಿ’ ಖ್ಯಾತಿಯ ವಿಜಯ್‌ ಆಸ್ತಿ ವಿವಾದ ಮಾತ್ರ ಮತ್ತೆ ಮತ್ತೆ ಮುನ್ನೆಲೆಗೆ ಬರುತ್ತಲೇ ಇದೆ. ಈ ಬಾರಿ ವಿವಾದದ ಕೇಂದ್ರಬಿಂದುವಾಗಿರುವುದು ಚುನಾವಣೆಗೂ ಮುನ್ನ ಸಲ್ಲಿಕೆಯಾದ ಅಫಿಡವಿಟ್‌ನಲ್ಲಿನ ಅಂಶಗಳು. ವಿಶೇಷವಾಗಿ, ವಿಜಯ್‌ ತಮ್ಮ ಪತ್ನಿಗೆ ನೀಡಿದ್ದಾರೆ ಎನ್ನಲಾದ 12 ಕೋಟಿ ರೂಪಾಯಿಗಳ ಸಾಲದ ವಿವರವು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ಈ 12 ಕೋಟಿ ರೂಪಾಯಿ ಸಾಲದ ಮೂಲ ಯಾವುದು ಮತ್ತು ಇಷ್ಟು ದೊಡ್ಡ ಮೊತ್ತವನ್ನು ಪತ್ನಿಗೆ ನೀಡಲು ಕಾರಣವೇನು ಎಂಬ ಪ್ರಶ್ನೆಯನ್ನು ವಿರೋಧ ಪಕ್ಷದ ನಾಯಕರು ಎತ್ತುತ್ತಿದ್ದಾರೆ. ಚುನಾವಣಾ ಕಣದಲ್ಲಿ ಈ ಆಸ್ತಿ ವಿವರಗಳು ದೊಡ್ಡ ಪ್ರಚಾರದ ವಸ್ತುವಾಗಿದ್ದವು, ಆದರೆ ಚುನಾವಣೆ ಮುಗಿದ ನಂತರವೂ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವೇದಿಕೆಗಳಲ್ಲಿ ಈ ಕುರಿತಾದ ಟೀಕೆಗಳು ಮತ್ತು ಕೆಸರೆರಚಾಟಗಳು ಮುಂದುವರಿದಿವೆ. ಇದು ಕೇವಲ ವೈಯಕ್ತಿಕ ಹಣಕಾಸಿನ ವಿಚಾರವಲ್ಲ, ಇದರ ಹಿಂದೆ ಬೇರೆಯದೇ ಆದ ಆರ್ಥಿಕ ಮೂಲಗಳಿವೆ ಎಂಬುದು ವಿರೋಧಿಗಳ ಆರೋಪ.

ಸದ್ಯಕ್ಕೆ ದಳಪತಿ ಕುಟುಂಬವು ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ಕಾನೂನುಬದ್ಧವಾಗಿಯೇ ಎಲ್ಲಾ ವಿವರಗಳನ್ನು ನೀಡಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಆದರೂ, ಜನರ ನಡುವೆ ಈ 12 ಕೋಟಿಯ ಲೆಕ್ಕಾಚಾರವು ಭಾರಿ ಕುತೂಹಲ ಮೂಡಿಸಿದೆ. ರಾಜಕೀಯ ಮೇಲಾಟಗಳ ನಡುವೆ ವಿಜಯ್‌ ಆಸ್ತಿ ಮತ್ತು ಸಾಲದ ವಿವಾದವು ಅಂತಿಮವಾಗಿ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

Continue Reading
Advertisement
bigbreaking11 hours ago

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

Latest11 hours ago

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

ಕ್ರೀಡೆ13 hours ago

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

Latest13 hours ago

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

bigbreaking13 hours ago

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

Latest14 hours ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest14 hours ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest17 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest18 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest18 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌