ಬೆಂಗಳೂರು: ʼಕೆಜಿಎಫ್ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್ 2ʼ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್ ಅಭಿನಯದ ʼಟಾಕ್ಸಿಕ್ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್ ಆಗುತ್ತಿದೆ.
ʼಟಾಕ್ಸಿಕ್ʼ (Toxic) ಸಿನಿಮಾ 1950- 1970ರ ಘಟ್ಟದಲ್ಲಿ ನಡೆಯುವ ಕಥೆಯಾಗಿದೆ ಎಂದು ವರದಿಯಾಗಿದೆ. ಡ್ರಗ್ಸ್ ಮಾಫಿಯಾ ಹಿನ್ನಲೆಯಲ್ಲಿ ಈ ಚಿತ್ರವು ತಯಾರಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್!
ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್ ಟಾಕ್ಸಿಕ್ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್ (Yash) ಚಿತ್ರ ಡ್ರಗ್ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.
ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎನ್ನುವುದು ಖಚಿತವಾಗಿದೆ.