Site icon Vistara News

Actress Haripriya | ಶೂಟಿಂಗ್‌ ಸೆಟ್‌ನಲ್ಲಿ ಒಟ್ಟಿಗೆ ಕೈ ಕೈ ಹಿಡಿದುಕೊಂಡು ಕಾಣಿಸಿಕೊಂಡ ʻಸಿಂಹಪ್ರಿಯಾʼ!

Actress Haripriya

ಬೆಂಗಳೂರು: ನಟಿ ಹರಿಪ್ರಿಯಾ (Actress Haripriya) ಹಾಗೂ ನಟ ವಸಿಷ್ಠ ಸಿಂಹ ಲವ್‌ ಲಿ (Love Li) ಸಿನಿಮಾದ ಶೂಟಿಂಗ್ ಸೆಟ್‌ನಲ್ಲಿ ಡಿಸೆಂಬರ್‌ 10 ಶನಿವಾರ ಕಾಣಿಸಿಕೊಂಡಿದ್ದಾರೆ. ವಸಿಷ್ಠ ಸಿಂಹ ನಟಿಸುತ್ತಿರುವ ಲವ್ ಲಿ ಸಿನಿಮಾದಲ್ಲಿ ಹರಿಪ್ರಿಯಾ ಚಿತ್ರೀಕರಣದ ಸ್ಥಳದಲ್ಲಿದ್ದು, ಚಿತ್ರತಂಡದ ಜತೆ ಸಮಯ ಕಳೆದಿದ್ದಾರೆ.

ಉಡುಪಿಯಲ್ಲಿ ಲವ್‌ ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಡಿಸೆಂಬರ್‌ 9ರಂದು ಕೃಷ್ಟ ಮಠಕ್ಕೆ ಜೋಡಿ ಭೇಟಿ ಕೊಟ್ಟಿತ್ತು. ವಸಿಷ್ಠ ಸಿಂಹ ಕೂಡ ನಿಶ್ಚಿತಾರ್ಥ ಮುಗಿಸಿಕೊಂಡು ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಇದೀಗ ಭಾವಿ ಪತ್ನಿಯೊಂದಿಗೆ ದೇವಸ್ಥಾನಕ್ಕೂ ತೆರಳಿ ಆನಂತರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚಿತ್ರವನ್ನು ಚೇತನ್‌ ಕೇಶವ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ವಸಿಷ್ಠ ಸಿಂಹ.

ಇದನ್ನೂ ಓದಿ | Actress Haripriya | ಸಿಂಹದ ಮಡಿಲಲ್ಲಿ ಹರಿಪ್ರಿಯಾ ಪ್ರೀತಿ: ʻಎಂದೂ ನಿನ್ನ ನೆರಳಾಗಿ ಕಾಯುವೆ ನಾನುʼ ಎಂದ ವಸಿಷ್ಠ ಸಿಂಹ

ಇದೊಂದು ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದೆ. ರೌಡಿಸಂ ಕಥಾಹಂದರವನ್ನು ಹೊಂದಿದೆ. ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ಜಾರ್ಖಂಡ್‌ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಕೊರಿಯನ್ ವೆಬ್ ಸಿರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್‌ಗೆ ಇದು ಮೊದಲ ಕನ್ನಡ ಸಿನಿಮಾ. ಮಾಸ್ಟರ್ ಆನಂದ್ ತ್ರಿ ವಂಶಿಕಾ ಕೂಡ ಲವ್ ಲಿ ಚಿತ್ರತಂಡ ಸೇರಿಕೊಂದ್ದಾರೆ. ಸುಬ್ಬುಲಕ್ಷ್ಮಿ ಸಂಸಾರ ಧಾರಾವಾಹಿ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಛಾಯಾಗ್ರಹಣವಿದೆ. ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಸಿನಿಮಾಕ್ಕಿದೆ.

ಇದನ್ನೂ ಓದಿ | Actress Haripriya | ವಸಿಷ್ಠ ಸಿಂಹ-ಹರಿಪ್ರಿಯಾ ನಿಶ್ಚಿತಾರ್ಥದ ಫೋಟೊಗಳು ವೈರಲ್‌!

Exit mobile version