ನಟಿ ಪೂಜಾ ಗಾಂಧಿ (Pooja Gandhi) ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ʼಮಳೆ ಹುಡುಗಿʼ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು.
ಇದೀಗ ಪೂಜಾ ಗಾಂದಿ ಹಾಗೂ ವಿಜಯ್ ಜೋಡಿ ಕುವೆಂಪು ಅವರು ಹುಟ್ಟಿ ಬೆಳೆದ ಕುಪ್ಪಳ್ಳಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದೆ.
ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದ್ದರು.
ಇದನ್ನೂ ಓದಿ: Pooja Gandhi: ನಾಳೆ ಪೂಜಾ ಗಾಂಧಿ ಮದುವೆ; ನಟಿ ಕನ್ನಡದಲ್ಲಿ ಬರೆದ ಕರೆಯೋಲೆ ಕುತೂಹಲಕರ!
ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ದಶಕಗಳಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ, ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.
ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಇದೀಗ ಕರ್ನಾಟಕದ ಸೊಸೆಯಾಗಿದ್ದಾರೆ.