Site icon Vistara News

Ragini Dwivedi: ಕನ್ನಡ, ಮಲಯಾಳದಲ್ಲಿ ರಾಗಿಣಿ ದ್ವಿವೇದಿಯ ʼಶೀಲʼ

ragini dwivedi in sheela film

ಬೆಂಗಳೂರು: ಕನ್ನಡ ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ಬರುತ್ತಿರುವ ʼಶೀಲʼ ಪ್ಯಾನ್ ಇಂಡಿಯಾ ಚಿತ್ರದ ಫಸ್ಟ್ ಲುಕ್ ಬಿಡುಗಡೆ‌ಯಾಗಿದ್ದು, ಇದರಲ್ಲಿ ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ.

ರಾಗಿಣಿ ದ್ವಿವೇದಿ ʼಶೀಲʼ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಸದ್ಯ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ʼʼಶೀಲʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ” ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

#image_title

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ ನಿರ್ದೇಶಿಸಿದ್ದಾರೆ. ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್‌ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Ragini Dwivedi: ಮಾದಕ ನಟಿ ರಾಗಿಣಿಯ ಬಿಂದಾಸ್ ಯೋಗ ನೋಡುವುದೇ ಯೋಗ!

Exit mobile version