Site icon Vistara News

Actress Ramya | ರಮ್ಯಾ ನಿರ್ಮಾಣದ ಸಿನಿಮಾಗೆ ಸಂಕಷ್ಟ: ಟೈಟಲ್‌ ಕುರಿತಾಗಿ ರಾಜೇಂದ್ರ ಸಿಂಗ್‌ ಬಾಬು ನೀಡಿದ ಪತ್ರವೇನು?

Actress Ramya

ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆಹನಿಯೇ’ (Actress Ramya) ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನೇನು ಚಿತ್ರದ ಶೂಟಿಂಗ್‌ ಮುಗಿದು, ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೀಗ ತಂಡಕ್ಕೆ ಸಂಕಷ್ಟವೊಂದು ಎದುರಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದುʼʼ ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ವಕೀಲರ ಮುಖೇನ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರೆ ಕಲಾವಿದರು ನಟಿಸಿದ್ದು ಶೇಖಡ 80% ಭಾಗದ ಚಿತ್ರೀಕರಣ ಮುಕ್ತಾಯವಾಗಿತ್ತು. ನಾಯಕ ನಟ ಅಂಬರೀಶ್ ನಿಧನ ಹೊಂದಿದ ನಂತರ ಚಿತ್ರದ ಚಿತ್ರೀಕರಣವು ಕಾರಣಾಂಶಗಳಿಂದ ನಿಂತಿತ್ತು. ಚಿತ್ರದ ಶೀರ್ಷಿಕೆ ರಾಜೇಂದ್ರ ಸಿಂಗ್‌ ಬಾಬು ನಿರ್ದೇಶಿಸಿರುವ ʻಬಣ್ಣದ ಗೆಜ್ಜೆʼ ಚಿತ್ರದ ಹಾಡಿನ ಶೀರ್ಷಿಕೆಯಾಗಿತ್ತು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀಷಿಕೆಯನ್ನಾಗಲೀ ಅಥವಾ ಹಾಡನ್ನಾಗಲೀ ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಣಿ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣವನ್ನು ಮಾಡಲು ಅವಕಾಶ ಕೊಟ್ಟಿದ್ದೇ ಆದರೆ ಶೀರ್ಷಿಕೆಯ ಕೃತಿಚೌರ್ಯವಾಗುತ್ತದೆʼʼ ಎಂದು ರಾಜೇಂದ್ರ ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | Actress Ramya | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾಗೆ ರಮ್ಯಾ ಬೈ? ಹೊಸ ನಟಿಯ ಹೆಸರು ರಿವೀಲ್‌!

ನಿರ್ಮಾಪಕ ಗಂಗಾಧರ್‌ ಹೇಳೋದೇನು?
ʻʻಸ್ವಾತಿ ಮುತ್ತಿನ ಮಳೆ ಹನಿಯೇ” ಟೈಟಲ್ ಅನ್ನು ರಾಜೇಂದ್ರ ಸಿಂಗ್ ಬಾಬು ರಿಜಿಸ್ಟರ್ ಮಾಡಿಸಿಲ್ಲ. ಈ ಟೈಟಲ್ ವಿತರಕ ಹಾಗೂ ನಿರ್ಮಾಪಕ ಬಿ.ಕೆ. ಗಂಗಾಧರ್ ಅವರ ಬ್ಯಾನರ್‌ನಲ್ಲಿದೆ. ಗಂಗಾಧರ್‌ ಈ ಟೈಟಲ್‌ ಅನ್ನು ರಮ್ಯಾ ಅವರಿಗೆ ನೀಡಿದ್ದಾರೆ. ಹೀಗಾಗಿ ಸದ್ಯ ಈ ಸಿನಿಮಾ ಮಾಡಲು ರಮ್ಯಾ ಅವರಿಗೆ ಯಾವುದೇ ಅಭ್ಯಂತರವಿಲ್ಲ. ರಾಜೇಂದ್ರ ಸಿಂಗ್ ಬಾಬು ಯಾವ ಆಧಾರದಲ್ಲಿ ನೋಟಿಸ್ ಕೊಟ್ಟಿದ್ದಾರೋ ಅದು ನಮಗೆ ಗೊತ್ತಿಲ್ಲʼʼಎಂದು ವಿಸ್ತಾರ ನ್ಯೂಸ್‌ಗೆ ನಿರ್ಮಾಪಕ ಗಂಗಾಧರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Actress Ramya | ಸದ್ದಿಲ್ಲದೆ ಶೂಟಿಂಗ್‌ ಮುಗಿಸಿದ ಸ್ವಾತಿ ಮುತ್ತಿನ ಮಳೆ ಹನಿಯೇ; ರಮ್ಯಾರಿಂದ ಮತ್ತೊಂದು ಸರ್ಪ್ರೈಸ್‌

Exit mobile version