ಬೆಂಗಳೂರು: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ರಮ್ಯಾ (Actress Ramya) ಲೆಕ್ಚರ್ ಪಾತ್ರದಲ್ಲಿ ಗಮನ ಸೆಳೆದಿದ್ದರು. ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್ ಆಗಿದ್ದನ್ನು ನೋಡಿ ಫ್ಯಾನ್ಸ್ ಸಖತ್ ಖುಷ್ ಆಗಿದ್ದರು. ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ (Legal Notice) ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.
ಕೊನೆಯ ಕ್ಷಣದಲ್ಲಿ ಕೈ ಕೊಟ್ಟ ಮೋಹಕ ತಾರೆ!
ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ತನ್ನ ಒಪ್ಪಿಗೆ ಇಲ್ಲದೇ ಯಾವ ದೃಶ್ಯ ಬಳಸಬಾರದು ಎಂದು ತಡೆಯಾಜ್ಞೆ ನೀಡಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೊ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟಿಸ್ನಲ್ಲಿ ಒತ್ತಾಯಿಸಿದ್ದಾರೆ. ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ. ಜುಲೈ 21ರಂದು ಸಿನಿಮಾ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಅಷ್ಟೇ ಅಲ್ಲದೇ ರಮ್ಯಾ ಅವರು ಈ ಸಿನಿಮಾದ ಪ್ರೋಮೊ ಶೂಟ್ನಲ್ಲಿ ಭಾಗಿ ಆಗಿದ್ದರು. ಕೊನೆಯ ಕ್ಷಣದಲ್ಲಿ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಸಡನ್ ಆಗಿ ಲೀಗಲ್ ನೋಟಿಸ್ ನೀಡಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ: Hostel Hudugaru Bekagiddare: ವಾರ್ಡನ್ ಕಾಟ, ಹಾಸ್ಟೆಲ್ ಹುಡುಗರ ಆಟ, ರಮ್ಯಾ ಪಾಠ, ಸಖತ್ ಆಗಿದೆ ಮೊದಲ ನೋಟ!
ಸಿನಿಮಾಗೆ ಹಲವು ಕಲಾವಿದರಿಂದ ಸಾಥ್
ಕಿರಿಕ್ ಮಾಡುವ ವಾರ್ಡನ್ ಕಾಟದಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್ ಹುಡುಗರು ಏನೆಲ್ಲಾ ಮಾಡುತ್ತಾರೆ. ಅದರಿಂದ ಮುಂದೆ ಏನು ಸಮಸ್ಯೆ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಾಥ್ ಕೊಟ್ಟಿರುವ ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನವಿದೆ.
ಪ್ರಜ್ವಲ್ ಬಿಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕಶ್ಯಪ್ ಹಾಗೂ ಇನ್ನಿತರರು ಜತೆಗೆ ಸೇರಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದು, ಇದೇ 21ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.