ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಮ್ಯಾ (Actress Ramya) ನಿರ್ಮಾಣದ`ʻಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೀರ್ಷಿಕೆ ಬಳಸದಂತೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಿಟಿ ಸಿವಿಲ್ ಕೋರ್ಟ್ (Civil Cour) ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದ್ದು, ರಾಜೇಂದ್ರ ಸಿಂಗ್ ಬಾಬು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ನಿರ್ದೇಶಕ ರಾಜೇಂದ್ರ ಸಿಂಗ್ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟೈಟಲ್ ತಮ್ಮದೆಂದು ಕೋರ್ಟ್ (Civil Court) ಗೆ ಅರ್ಜಿ ಸಲ್ಲಿಸಿದ್ದರು. ಈ ಶೀರ್ಷಿಕೆಯನ್ನು ಬೇರೆಯೊಬ್ಬರು ಬಳಸುತ್ತಿದ್ದು, ಅದನ್ನು ತಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಇದೀಗ ಅರ್ಜಿ ವಜಾ ಆಗಿದ್ದು, ರಮ್ಯಾ ಅವರಿಗೆ ಗೆಲುವು ಸಿಕ್ಕಿದೆ.
ಏನಿದು ಪ್ರಕರಣ?
ʻಬಣ್ಣದ ಗೆಜ್ಜೆ’ ಚಿತ್ರಕ್ಕೆ ರಾಜೇಂದ್ರ ಸಿಂಗ್ ಅವರು 1990ರಲ್ಲಿ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ `ಸ್ವಾತಿ ಮುತ್ತಿನ ಮಳೆ ಹನಿಯೇ’ ಸಾಂಗ್ ಹಿಟ್ ಆಗಿತ್ತು. ರಮ್ಯಾ ಅವರು ʻಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡುವ ಮುನ್ನವೇ ಈ ಟೈಟಲ್ ಅನ್ನು ತಾವು ರಿಜಿಸ್ಟರ್ ಮಾಡಿರುವುದಾಗಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸುಹಾಸಿನಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 80% ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದ ಬಳಿಕ ಕೆಲವು ದೃಶ್ಯಗಳು ಬಾಕಿ ಉಳಿದಿತ್ತು. ಈಗ ಈ ಶೀರ್ಷಿಕೆಯನ್ನು ಅಭಿಷೇಕ್ ಅಂಬರೀಶ್ ಸಿನಿಮಾಗೆ ಬಳಸಬೇಕು ಎಂದು ಆಲೋಚಿಸಿದ್ದಾರೆ. ಇನ್ನೂ ರಮ್ಯಾ ಕೂಡ ಇದೇ ಟೈಟಲ್‌ನಲ್ಲಿ ಚಿತ್ರ ನಿರ್ಮಾಣ ಮಾಡಿರುವುದು ಸಮಸ್ಯೆ ಎದುರಾಗಿತ್ತು. ಈ ವಿಚಾರ ಕೋರ್ಟ್‌ನಲ್ಲಿ ತೀರ್ಪು ಬರುವವರೆಗೂ ರಮ್ಯಾ ನಿರ್ಮಾಣದ ಈ ಸಿನಿಮಾವನ್ನು ಸೆನ್ಸಾರ್ ಮಾಡಬಾರದು ಎಂದು ತಡೆ ನೀಡಿರುವುದಾಗಿ ಈ ವೇಳೆ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದರು.
ಪತ್ರದಲ್ಲಿ ಏನಿದೆ?
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರೆ ಕಲಾವಿದರು ನಟಿಸಿದ್ದು 80% ಭಾಗದ ಚಿತ್ರೀಕರಣ ಮುಕ್ತಾಯವಾಗಿತ್ತು. ನಾಯಕ ನಟ ಅಂಬರೀಶ್ ನಿಧನ ಹೊಂದಿದ ನಂತರ ಚಿತ್ರದ ಚಿತ್ರೀಕರಣವು ಕಾರಣಾಂಶಗಳಿಂದ ನಿಂತಿತ್ತು. ಚಿತ್ರದ ಶೀರ್ಷಿಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿರುವ ʻಬಣ್ಣದ ಗೆಜ್ಜೆʼ ಚಿತ್ರದ ಹಾಡಿನ ಶೀರ್ಷಿಕೆಯಾಗಿತ್ತು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀಷಿಕೆಯನ್ನಾಗಲೀ ಅಥವಾ ಹಾಡನ್ನಾಗಲೀ ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಣಿ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣವನ್ನು ಮಾಡಲು ಅವಕಾಶ ಕೊಟ್ಟಿದ್ದೇ ಆದರೆ ಶೀರ್ಷಿಕೆಯ ಕೃತಿಚೌರ್ಯವಾಗುತ್ತದೆʼʼ ಎಂದು ರಾಜೇಂದ್ರ ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದರು.