Site icon Vistara News

Actress Sanjana Das : ʼಎಲ್ಲೋ ಜೋಗಪ್ಪ ನಿನ್ನರಮನೆʼ ಎನ್ನಲಾರಂಭಿಸಿದ ನಟಿ ಸಂಜನಾ ದಾಸ್‌

#image_title

ಬೆಂಗಳೂರು: ಹಯವದನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇದೀಗ ಚಿತ್ರಕ್ಕೆ ಮತ್ತೋರ್ವ ನಟಿಯನ್ನು ಎಳೆದುತಂದಿದ್ದಾರೆ. ಪ್ರತಿಭಾನ್ವಿತ ನಟಿ ಸಂಜನಾ ದಾಸ್‌ (Actress Sanjana Das) ಅವರು ಚಿತ್ರದ ಎರಡನೇ ನಾಯಕಿಯಾಗಿ ನಟಿಸಲಿದ್ದಾರೆ.

ಇದನ್ನೂ ಓದಿ: ವಿಸ್ತಾರ TOP 10 NEWS: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್‌ನಿಂದ, ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆವರೆಗಿನ ಪ್ರಮುಖ ಸುದ್ದಿಗಳಿವು
ಈಗಾಗಲೇ ವೆನ್ಯ ರೈ ಎಂಬ ನವ ಪ್ರತಿಭೆಯನ್ನು ನಾಯಕಿಯಾಗಿ ಚಿತ್ರತಂಡ ಪರಿಚಯಿಸಿದೆ. ಇದೀಗ ಚಿತ್ರಕ್ಕೆ ಸಂಜನಾ ದಾಸ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದಲ್ಲಿ ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ಸದ್ಯ ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಡೆಸುತ್ತಿದೆ. ಚಿತ್ರದಲ್ಲಿ ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿದ್ದಾರೆ. ತಂದೆ ಮಗನ ಬಾಂಧವ್ಯದ ಜತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್‌ಗಳನ್ನ ಒಳಗೊಂಡ ಜರ್ನಿ ಸಿನಿಮಾ ಇದಾಗಿದೆ.

ಇದನ್ನೂ ಓದಿ: Jugal bandi Trailer : ಕಾಂತಾರ ಖ್ಯಾತಿಯ ಮಾನಸಿ ಸುಧೀರ್‌ ನಟನೆಯ ʼಜುಗಲ್‌ ಬಂದಿʼ ಟ್ರೇಲರ್‌ ರಿಲೀಸ್‌
ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು, ಬಿರಾದರ್ ಸೇರಿ ಅನೇಕರು ಬಣ್ಣ ಹಚ್ಚಿದ್ದಾರೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ಅಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Exit mobile version