Site icon Vistara News

Adipurush Movie: ಹೊಸ ಪೋಸ್ಟರ್‌ ಹಂಚಿಕೊಂಡ ಆದಿಪುರುಷ್: ಸೀತೆಯ ಪಾತ್ರದಲ್ಲಿ ಕೃತಿ ಸನೂನ್‌

Adipurush Movie Bew poster Kriti Sanon

ಬೆಂಗಳೂರು: ಆದಿಪುರುಷ್‌ (Adipurush Movie) ಚಿತ್ರದಲ್ಲಿ ಕೃತಿ ಸನೂನ್‌ (Kriti Sanon) ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಓಂ ರಾವುತ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ ಇದು. ಹೊಸ ಮೋಷನ್ ಪೋಸ್ಟರ್‌ನಲ್ಲಿ ಕೃತಿ ಸನೂನ್ ಅವರು ಸೀತಾ ಪಾತ್ರಧಾರಿಯಾಗಿ ಪರಿಚಯವಾಗಿದ್ದಾರೆ.

ಪೋಸ್ಟರ್‌ನಲ್ಲಿ ಎರಡು ವಿಭಿನ್ನ ಆವೃತ್ತಿಗಳಿವೆ. ಒಂದು ಕೃತಿ ಸನೂನ್‌ ಅವರ ಕ್ಲೋಸ್‌ಅಪ್ ಶಾಟ್‌ ಇದ್ದರೆ ಇನ್ನೊಂದರಲ್ಲಿ ಲಾಂಗ್ ಶಾಟ್ ಚಿತ್ರ ಹಂಚಿಕೊಂಡಿದೆ. ಚಿತ್ರದಲ್ಲಿ ಕೃತಿ ಸನೂನ್‌ ಸೀತೆಯಾಗಿ ಕಾಣಿಸಿಕೊಳ್ಳಲಿದ್ದು, ಪ್ರಭಾಸ್ ರಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್ ರಾವಣನಾಗಿ ನಟಿಸಿದ್ದಾರೆ. ಸನ್ನಿ ಸಿಂಗ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 16ರಂದು ಆದಿಪುರುಷ ಚಿತ್ರಮಂದಿರಗಳಿಗೆ ಬಿಡುಗಡೆಯಾಗಲಿದೆ. ಇದು IMAX ಮತ್ತು 3D ಸ್ವರೂಪಗಳಲ್ಲಿ ಬಿಡುಗಡೆಯಾಗಲಿದೆ.

ಅದಕ್ಕೂ ಮುನ್ನ ವಿದೇಶದ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸಿನಿಮಾ ಪ್ರದರ್ಶನವಾಗುತ್ತಿದೆ. ನ್ಯೂಯಾರ್ಕ್​ನಲ್ಲಿ ಜೂನ್​ 7ರಿಂದ ಜೂನ್​ 18ರವರೆಗೆ ‘ತ್ರಿಬ್ಯಾಕಾ ಫಿಲ್ಮ್ ಫೆಸ್ಟಿವಲ್​’ (Tribeca Film Festival ) ನಡೆಯಲಿದೆ. ಈ ಸಿನಿಮೋತ್ಸವದಲ್ಲಿ ಪ್ರದರ್ಶನ ಕಾಣಲು ‘ಆದಿಪುರುಷ್​’ ಸಿನಿಮಾ ಆಯ್ಕೆ ಆಗಿದೆ.

ಪ್ರಭಾಸ್‌ ಈ ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ‘ಆದಿಪುರುಷ್’ ನಂತರ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಬಿಡುಗಡೆಯಾಗಲಿದೆ. ಸಂಕ್ರಾಂತಿಗೆ ‘ಪ್ರಾಜೆಕ್ಟ್ K’ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Adipurush Movie: ಅಕ್ಷಯ ತೃತೀಯ ಶುಭದಿನದಂದು ಹೊಸ ಅಪ್‌ಡೇಟ್‌ ಕೊಟ್ಟ ʻಆದಿಪುರುಷ್‌ʼ

ಜೂನ್‌ 16ರಂದು ತೆರೆಗೆ

ನಟ ದೇವದತ್ತ ನಾಗೆ ಹನುಮಾನ್ ಆಗಿ ಕಾಣಿಸಿಕೊಂಡಿದ್ದಾರೆ. ರಾಮನವಮಿಯಂದು ಬಿಡುಗಡೆಯಾದ ಪೋಸ್ಟರ್‌ನಲ್ಲಿ ಪ್ರಭಾಸ್ ಮತ್ತು ಸನ್ನಿ ಬಿಲ್ಲು ಮತ್ತು ಬಾಣಗಳನ್ನು ಹಿಡಿದು, ರಕ್ಷಾಕವಚವನ್ನು ಧರಿಸಿದ್ದರು. ಕೃತಿ ಸರಳವಾದ ಸೀರೆಯಲ್ಲಿ ಕಾಣಿಸಿಕೊಂಡರೆ, ದೇವದತ್ತ ಅವರು ನಮಸ್ಕರಿಸುತ್ತಿರುವ ಭಂಗಿಯಲ್ಲಿ ಕಾಣಿಸಿಕೊಂಡರು.

ಪ್ರಭಾಸ್, ಕೃತಿ ಸನೂನ್ ಮತ್ತು ಸನ್ನಿ ಹೊರತುಪಡಿಸಿ, ಚಿತ್ರದಲ್ಲಿ ಸೈಫ್ ಅಲಿ ಖಾನ್ ಸೇರಿದಂತೆ ಇತರರು ನಟಿಸಿದ್ದಾರೆ. ಇದು ಹಿಂದು ಮಹಾಕಾವ್ಯ ರಾಮಾಯಣ ರೂಪಾಂತರವಾಗಿದೆ. ಆದಿಪುರುಷವನ್ನು ಟಿ-ಸೀರೀಸ್‌ನ ಭೂಷಣ್ ಕುಮಾರ್ ಮತ್ತು ಕ್ರಿಶನ್ ಕುಮಾರ್, ಓಂ, ಪ್ರಸಾದ್ ಸುತಾರ್ ಮತ್ತು ರೆಟ್ರೋಫೈಲ್ಸ್‌ನ ರಾಜೇಶ್ ನಾಯರ್ ನಿರ್ಮಿಸಿದ್ದಾರೆ.

Exit mobile version