Site icon Vistara News

Aditi Prabhudeva: ರೊಮ್ಯಾಂಟಿಕ್ ಹಾಡಿನ ಮೂಲಕ ಬಂದ ಪ್ರಜ್ವಲ್-ಅದಿತಿ ಪ್ರಭುದೇವ!

Aditi Prabhudeva Prajwal Devaraj Thumbane Kelalaare from mafia

ಬೆಂಗಳೂರು: ಸ್ಯಾಂಡಲ್‌ವುಡ್‌ ʻಡೈನಾಮಿಕ್ ಪ್ರಿನ್ಸ್ʼ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ʻಮಾಫಿಯಾʼ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ʻಮಾಫಿಯಾʼ ಈಗಾಗಲೇ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಇದೀಗ ಪ್ರಜ್ವಲ್ ರೊಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದ ಅದಿತಿ ಇದೀಗ ʻಮಾಫಿಯಾʼ ಮೂಲಕ ಅಭಿಮಾನಿಗಳ ಮುಂದೆ ಬರಲಿ ಸಜ್ಜಾಗಿದ್ದಾರೆ.

ಅಂದಹಾಗೆ ʻಮಾಫಿಯಾʼ ಸಿನಿಮಾ ʻಮಮ್ಮಿʼ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್‌ನ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಸದ್ಯ ರಿಲೀಸ್ ಆಗಿರುವ ‘ತುಂಬನೇ ಕೇಳಲಾರೆ…’ ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಇದನ್ನೂ ಓದಿ: Aditi Prabhudeva: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ

ʻಮಾಫಿಯಾʼ ಈಗಾಗಲೇ ಚಿತ್ರೀಕಣ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಸದ್ಯ ಟೀಸರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರಕ್ಕೆ ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.

Exit mobile version