Agastya Nanda: 'ಯೋಧ'ನ ಬಯೋಪಿಕ್‌ನಲ್ಲಿ ನಟಿಸಲಿದ್ದಾರೆ ಅಗಸ್ತ್ಯ ನಂದಾ! - Vistara News

ಬಾಲಿವುಡ್

Agastya Nanda: ‘ಯೋಧ’ನ ಬಯೋಪಿಕ್‌ನಲ್ಲಿ ನಟಿಸಲಿದ್ದಾರೆ ಅಗಸ್ತ್ಯ ನಂದಾ!

Agastya Nanda: ಶ್ರೀರಾಮ್ ರಾಘವನ್ ಅವರ ಥ್ರಿಲ್ಲರ್ ಸಿನಿಮಾ ‘ಮೆರ್ರಿ ಕ್ರಿಸ್‌ಮಸ್‌ʼಗೆ ಬಿಡುಗಡೆಗೆ ಸಜ್ಜಾಗುತ್ತಿದೆ. ಇದೀಗ ಅಗಸ್ತ್ಯ ನಂದಾ ಅವರೊಂದಿಗೆ ‘ಎಕ್ಕಿಸ್’ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಧರ್ಮೇಂದ್ರ ಅವರುಅರುಣ್ ಖೇತರ್ಪಾಲ್ ತಂದೆ ಎಂಎಲ್ ಖೇತರ್‌ಪಾಲ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Agastya Nanda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ದಿ ಆರ್ಚೀಸ್’ ಸಿನಿಮಾ (The Archies) ಬಳಿಕ ಅಗಸ್ತ್ಯ ನಂದಾ (Agastya Nanda) ಅವರ ಮುಂಬರುವ ಸಿನಿಮಾ ಬಗ್ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರಿ ಚರ್ಚೆಗಳು ಆಗಿತ್ತು. ಇದೀಗ ಅಗಸ್ತ್ಯ ನಂದಾ ಅವರ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ‘ಎಕ್ಕಿಸ್’ ಚಿತ್ರದ (Ekkis) ಮೂಲಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಜನವರಿ 2024ರಲ್ಲಿ ನಡೆಯಲಿದೆ ಎನ್ನಲಾಗಿದೆ. ಶ್ರೀರಾಮ್ ರಾಘವನ್ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. 1971ರ ವೀರ, ಭಾರತೀಯ ಸೇನೆಯ ಅಧಿಕಾರಿ ಅರುಣ್ ಖೇತರ್ಪಾಲ್ ಅವರ ಜೀವನಚರಿತ್ರೆಯ ಸಿನಿಮಾ ಆಗಿದೆ ಎಂದು ವರದಿಯಾಗಿದೆ. ಹಿರಿಯ ನಟ ಧರ್ಮೇಂದ್ರ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಶ್ರೀರಾಮ್ ರಾಘವನ್ ಅವರ ಥ್ರಿಲ್ಲರ್ ಸಿನಿಮಾ ‘ಮೆರ್ರಿ ಕ್ರಿಸ್‌ಮಸ್‌ʼಗೆ ಬಿಡುಗಡೆಗೆ ಸಜ್ಜಾಗುತ್ತಿದೆ. ಇದೀಗ ಅಗಸ್ತ್ಯ ನಂದಾ ಅವರೊಂದಿಗೆ ‘ಎಕ್ಕಿಸ್’ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಧರ್ಮೇಂದ್ರ ಅವರು ಅರುಣ್ ಖೇತರ್ಪಾಲ್ ತಂದೆ ಎಂಎಲ್ ಖೇತರ್‌ಪಾಲ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಅಭಿಮಾನಿಗಳಿಗೆ ಕೈ ಬೀಸಿದ್ದ ಅಗಸ್ತ್ಯ

ಪ್ರತಿ ಭಾನುವಾರ ಅಮಿತಾಭ್‌ (Amitabh Bachchan) ಅವರು ಮುಂಬೈನ ಜುಹುದಲ್ಲಿರುವ ತಮ್ಮ ಮನೆಯಲ್ಲಿ ಅಭಿಮಾನಿಗಳನ್ನು ಆಗಾಗ ಭೇಟಿ ಮಾಡುತ್ತಲೇ ಇರುತ್ತಾರೆ. ಅಮಿತಾಭ್‌ ಜತೆಗೆ ಮೊಮ್ಮಗ ಅಗಸ್ತ್ಯ ನಂದಾ ಕೂಡ ಅಭಿಮಾನಿಗಳಿಗೆ ಕೈ ಬೀಸಿ ಸಾಕಷ್ಟು ಸುದ್ದಿಯಾಗಿದ್ದರು. ಅಗಸ್ತ್ಯ ಅವರ ಚೊಚ್ಚಲ ಚಿತ್ರ ದಿ ಆರ್ಚೀಸ್‌ ಟ್ರೇಲರ್ ಬಿಡುಗಡೆಯಾದ ಬಳಿಕ ಕೂಡ, ಅಮಿತಾಭ್‌ ಬಚ್ಚನ್ ಅವರು ʻʻನನ್ನ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆʼʼಎಂದು ಬರೆದುಕೊಂಡಿದ್ದರು. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​, ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದ ಮುಂತಾದವರು ನಟಿಸಿದ್ದಾರೆ. ಅಗಸ್ತ್ಯ ನಂದ ಅವರ ಚೊಚ್ಚಲ ಈ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಇಡೀ ಬಚ್ಚನ್ ಕುಟುಂಬವು ಹಾಜರಿತ್ತು ಡಿಸೆಂಬರ್ 7 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿತು.

ಇದನ್ನೂ ಓದಿ: Suhana Khan: ಪಾರ್ಟಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಅಗಸ್ತ್ಯ-ಸುಹಾನಾ; ಡೇಟಿಂಗ್‌ ಜೋರಾ?

ಮತ್ತೊಂದೆಡೆ, ಶ್ರೀರಾಮ್, ‘ಬದ್ಲಾಪುರ್’, ‘ಏಕ್ ಹಸೀನಾ ಥಿ’ ಮತ್ತು ‘ಅಂಧಾಧುನ್’ ಸೇರಿದಂತೆ ಇತರ ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಶ್ರೀರಾಮ್ ನಿರ್ದೇಶನ, ವಿಜಯ್ ಸೇತುಪತಿ ಮತ್ತು ಕತ್ರಿನಾ ಕೈಫ್ ಅಭಿನಯದ ‘ಮೆರ್ರಿ ಕ್ರಿಸ್ಮಸ್’ ಜನವರಿ 2024 ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

ವಿಜಯ್ ಸೇತುಪತಿ ಮತ್ತು ಕತ್ರಿನಾ ಕೈಫ್ ಅವರ ಡೈನಾಮಿಕ್ ಜೋಡಿಯನ್ನು ಒಳಗೊಂಡ ಶ್ರೀರಾಮ್ ರಾಘವನ್ ನಿರ್ದೇಶನದ ‘ಮೆರ್ರಿ ಕ್ರಿಸ್ಮಸ್’ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರೀಕರಣ ನಡೆದಿದೆ. ಹಿಂದಿ ಮತ್ತು ತಮಿಳಿನ ವಿವಿಧ ಕಲಾವಿದರ ನಟನೆಯ ಜತೆಗೆ ಎರಡು ಭಾಷೆಗಳಲ್ಲಿ ಚಿತ್ರ ತಯಾರಾಗಲಿದೆ. ಕತ್ರಿನಾ ಕೈಫ್‌ ಮತ್ತು ಶ್ರೀರಾಮ್‌ ರಾಘವನ್‌ ಅವರ ಮೊದಲ ತಮಿಳು ಚಿತ್ರ ಇದಾಗಿರಲಿದೆ.ಹಿಂದಿ ಚಿತ್ರದಲ್ಲಿ ಸಂಜಯ್‌ ಕಪೂರ್‌, ವಿನಯ್‌ ಪಾಠಕ್‌, ಪ್ರತಿಮಾ ಕಣ್ಣನ್‌ ಮತ್ತು ಟಿನ್ನು ಆನಂದ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮಿಳಿನಲ್ಲಿ ರಾಧಿಕಾ ಶರತ್‌ ಕುಮಾರ್‌, ಷನ್ಮುಖರಾಜ, ಕೆವಿನ್‌ ಜೈ ಬಾಬು ಮತ್ತು ರಾಜೇಶ್‌ ವಿಲಿಯಮ್ಸ್‌ ಈ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಾಧಿಕಾ ಆಮ್ಟೆ ಮತ್ತು ಅಶ್ವಿನಿ ಕಲ್ಶೇಖರ್‌ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Juhi Chawla: ಮದುವೆಗೆ 2000 ಜನಕ್ಕೆ ನೀಡಲಾಗಿತ್ತು ಆಮಂತ್ರಣ; ಆದರೆ ಅತ್ತೆ ಹಿಂಪಡೆದರು ಎಂದ ಜೂಹಿ ಚಾವ್ಲಾ!

Juhi Chawla: ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಜೂಹಿ ಭಾಗಿ ಆಗಿದ್ದಾರೆ. ಅವರು ತಮ್ಮ ಮದುವೆ ಬಗ್ಗೆ ನೆನಪಿಸಿಕೊಂಡಿದ್ದಾರೆ. ಈ ವೇಳೆ ನಟಿ ಮಾತನಾಡಿ ʻʻತನ್ನ ಮದುವೆಯ ಒಂದು ವರ್ಷ ಮೊದಲು ತನ್ನ ತಾಯಿ ನಿಧನರಾದರು. ಹಾಗಾಗಿ ಅಂದು ನನಗೆ ತುಂಬ ಸಂತೋಷ ದಿನ ಆಗಿರಲಿಲ್ಲ. ಎಂದು ಜೂಹಿ ನೆನಪಿಸಿಕೊಂಡರು.

VISTARANEWS.COM


on

Juhi Chawla mother-in-law uninvited nearly 2000 guests her wedding
Koo

ಬೆಂಗಳೂರು: ನಟಿ ಜೂಹಿ ಚಾವ್ಲಾ (Juhi Chawla) ಅವರು ಜಯ್ ಮೆಹ್ತಾ ಅವರೊಂದಿಗೆ ಈಗಾಗಲೇ 29 ವರ್ಷ ದಾಂಪತ್ಯ ಜೀವನ ಕಳೆದಿದ್ದಾರೆ. ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಜೂಹಿ ಭಾಗಿ ಆಗಿದ್ದಾರೆ. ಅವರು ತಮ್ಮ ಮದುವೆ ಬಗ್ಗೆ ನೆನಪಿಸಿಕೊಂಡಿದ್ದಾರೆ. ಈ ವೇಳೆ ನಟಿ ಮಾತನಾಡಿ ʻʻತನ್ನ ಮದುವೆಯ ಒಂದು ವರ್ಷ ಮೊದಲು ತನ್ನ ತಾಯಿ ನಿಧನರಾದರು. ಹಾಗಾಗಿ ಅಂದು ನನಗೆ ತುಂಬ ಸಂತೋಷ ದಿನ ಆಗಿರಲಿಲ್ಲ. ಎಂದು ಜೂಹಿ ನೆನಪಿಸಿಕೊಂಡರು.

“ನಾನು ನನ್ನ ವೃತ್ತಿಜೀವನದಲ್ಲಿ ಕೆಲವು ದೊಡ್ಡ ಸಿನಿಮಾಗಳನ್ನು ಮಾಡುತ್ತಿದ್ದೆ. ಆಗ ನಾನು ಮದುವೆಯಾಗಬೇಕಿತ್ತು. ಆದರೆ ಮದುವೆಯ ಒಂದು ವರ್ಷದ ಹಿಂದೆಯೇ ತಾಯಿ ತೀರಿಕೊಂಡಿದ್ದರು. ಮದುವೆಯ ದಿನಾಂಕ ಹತ್ತಿರ ಬಂದಾಗ, ನಾನು ತುಂಬಾ ಪ್ರೀತಿಸುತ್ತಿದ್ದ ನನ್ನ ತಾಯಿ ಹೋದಳು ಎಂದು ದುಃಖಿತಳಾಗಿದ್ದೆ. ಜತೆಗೆ ವೃತ್ತಿ ಜೀವನವೂ ಕೊನೆಗೊಳ್ಳಲಿದೆ ಎಂಬ ಬೇಸರ ಕೂಡ ಇತ್ತು. ನನ್ನ ಭಯವನ್ನು ನನ್ನ ಭಾವಿ ಅತ್ತೆ ಬಳಿ ಹೇಳಿಕೊಂಡೆ. ಅವರು ಇರಲಿ ಬಿಡು ಎಂದರು’ ಎಂದಿದ್ದಾರೆ ಜೂಹಿ.

ʻʻಸುಮಾರು ಸುಮಾರು 2000 ಜನರಿಗೆ ಆಮಂತ್ರಣ ಹೋಗಿತ್ತು. ಎಲ್ಲಾ ಆಮಂತ್ರಣವನ್ನೂ ಅತ್ತೆ ಹಿಂಪಡೆದರು. ನನ್ನ ಅತ್ತೆಯೇ ಮುಂದೆ ನಿಂತು ಕುಟುಂಬದವರಿಗೆ ಈ ಬಗ್ಗೆ ಮನವರಿಕೆ ಮಾಡಿದರು. ದೊಡ್ಡ ಮಟ್ಟದಲ್ಲಿ ಮದುವೆ ಬೇಡ ಎಂದು ಹೇಳಿದರು. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಬರುವಂತೆ ನೋಡಿಕೊಂಡರು. ಕೇವಲ 80-90-100 ಜನರ ಸಮ್ಮುಖದಲ್ಲಿ ಮದುವೆ ಆಯಿತುʼʼಎಂದು ಹೇಳಿಕೊಂಡಿದ್ದಾರೆ.

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!ಇದನ್ನೂ ಓದಿ:

ಜೂಹಿ 1995 ರಲ್ಲಿ ಉದ್ಯಮಿ ಜಯ್ ಮೆಹ್ತಾ ಅವರನ್ನು ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ – ಮಗಳು ಜಾನ್ವಿ ಮೆಹ್ತಾ ಮತ್ತು ಮಗ ಅರ್ಜುನ್ ಮೆಹ್ತಾ. ಕಯಾಮತ್ ಸೆ ಕಯಾಮತ್ ತಕ್ (1988) ನಲ್ಲಿ ಅದ್ಭುತ ಪಾತ್ರ ನಿಭಾಯಿಸಿ ಜನಪ್ರಿಯತೆ ಪಡೆದುಕೊಂಡವರು ಜೂಹಿ. ಡರ್, ಹಮ್ ಹೇ ರಾಹಿ ಪ್ಯಾರ್ ಕೆ, ದೀವಾನಾ ಮಸ್ತಾನಾ, ಯೆಸ್ ಬಾಸ್, ಇಷ್ಕ್, ಝಂಕಾರ್ ಬೀಟ್ಸ್, ಮೈ ಬ್ರದರ್ ನಿಖಿಲ್ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಜೂಹಿ ವೆಬ್ ಸೀರೀಸ್ ಹುಶ್ ಹುಶ್ ಮತ್ತು ದಿ ರೈಲ್ವೇ ಮೆನ್‌ ಭಾಗವಾಗಿದ್ದರು.

Continue Reading

ಸಿನಿಮಾ

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Salman Khan: ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

VISTARANEWS.COM


on

Salman Khan shares new pic from for Sikandar
Koo

ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಸರಳವಾದ ಕಪ್ಪು ಟೀ ಶರ್ಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ನಟನ ಹೊಸ ಲುಕ್‌ ಕಂಡು ಅಭಿಮಾನಿಗಳು ಪ್ರತಿಕ್ರಿಯಿಸಿ ಪ್ರೀತಿಯ ಸುರಿಮಳೆಗೈದರು. ‘ಸಿಕಂದರ್’ ಚಿತ್ರೀಕರಣದಲ್ಲಿ ನಿರತರಾಗಿರುವ ಸಲ್ಮಾನ್, “ಗ್ರೀನ್ ಜೋನ್” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

ಈ ಹಿಂದೆ, ‘ಸಿಕಂದರ್’ ಸೆಟ್‌ನಿಂದ ಕೆಲವು ಫೋಟೊಗಳು ಲೀಕ್‌ ಆಗಿದ್ದವು. ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ತಮಿಳು ಮತ್ತು ಹಿಂದಿಯ ʼಘಜನಿʼ, ತಮಿಳಿನ ʼ7 ಆಮ್ ಅರಿವುʼ, ʼತುಪಾಕಿʼ, ʼಕತ್ತಿʼ, ʼದರ್ಬಾರ್‌ʼ, ಹಿಂದಿಯ ʼಹಾಲಿ ಡೇʼ, ತೆಲುಗಿನ ʼಸ್ಪೈಡರ್‌ʼ ಮುಂತಾದ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಎ.ಆರ್‌.ಮುರುಗದಾಸ್‌ ಸುಮಾರು 8 ವರ್ಷಗಳ ಬಳಿಕ ಸಲ್ಮಾನ್‌ ಚಿತ್ರದ ಮೂಲಕ ಬಾಲಿವುಡ್‌ಗೆ ಮತ್ತೆ ಕಾಲಿಡುತ್ತಿದ್ದಾರೆ. ಮೊದಲ ಬಾರಿ ಮುರುಗದಾಸ್‌ ಅವರು ಸಲ್ಮಾನ್‌ ಖಾನ್‌ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕೂಡ ವಿಶೇಷವೆನಿಸಿದೆ.

Continue Reading

ಬಾಲಿವುಡ್

Munjya Movie: ಸ್ಟಾರ್​ ಕಲಾವಿದರೇ ಇಲ್ಲದೇ ಬರೋಬ್ಬರಿ 100 ಕೋಟಿ ರೂ. ಗಳಿಕೆ ಕಂಡ ʻಮುಂಜ್ಯʼ!

Munjya Movie: ಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿತ್ತು. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿತ್ತು.

VISTARANEWS.COM


on

Munjya Movie Box Office Collection Rs 100 Cr
Koo

ಬೆಂಗಳೂರು: ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್​ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಗಮನ ಸೆಳೆದಿದೆ. ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ (Munjya Movie) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಹಿಂದಿ ಪ್ರೇಕ್ಷಕರ ವಲಯದಲ್ಲಿ ಕೂಡ ಈ ಸಿನಿಮಾ ಸದ್ದು ಮಾಡುತ್ತಿವೆ. ಬಹುತೇಕ ಚಿತ್ರಮಂದಿಗಳನ್ನು ‘ಕಲ್ಕಿ 2898 ಎಡಿ’ ಆವರಿಸಿಕೊಂಡಿದೆ. ಹಾಗಾಗಿ ಈ ಸಿನಿಮಾ ಬಿಡುಗಡೆ ಆದ ನಂತರ ‘ಮುಂಜ್ಯ’ ಕಲೆಕ್ಷನ್​ ಕುಸಿದಿದೆ.

ಇದು ಭಾರತದ ಮೊದಲ CGI ನಾಯಕನನ್ನು ಒಳಗೊಂಡಿರುವ ಸಿನಿಮಾ ಎಂದು. (first computer generated actor) . ಸಿನಿಮಾ ಬಿಡುಗಡೆ ಮುಂಚೆ ಟೀಸರ್‌ ಬಿಡುಗಡೆಯಾಗಿದ್ದರೂ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಯಾವಾಗ ಥಿಯೇಟರ್‌ನಲ್ಲಿ ರಿಲೀಸ್‌ ಆಯ್ತೋ ಸಿನಿಮಾ ಒಳ್ಳೆಯ ಕಲೆಕ್ಷನ್‌ ಮಾಡಿದೆ.

`ಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿತ್ತು. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿತ್ತು. ʻಮುಂಜ್ಯಾʼ ನಗರಕ್ಕೆ ಪ್ರವೇಶಿಸುವ , ಹಾಗೇ ಟಿವಿ ನೋಡುತ್ತಿದ್ದವ ಏಕಾಏಕಿ ಟಿವಿ ಆಫ್‌ ಮಾಡುವಾಗ ಕೋಪಗೊಂಡ ʻಮುಂಜ್ಯಾʼ ಕೋಣೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸುವ ಸನ್ನಿವೇಶ ಟೀಸರ್‌ನಲ್ಲಿತ್ತು. ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇತ್ತು.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ಮುಂಜ್ಯ’ ಸಿನಿಮಾಗೆ ಮೊದಲ ದಿನ 4.21 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ 7.40 ಕೋಟಿ ರೂಪಾಯಿ ಗಳಿಕೆ ಆಯಿತು. ಮೂರನೇ ದಿನ 8.43 ಕೋಟಿ ರೂಪಾಯಿ ಹರಿದುಬಂತು. ನಂತರ ಪ್ರತಿ ದಿನ 3 ಅಥವಾ 4 ಕೋಟಿ ರೂಪಾಯಿ ಗಳಿಸುತ್ತಾ ಈ ಸಿನಿಮಾ ಮುನ್ನುಗ್ಗಿತು. ನಂತರದ ವಾರಾಂತ್ಯದಲ್ಲಿ ಕಲೆಕ್ಷನ್​ ಹೆಚ್ಚಾಯಿತು. 25 ದಿನಗಳ ಯಶಸ್ವಿ ಪ್ರದರ್ಶನ ಕಂಡು ಈ ಸಿನಿಮಾದ ಒಟ್ಟು ಕಲೆಕ್ಷನ್​ 100 ಕೋಟಿ ರೂಪಾಯಿ ಮೀರಿತ್ತು.

ಮುಂಜ್ಯ ಚಿತ್ರವನ್ನು ಆದಿತ್ಯ ಸರ್ಪೋತದಾರ್ ನಿರ್ದೇಶಿಸಿದ್ದಾರೆ ಮತ್ತು ಶಾರ್ವರಿ, ಅಭಯ್ ವರ್ಮಾ, ಮೋನಾ ಸಿಂಗ್ ಮತ್ತು ಬಾಹುಬಲಿ ಚಲನಚಿತ್ರ ಖ್ಯಾತಿಯ ಸತ್ಯರಾಜ್ ಅವರ ಸಮಗ್ರ ತಾರಾಗಣವನ್ನು ಒಳಗೊಂಡಿದೆ. ನಿರೇನ್ ಭಟ್ ಅವರ ಚಿತ್ರಕಥೆ, ಯೋಗೇಶ್ ಚಂಡೇಕರ್ ಸಂಭಾಷಣೆ ಇದೆ. ಸಚಿನ್-ಜಿಗರ್ ಸಂಗೀತ ಸಂಯೋಜಿಸಿದ್ದಾರೆ. ಅಮಿತಾಭ್‌ ಭಟ್ಟಾಚಾರ್ಯ ಸಾಹಿತ್ಯ ಇದೆ. ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣದ ಮುಂಜ್ಯವನ್ನು ದಿನೇಶ್ ವಿಜನ್ ಮತ್ತು ಅಮರ್ ಕೌಶಿಕ್ ನಿರ್ಮಿಸಿದ್ದಾರೆ.  ಇದೀಗ ಕಲ್ಕಿ ಬಿಡುಗಡೆಯಾದ ಕಾರಣ ಸಿನಿಮಾ ಕಲೆಕ್ಷನ್‌ನಲ್ಲಿ ಭಾರಿ ಹೊಡೆತ ಬಿದ್ದಿದಂತಾಗಿದೆ.

Continue Reading

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading
Advertisement
Team India
ಪ್ರಮುಖ ಸುದ್ದಿ3 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ3 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ4 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ4 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ4 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ4 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ4 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್5 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ6 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ6 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ11 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ12 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ13 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ15 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ16 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌