Site icon Vistara News

Salaar Movie : ಸಲಾರ್ ವಿರುದ್ಧ ಅಗ್ನಿಹೋತ್ರಿಯ ವ್ಯಾಕ್ಸಿನ್ ‘ವಾರ್​’

The vaccin war

ಬೆಂಗಳೂರು: ದಿಕಾಶ್ಮೀರ್ ಫೈಲ್ಸ್’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವ ವಿವೇಕ್ ಅಗ್ನಿಹೋತ್ರಿ ‘ದಿ ವ್ಯಾಕ್ಸಿನ್ ವಾರ್’ ಎಂಬ ಬಹುನಿರೀಕ್ಷಿತ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಚಲನಚಿತ್ರದ ಟೀಸರ್ ಸ್ವಾತಂತ್ರ್ಯೋತ್ಸವದಂದು ಬಿಡುಗಡೆಯಾಗಿತ್ತು. ಇದೀಗ ಸಿನಿಮಾ ಸೆಪ್ಟೆಂಬರ್​ 28ರಂದು ಬಿಡುಗಡೆಯಾಗುತ್ತದೆ ಎಂದು ಘೋಷಿಸಲಾಗಿದೆ. ಅದೇ ದಿನ ಪ್ರಶಾಂತ್​ ನೀಲ್​ ಹಾಗೂ ಪ್ರಭಾಸ್ ಕಾಂಬಿನೇಷನ್​ನ ಸಲಾರ್ ಸಿನಿಮಾವೂ ಬಿಡುಗಡೆಯಾಗಲಿದೆ. ಹೀಗಾಗಿ ಸಲಾರ್ ಜತೆ ದಿ ವ್ಯಾಕ್ಸಿನ್​ ವಾರ್ ಎಂದು ಹೇಳಲಾಗುತ್ತಿದೆ.

ದಿ ವ್ಯಾಕ್ಸಿನ್​ ವಾರ್​ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ‌. ಆಸ್ಪತ್ರೆಯಲ್ಲಿ ಕೊರೊನಾ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್‌ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿದೆ.

ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರ್​ ಫೈಲ್ಸ್​ ನಿರ್ಮಾಪಕ ಅಭಿಷೇಕ್​ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.

ಇದನ್ನೂ ಓದಿ : Vivek Agnihotri | ವಿವೇಕ್ ಅಗ್ನಿಹೋತ್ರಿಯ ʻದಿ ವ್ಯಾಕ್ಸಿನ್ ವಾರ್ʼ ಸಿನಿಮಾ ಸೆಟ್‌ನಲ್ಲಿ ಅನುಪಮ್‌ ಖೇರ್‌

ಸೆಪ್ಟಂಬರ್​ 28ರಂದೇ ‘ದಿ ವ್ಯಾಕ್ಸಿನ್​ ವಾರ್’ ಚಿತ್ರ 11 ಭಾಷೆಯಲ್ಲಿ ತೆರೆ ಕಾಣಲಿದೆ. ಅದೇ ದಿನ ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಕೂಡ ಬಿಡುಗಡೆಯಾಗಲಿರುವ ಕಾರಣ ಸಿನಿ ಅಭಿಮಾನಿಗಳು ಯಾವುದಕ್ಕೆ ಹೆಚ್ಚು ಒಲವು ತೋರುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರಭಾಸ್ ನಟನೆಯ ʻಸಲಾರ್‌ʼನಲ್ಲಿ ಕಾಳಿ ಮಾತೆಯ ದಿವ್ಯ ರೂಪ!

ಪ್ಯಾನ್-ಇಂಡಿಯನ್ ಸ್ಟಾರ್ ಪ್ರಭಾಸ್ ಸಲಾರ್ (Salaar Movie ) ಇನ್ನೆರಡು ತಿಂಗಳಲ್ಲಿ ರಿಲೀಸ್‌ ಆಗಲಿದೆ. ಈಗಾಗಲೇ ಸಿನಿಮಾದ ಟ್ರೆಂಡ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಇದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸಲಾರ್ ನಿರ್ಮಾಪಕರು ಚಿತ್ರದ ಇಂಗ್ಲಿಷ್ ಆವೃತ್ತಿಯನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂತಲೂ ವರದಿಯಾಗಿದೆ. ಇದರ ಜತೆ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಕೆಜಿಎಫ್‌ನಲ್ಲಿ ದುರ್ಗಾಮಾತೆ ರುದ್ರಾವತಾರದ ದರ್ಶನ ಮಾಡಿಸಿದ್ದರು. ಸಲಾರ್‌ನಲ್ಲಿ ಪ್ರಭಾಸ್‌ಗೆ ಕಾಳಿ ಮಾತೆ ಶಕ್ತಿ ತುಂಬಲಿದ್ದಾರೆ ಎಂದು ವರದಿಯಾಗಿದೆ.

ಸಲಾರ್‌ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಿರುಸಾಗಿ ನಡೆದಿದೆ. ರವಿ ಬಸ್ರೂರ್ ನೇತೃತ್ವದಲ್ಲಿ ಹಿನ್ನೆಲೆ ಸಂಗೀತದ ಕೆಲಸ ಬಸ್ರೂರಿನ ಸ್ಟುಡಿಯೋದಲ್ಲಿ ಸಾಗಿದೆ. ಕೆಜಿಎಫ್ ಮೊದಲ ಭಾಗದ ಕ್ಲೈಮ್ಯಾಕ್ಸ್ ನಲ್ಲಿ ದುರ್ಗಾ ಮಾತೆಯ ಬೃಹತ್ ಮೂರ್ತಿ ತೋರಿಸಿದ್ದು ಪ್ರೇಕ್ಷಕರಿಗೆ ನೆನಪಿರಬೇಕು. ಆ ದೇವಿಯ ಪಾದದಡಿಯಲ್ಲಿಯೇ ರಾಕಿಭಾಯ್ ಗರುಡನ ವಧೆ ಮಾಡುತ್ತಾನೆ. ಸಂಪೂರ್ಣ ಕತ್ತಲಲ್ಲಿ. ಸಲಾರ್‌ನಲ್ಲಿ ಅದೇ ರೀತಿ ಕಾಳಿ ಮಾತೆಯ ದಿವ್ಯ ರೂಪ ತೋರಿಸಲಿದ್ದಾರಂತೆ ಎಂತಲೂ ಸುದ್ದಿಯಾಗುತ್ತಿದೆ.

ಇನ್ನು ಸಲಾರ್‌ ಸಿನಿಮಾದ ವಿತರಣೆ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ. ಸಿನಿಮಾವನ್ನು ಭರ್ಜರಿಯಾಗಿ ಬಿಡುಗಡೆ ಮಾಡುವುದಕ್ಕೆ ಪ್ರತ್ಯಾಂಗೀರ್‌ ಸಿನಿಮಾಸ್‌ ಭಾರೀ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲೆಡೆ ಸಿನಿಮಾ ಬಿಡುಗಡೆಗೆ ಮೊದಲೇ ಭಾರೀ ಸದ್ದು ಮಾಡುತ್ತಿದ್ದು, ಈ ಸಿನಿಮಾ ಪ್ರಭಾಸ್‌ಗೆ ಮತ್ತೆ ಒಳ್ಳೆಯ ಫೇಮ್‌ ಒಂದನ್ನು ತಂದುಕೊಡುವ ನಿರೀಕ್ಷೆಯಿದೆ. ಬಹು ನಿರೀಕ್ಷೆಯ ಸಲಾರ್‌ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್‌ ಅವರು ನಾಯಕ ನಟಿಯಾಗಿದ್ದಾರೆ. ಪೃಥ್ವಿರಾಜ್‌ ಸುಕುಮಾರನ್‌, ಜಗಪತಿ ಬಾಬು, ಈಶ್ವರಿ ರಾವ್‌ ಸೇರಿ ಅನೇಕರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಅವರು ನಿರ್ಮಾಣ ಜವಾಬ್ದಾರಿ ಹೊತ್ತಿರುವ ಸಿನಿಮಾಕ್ಕೆ ಕೆಜಿಎಫ್‌ ಖ್ಯಾತಿಯ ರವಿ ಬಸ್ರೂರು ಅವರು ಸಂಗೀತ ನಿರ್ದೇಶಕರಾಗಿದ್ದಾರೆ..

Exit mobile version