Site icon Vistara News

ನಟಿ ಐಶ್ವರ್ಯಾ- ಉಮಾಪತಿ ನಿಶ್ಚಿತಾರ್ಥ, ಡಿಸೆಂಬರ್‌ನಲ್ಲಿ ಅರ್ಜುನ್ ಸರ್ಜಾ ಪುತ್ರಿಯ ಮದುವೆ

Aishwarya-Umapati engagement, Arjun Sarja daughter's Marriage in December

ಬೆಂಗಳೂರು: ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ, ‘ಆ್ಯಕ್ಷನ್ ಕಿಂಗ್’ (Action King) ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಅವರ ನಿಶ್ಚಿತಾರ್ಥವು ತಮಿಳುನಾಡಿನ ಚೆನ್ನೈಲ್ಲಿ ಶುಕ್ರವಾರ ನೆರವೇರಿತು. ತಮಿಳು ಚಿತ್ರರಂಗದ ಲೆಜಂಡರಿ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ(umapathy ramaiah) ಜತೆಗೆ ಐಶ್ವರ್ಯಾ ಅವರ ನಿಶ್ಚಿತಾರ್ಥ (Engagement Event) ನಡೆದಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಪ್ರಸಿದ್ಧ ನಟ ಧ್ರುವ ಸರ್ಜಾ (Dhruva Sarja) ಸೇರಿದಂತೆ ಇಡೀ ಕುಟುಂಬವು ಭಾಗಿಯಾಗಿತ್ತು. ಡಿಸೆಂಬರ್ ತಿಂಗಳಲ್ಲಿ ವಿವಾಹ ನೆರವೇರಲಿದೆ. ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ರಾಮಯ್ಯ ಅವರು ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು.

ನಿಶ್ಚಿತಾರ್ಥ ಮಾಡಿಕೊಂಡ ಐಶ್ವರ್ಯಾ ಪ್ರೇಮ ಬರಹ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ಚಂದನ್ ಕುಮಾರ್ ನಾಯಕ ನಟರಾಗಿ ನಟಿಸಿದ್ದರು. ತಂದೆ ಅರ್ಜುನ್ ಸರ್ಜಾ ಅವರೇ ಚಿತ್ರವನ್ನು ನಿರ್ದೇಶನ ಮಾಡಿದ್ದರು.

80-90ರ ದಶಕದ ಪ್ರಮುಖ ನಾಯಕರಲ್ಲಿ ಒಬ್ಬರಾದ ಅರ್ಜುನ್ ಸರ್ಜಾ ಬಹುಭಾಷಾ ನಟ. 1998ರಲ್ಲಿ ಆಶಾ ರಾಣಿ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಅಂಜನಾ ಇಬ್ಬರು ಪುತ್ರಿಯರು. ʼಪ್ರೇಮ ಬರಹʼ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಪದಾರ್ಪಣೆ ಮಾಡಿದರು. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಜತೆಗೆ ಐಶ್ವರ್ಯ ತೆರೆ ಹಂಚಿಕೊಳ್ಳಲಿದ್ದಾರೆ. ಇದು ತೆಲುಗು ಸಿನಿಮಾವಾಗಿದೆ. ಅರ್ಜುನ್ ಸರ್ಜಾ ನಿರ್ಮಾಣ ಹಾಗೂ ನಿರ್ದೇಶನವಿದೆ.

ಈ ಸುದ್ದಿಯನ್ನೂ ಓದಿ: Amala Paul: ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಎರಡನೇ ಮದುವೆಗೆ ರೆಡಿ; ನಿಶ್ಚಿತಾರ್ಥ ಫೋಟೊ ವೈರಲ್‌!

ರಾಷ್ಟ್ರಪ್ರಶಸ್ತಿ ವಿಜೇತ ನಟ-ನಿರ್ದೇಶಕ ತಂಬಿ ರಾಮಯ್ಯ ಅವರ ಪುತ್ರ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಐಶ್ವರ್ಯ ಸರ್ಜಾ ಬಹಳ ಸಮಯದಿಂದ ಡೇಟಿಂಗ್‌ ನಡೆಸುತ್ತಿದ್ದರು ಎಂದು ವರದಿಯಾಗಿತ್ತು. ಎರಡೂ ಕುಟುಂಬಗಳ ಆಶೀರ್ವಾದದೊಂದಿಗೆ ಅವರು ಶೀಘ್ರದಲ್ಲೇ ಮದುವೆಯಾಗುತ್ತಿದ್ದಾರೆ.

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ. ಇದೀಗ ಈ ಜೋಡಿಯ ಸಂಬಂಧಕ್ಕೆ ಹಿರಿಯರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version