Site icon Vistara News

Aishwaryaa Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಮಗಳು ಐಶ್ವರ್ಯಾ ಮನೆಯಲ್ಲಿ ಕಳ್ಳತನ

Aishwaryaa Rajinikanth files complaint after her jewellery get stolen

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯಾ ರಜನಿಕಾಂತ್ (Aishwaryaa Rajinikanth) ಮನೆಯಲ್ಲಿ ಕಳ್ಳತನವಾಗಿದೆ. ಚೆನ್ನೈನ ಮನೆಯ ಲಾಕರ್‌ನಲ್ಲಿದ್ದ 60 ಪವನ್ ಚಿನ್ನ ಮತ್ತು ವಜ್ರದ ಆಭರಣಗಳು ತನಾಪತ್ತೆಯಾಗಿದ್ದು, ತೆನಾಂಪೇಟೆ ಪೊಲೀಸರಿಗೆ ಅವರು ದೂರು ನೀಡಿದ್ದಾರೆ. ಎಫ್‌ಐಆರ್ ಪ್ರಕಾರ, ಐಶ್ವರ್ಯ ಅವರು ಆಭರಣವನ್ನು ಲಾಕರ್‌ನಲ್ಲಿ ಇರಿಸಿದ್ದರು ಮತ್ತು ಆ ಬಗ್ಗೆ ಮನೆಯ ಕೆಲವು ಕೆಲಸದವರಿಗೆ ತಿಳಿದಿತ್ತು ಎಂದು ಹೇಳಿದ್ದಾರೆ. ಸದ್ಯ ತೇನಂಪೇಟೆ ಪೊಲೀಸರು ಐಪಿಸಿ ಸೆಕ್ಷನ್ 381 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಐಶ್ವರ್ಯಾ ರಜನಿಕಾಂತ್ ಅವರು ಚಿನ್ನಾಭರಣ ಕಳ್ಳತನದ ಬಗ್ಗೆ ತೇನಾಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2019ರಲ್ಲಿ ಸಹೋದರಿ ಸೌಂದರ್ಯ ಅವರ ಮದುವೆಯಲ್ಲಿ ಆಭರಣಗಳನ್ನು ಕೊನೆಯದಾಗಿ ಧರಿಸಿದ್ದರು. ಮದುವೆಯ ನಂತರ ಅವುಗಳನ್ನು ತನ್ನ ಬಳಿಯಿದ್ದ ಲಾಕರ್‌ನಲ್ಲಿ ಇರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 60 ಪವನ್ ಚಿನ್ನ, ವಜ್ರದ ಅಭರಣ ಮತ್ತು 3ಲಕ್ಷಕ್ಕೂ ಅಧಿಕ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿಸಿದ್ದಾರೆ. ತೆನಾಂಪೇಟೆ ಪೊಲೀಸರು ಐಪಿಸಿ ಸೆಕ್ಷನ್ 381 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆಘಾತಕ್ಕೊಳಗಾದ ರಜನಿಕಾಂತ್‌ ಪುತ್ರಿ

ಲಾಕರ್ ಅನ್ನು 2021 ರಲ್ಲಿ ಮೂರು ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 2021 ಆಗಸ್ಟ್ 21ರಂದು, ಲಾಕರ್ ಅನ್ನು ಸಿಐಟಿ ನಗರದಲ್ಲಿರುವ ಮಾಜಿ ಪತಿ ಧನುಷ್ ಅವರ ಫ್ಲಾಟ್‌ಗೆ ಇರಿಸಲಾಗಿತ್ತು. ಬಳಿಕ ಸೆಪ್ಟೆಂಬರ್‌ನಲ್ಲಿ ಚೆನ್ನೈನ ಸೇಂಟ್ ಮೇರಿಸ್ ರಸ್ತೆಯಲ್ಲಿರುವ ಅವರ ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರಿಸಲಾಗಿದೆ. 2022ರಲ್ಲಿ ಲಾಕರ್ ಅನ್ನು ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಲಾಕರ್‌ನ ಕೀಗಳು ಸೇಂಟ್ ಮೇರಿಸ್ ರಸ್ತೆಯಲ್ಲಿರುವ ಅವರ ಫ್ಲಾಟ್‌ನಲ್ಲಿ ಉಳಿದಿವೆ. 2023 ಫೆಬ್ರವರಿ 10ರಂದು ಐಶ್ವರ್ಯಾ ಲಾಕರ್ ಅನ್ನು ತೆರೆದಾಗ, 18 ವರ್ಷಗಳಲ್ಲಿ ಸಂಗ್ರಹವಾದ ಕೆಲವು ಆಭರಣಗಳು ಕಾಣೆಯಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ವಜ್ರದ ಸೆಟ್, ಪುರಾತನ ಕಾಲದ ಚಿನ್ನಾಭರಣಗಳು, ನವರತ್ನಂ ಸೆಟ್‌ಗಳು, ಬಳೆಗಳು ಸೇರಿದಂತೆ ಸುಮಾರು 3.60 ಲಕ್ಷ ರೂ. ಮೌಲ್ಯದ ಸುಮಾರು 60 ಪವನ್ ಚಿನ್ನಾಭರಣ ಕಳ್ಳತನವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲೇ ರಜನಿಕಾಂತ್‌ Top Tax payer, ಹಾಗಿದ್ದರೆ ಅವರ ವಾರ್ಷಿಕ ಆದಾಯ ಎಷ್ಟು?

ದೂರಿನಲ್ಲಿ, ಐಶ್ವರ್ಯಾ ತನ್ನ ಮನೆ ಕೆಲಸಗಾರರಾದ ಈಶ್ವರಿ, ಲಕ್ಷ್ಮಿ ಮತ್ತು ಡ್ರೈವರ್ ವೆಂಕಟ್, ಸೇಂಟ್ ಮೇರಿಸ್ ರಸ್ತೆಯಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ಗೆ ಆಗಾಗ ಭೇಟಿ ನೀಡುತ್ತಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಬರೆದಿದ್ದಾರೆ. ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದಾರೆ.

ಐಶ್ವರ್ಯಾ ರಜನಿಕಾಂತ್ ಅವರು ಲಾಲ್ ಸಲಾಂ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಕಮ್‌ಬ್ಯಾಕ್‌ ಆಗುತ್ತಿದ್ದಾರೆ. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಜನಿಕಾಂತ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ವಿವರಗಳು ಶೀಘ್ರದಲ್ಲೇ ಹೊರಬೀಳಲಿವೆ.

Exit mobile version