Site icon Vistara News

Ajaneesh Loknath | ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅಪಹರಣದ ಫೋಟೊ ವೈರಲ್‌!

Ajaneesh Loknath (kidnap photi viral )

ಬೆಂಗಳೂರು: ವಿಭಿನ್ನ ಪ್ರಚಾರದ ಮೂಲಕವೇ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಮೋಷನಲ್ ಟೀಸರ್ ಈ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಇದೀಗ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ (Ajaneesh Loknath) ಅವರನ್ನು ಥಳಿಸಿ, ಕೈ ಕಟ್ಟಿ, ಗನ್ ಹಿಡಿದು ನಿಂತ ಉಗ್ರರ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಫೋಟೊ ಅಸಲಿ ಕಥೆ ಬೇರೆಯೇ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೊ ಇದಾಗಿದೆ.

ಸ್ವತಃ ಈ ಫೋಟೊವನ್ನು ಅಜನೀಶ್‌ ಅವರು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಚಿತ್ರದ ಪ್ರಮೋಷನ್‌ಗೆ ಅಜನೀಶ್‌ ಅವರು ಸಾಥ್‌ ನೀಡಿದ್ದಾರೆ. ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದ ಪೋಸ್ಟರ್ ಈ ಹಿಂದೆ ಲಾಂಚ್ ಮಾಡಿದ್ದರು. ಸ್ಯಾಂಡಲ್‌ವುಡ್‌ ಕ್ವೀನ್‌ ಮೋಹಕ ತಾರೆ ರಮ್ಯಾ ಅವರು ಈ ಹಿಂದೆ ಚಿತ್ರದ ಪ್ರಚಾರ ಕಾರ್ಯಕ್ಕೆ ಸಾಥ್‌ ನೀಡಿದ್ದರು. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದರೆ, ಇಂಟರೆಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಇದೀಗ ಆ ಸಾಲಿಗೆ ಅಜನೀಶ್ ಲೋಕನಾಥ್ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ | Ramya Actress | ʻಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರಕ್ಕೆ ಮೋಹಕ ತಾರೆ ರಮ್ಯಾ ಸಾಥ್‌!

ಯೂತ್‌ ಸಬ್ಜೆಕ್ಟ್ ಒಳಗೊಂಡ ಈ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭಾವಂತರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜತೆಗೆ ಸ್ಯಾಂಡಲ್‌ವುಡ್‌ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಯೋಜನೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಈ ಚಿತ್ರಕ್ಕಿದೆ.

ಇದನ್ನೂ ಓದಿ | Actress Ramya | ನಟಿ ರಮ್ಯಾಗಾಗಿ ಹಾಸ್ಟೆಲ್‌ ಹುಡುಗರ ಪ್ರತಿಭಟನೆ: ವೈರಲ್‌ ಆಯ್ತು ವಿಡಿಯೊ!


Exit mobile version