Site icon Vistara News

Ajay Rao | ʻಯುದ್ಧಕಾಂಡʼ ಚಿತ್ರದಲ್ಲಿ ಅಜಯ್ ರಾವ್: ಲಾಯರ್ ಪಾತ್ರದಲ್ಲಿ ಮಿಂಚಲಿದ್ದಾರೆ ನಟ

Ajay Rao (yuddhakaanda)

ಬೆಂಗಳೂರು : ʻತಾಜ್ ಮಹಲ್ʼ, ʻಕೃಷ್ಣ ಲೀಲಾʼ, ʻಕೃಷ್ಣ ರುಕ್ಮಿಣಿʼ ಖ್ಯಾತಿಯ ನಟ ಅಜಯ್ ರಾವ್ (Ajay Rao) ಸ್ಯಾಂಡಲ್‌ವುಡ್‌ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ.

ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಆ್ಯಂಡ್‌ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು.

ಇದನ್ನೂ ನೋಡಿ | Actor Ajay Rao | ದೀಪಾವಳಿಗೆ ನಟ ಅಜಯ್‌ ರಾವ್‌ ಹೊಸ ಚಿತ್ರ ಘೋಷಣೆ, ಫಿಲ್ಮ್‌ ಹೆಸರೇನು?

‘ʻಯುದ್ಧಕಾಂಡ ಎಂದಾಗ ಎಲ್ಲರಿಗೂ ನೆನಪಾಗುವುದು ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಅವರ ಸಿನಿಮಾ. ʻʻಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಜತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ, ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡುವಾಗ ಮೊದಲು ರವಿಚಂದ್ರನ್‌ ಅವರನ್ನು ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಆಶೀರ್ವಾದ ಮಾಡಿದರು. ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲʼʼ ಎಂದು ಅಜಯ್ ರಾವ್ ಮಾಹಿತಿ ಹಂಚಿಕೊಂಡರು.

ʻʻಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನೂ ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೊ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ʻಕೃಷ್ಣ ಲೀಲಾʼ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆʼʼ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದರು ಅಜಯ್ ರಾವ್.

‘ಯುದ್ಧಕಾಂಡ’ ಸಿನಿಮಾವನ್ನು ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ನೋಡಿ | Rashmika Mandanna | ದಳಪತಿ ವಿಜಯ್‌-ರಶ್ಮಿಕಾ ಮಂದಣ್ಣ ಕಾಂಬಿನೇಶನ್‌ ಸಿನಿಮಾಗೆ ನೋಟಿಸ್‌

Exit mobile version