Site icon Vistara News

Akhil Akkineni: ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ‘ಏಜೆಂಟ್’ ಹೊಸ ಪೋಸ್ಟರ್ ರಿಲೀಸ್; ಏಪ್ರಿಲ್ 28ಕ್ಕೆ ತೆರೆಗೆ

Akhil Akkineni new birthday poster Agent

ಬೆಂಗಳೂರು: ಟಾಲಿವುಡ್ ಚಿತ್ರರಂಗದ ಭರವಸೆಯ ನಾಯಕ ನಟ ಅಖಿಲ್ ಅಕ್ಕಿನೇನಿ (Akhil Akkineni) ಹಾಗೂ ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ ಕಾಂಬಿನೇಶನ್‌ ಸಿನಿಮಾ ‘ಏಜೆಂಟ್’ ಬಿಡುಗಡೆಗೆ ಸಜ್ಜಾಗಿದೆ. ಟಾಲಿವುಡ್ ಅಂಗಳದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಏಪ್ರಿಲ್ 28ಕ್ಕೆ ತೆರೆಗೆ ಬರುತ್ತಿದೆ. ಮೇಕಿಂಗ್ ವಿಡಿಯೊ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಹೊಸ ಪೋಸ್ಟರ್ ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ರಿಲೀಸ್ ಆಗಿದೆ. ಅಖಿಲ್ ಏಪ್ರಿಲ್ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

ಕೈಯಲ್ಲಿ ಗನ್ ಹಿಡಿದು ಸ್ಟೈಲಿಶ್ ಲುಕ್‌ನಲ್ಲಿ ಅಖಿಲ್ ಎಂಟ್ರಿ ಕೊಟ್ಟಿರುವ ಪೋಸ್ಟರ್ ಕಿಚ್ಚು ಹಚ್ಚಿದೆ. ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಪ್ರಮೋಷನ್ ಕಿಕ್ ಸ್ಟಾರ್ಟ್ ಕೊಟ್ಟಿದೆ. ನಿರ್ದೇಶಕ ಸುರೇಂದರ್ ರೆಡ್ಡಿ ಏಜೆಂಟ್ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ವಿಭಿನ್ನವಾಗಿ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಚಿತ್ರದಲ್ಲಿ ಸಾಕ್ಷಿ ವೈದ್ಯ ಅವರು ಅಖಿಲ್ ಅಕ್ಕಿನೇನಿ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್‌ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Agent Movie | ಏಜೆಂಟ್‌ಗೆ ಸಾಥ್‌ ಕೊಟ್ಟ ಕಿಚ್ಚ ಸುದೀಪ್‌ ಹಾಗೂ ಶಿವ ಕಾರ್ತಿಕೇಯನ್: ಟೀಸರ್ ಔಟ್

ಚಾಕೊಲೇಟ್ ಬಾಯ್ ಅವತಾರದಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟ ಇದೇ ಮೊದಲ ಬಾರಿಗೆ ಈ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಇನ್ನೂ ಗಮನಿಸಬೇಕಾದ ಸಂಗತಿಯೆಂದರೆ, ಅವರು ತಮ್ಮ ತೂಕವನ್ನು ಕಳೆದುಕೊಂಡಿದ್ದಾರೆ.

ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಸೂಲ್ ಎಲ್ಲೂರು ಛಾಯಾಗ್ರಹಣ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದೆ. ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Exit mobile version