ಬೆಂಗಳೂರು: ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ʻಅನಿಮಲ್ʼ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಾಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಇದೀಗ ಅಲ್ಲು ಅರ್ಜುನ್ ಅವರು ತ್ರಿವಿಕ್ರಮ್ ಜತೆ ಕೈ ಜೋಡಿಸಿದ್ದಾರೆ.
ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಈ ಜೋಡಿ ನಾಲ್ಕನೇ ಚಿತ್ರಕ್ಕೆ ಸಜ್ಜಾಗಿದ್ದಾರೆ. ಬಹಳ ದಿನಗಳಿಂದಲೂ ಅಲ್ಲು-ತ್ರಿವಿಕ್ರಮ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಗಾಸಿಪ್ಗೆ ಅಧಿಕೃತ ಮುದ್ರೆ ಬಿದ್ದಿದೆ.
ಗುರು ಪೂರ್ಣಿಮಾ ದಿನದ ಅಂಗವಾಗಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಹೊಸ ಸಿನಿಮಾ ಅನೌನ್ಸ್ ಆಗಿದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದ್ದು, ಅದಕ್ಕೆ ಬೇಕಾದ ಎಲ್ಲ ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: Thalapathy Vijay: ಪೂಜಾ ಹೆಗ್ಡೆ ಜತೆ `ಬುಟ್ಟಬೊಮ್ಮ’ ಸ್ಟೆಪ್ ಹಾಕೋ ವೇಳೆ ನಾಚಿ ನೀರಾದ ದಳಪತಿ ವಿಜಯ್!
ಅಲ ವೈಕುಂಠಪುರಮುಲೂ ಸಿನಿಮಾದಂತಹ ಭರ್ಜರಿ ಹಿಟ್ ಕೊಟ್ಟಿರುವ ಹಾರಿಕಾ ಮತ್ತು ಹಾಸನ್ ಕ್ರಿಯೇಷನ್ಸ್ ಹಾಗೂ ಗೀತಾ ಆರ್ಟ್ಸ್ ಬ್ಯಾನರ್ ನಡಿಯಲ್ಲಿಯೇ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ನಾಲ್ಕನೇ ಸಿನಿಮಾ ತಯಾರಾಗಲಿದೆ. ಈಗಾಗಲೇ ಸೂಪರ್ ಹಿಟ್ ಜೋಡಿ ಎನಿಸಿಕೊಂಡಿರುವ ಇವರಿಬ್ಬರು ಮತ್ತೆ ಒಂದಾಗಿರುವುದು ಭಾರೀ ನಿರೀಕ್ಷೆ ಹೆಚ್ಚಿಸಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಪ್ ಡೇಟ್ ಕೊಡಲಿದೆ.
ಸದ್ಯ ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಫಹಾದ್ ಫಾಸಿಲ್, ಅನುಸೂಯ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಪ್ರೊಡಕ್ಷನ್ ನಡಿ ಮೂಡಿಬರುತ್ತಿರುವ ಪುಷ್ಪ-2 ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.