Site icon Vistara News

Rishab Shetty: ಶ್ರೀರಾಮ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ, ಇದು ನನ್ನ ಪೂರ್ವ ಜನ್ಮದ ಪುಣ್ಯ: ರಿಷಬ್ ಶೆಟ್ಟಿ

aLord Rama has called me to come to Ayodhya Rishabh Shetty

ಬೆಂಗಳೂರು: ಅಯೋಧ್ಯೆ ರಾಮ ಮಂದಿರ (Ayodhya Ram Mandir)ದಲ್ಲಿ ನಡೆಯುವ ‘ಪ್ರಾಣ ಪ್ರತಿಷ್ಠಾ’ (Pran prathishtaಸಮಾರಂಭ ಜ.22ರಂದು ಅದ್ಧೂರಿಯಾಗಿ ನಡೆಯಲಿದೆ. ಈಗಾಗಲೇ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಲವಾರು ಸೆಲೆಬ್ರಿಟಿಗಳಿಗೆ ಆಹ್ವಾನಗಳು ಬಂದಿದ್ದು, ಕನ್ನಡದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೂ ಆಹ್ವಾನ ನೀಡಲಾಗಿದೆ. ಅಧಿಕೃತವಾಗಿ ಆಹ್ವಾನ ಸ್ವೀಕರಿಸಿರುವ ಫೋಟೋವನ್ನು ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ʻಶ್ರೀರಾಮ ಜಯ ರಾಮ ಜಯ ಜಯ ರಾಮ… ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮ ಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ! ಶ್ರೀರಾಮನಿಗೆ ಜಯವಾಗಲಿ, ಅಯೋಧ್ಯೆಗೆ ಜಯವಾಗಲಿ- ರಿಷಬ್​ಶೆಟ್ಟಿ ” ಎಂದು ಪೋಸ್ಟರ್ ಒಂದನ್ನು ಶೇರ್ ಮಾಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠೆ, ಅಮೆರಿಕದ ದೇವಾಲಯಗಳಲ್ಲೂ ಸಂಭ್ರಮವೋ ಸಂಭ್ರಮ!

ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಸಮಾರಂಭದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೇಶದ ರಾಜಧಾನಿ ನವ ದೆಹಲಿಯಲ್ಲಿಯೂ ಅಂದು ದೇಗುಲಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ರಣಬೀರ್ ಕಪೂರ್, ಆಲಿಯಾ ಭಟ್, ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ಕಂಗನಾ ರಣಾವತ್, ಅಮಿತಾಭ್ ಬಚ್ಚನ್ ಸೇರಿದಂತೆ ಸೌತ್‌ ನಟರುಗಳಿಗೆ ಆಹ್ವಾನ ಬಂದಿದೆ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ 55 ದೇಶಗಳಿಂದ ಸುಮಾರು 100ಕ್ಕೂ ಅಧಿಕ ಗಣ್ಯರು ಅಯೋಧ್ಯೆಗೆ ಆಗಮಿಸಲಿದ್ದಾರೆ. ಜರ್ಮನಿ, ಫಿಜಿ, ಫಿನ್‌ಲ್ಯಾಂಡ್‌, ಅಮೆರಿಕ, ಬ್ರಿಟನ್‌, ಜರ್ಮನಿ, ಇಂಡೋನೇಷ್ಯಾ, ಐರ್ಲೆಂಡ್‌, ಜಪಾನ್‌, ಕೀನ್ಯಾ, ಕೊರಿಯಾ, ಮಾರಿಷಸ್‌, ನಾರ್ವೆ ಸೇರಿ 55 ದೇಶಗಳ ಗಣ್ಯರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಂಗಾಪುರ, ಸ್ಪೇನ್‌, ಶ್ರೀಲಂಕಾ, ಜಾಂಬಿಯಾ, ವಿಯೇಟ್ನಾಂ, ಉಗಾಂಡ, ವೆಸ್ಟ್‌ ಇಂಡೀಸ್‌ ದೇಶಗಳ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ. ವಿದೇಶಗಳಿಂದ ಆಗಮಿಸುವ ಎಲ್ಲ ಗಣ್ಯರು ಜನವರಿ 21ರಂದೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Exit mobile version