Anchor Aparna: ಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿ 'ಮಜಾ ಟಾಕೀಸ್' ನಿಂದ ಹೊರ ಬರಲು ನಿರ್ಧರಿಸಿದ್ದೇಕೆ? - Vistara News

ಸಿನಿಮಾ

Anchor Aparna: ಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿ ‘ಮಜಾ ಟಾಕೀಸ್’ ನಿಂದ ಹೊರ ಬರಲು ನಿರ್ಧರಿಸಿದ್ದೇಕೆ?

Anchor Aparna: ‘ಮಜಾ ಟಾಕೀಸ್’ ಮೂಲಕ ʻಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿʼ ಎಂಬ ಖ್ಯಾತಿಯನ್ನೂ ಗಳಿಸಿದ್ದರು. ಈ ಕಾರ್ಯಕ್ರಮದಲ್ಲಿ ತಮ್ಮ ಹಾಸುದ ಮೂಲಕ ನೋಡುಗರನ್ನು ರಂಜಿಸಿದ್ದರು. ಮೊದಲಿಗೆ ‘ಮಜಾ ಟಾಕೀಸ್‌;ಗೆ ಬರಲು ಒಲ್ಲದ ಅಪರ್ಣಾ ಅವರಿಗೆ ಮನವೊಲಿಸಿದ್ದು ಸೃಜನ್‌ ಲೋಕೇಶ್‌.

VISTARANEWS.COM


on

Anchor Aparna decided to quit Maja Talkies What is the reason
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ನಾಡು ಕಂಡ ನಿರೂಪಕಿ, ನಟಿ ಅಪರ್ಣಾ (Anchor Aparna) ಬಾರದ ಲೋಕಕ್ಕೆ ಹೋಗಿದ್ದಾರೆ. ಸಿನಿಮಾ, ಧಾರಾವಾಹಿ, ದೂರದರ್ಶನ ನಿರೂಪಣೆ, ಆಕಾಶವಾಣಿ, ವೇದಿಕೆ ಕಾರ್ಯಕ್ರಮ ಹೀಗೆ ಎಲ್ಲೆಡೆಯೂ ಮಿಂಚಿದ್ದ ಅಪರ್ಣಾ, ‘ಮಜಾ ಟಾಕೀಸ್’ ಮೂಲಕ ʻಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿʼ ಎಂಬ ಖ್ಯಾತಿಯನ್ನೂ ಗಳಿಸಿದ್ದರು. ಈ ಕಾರ್ಯಕ್ರಮದಲ್ಲಿ ತಮ್ಮ ಹಾಸುದ ಮೂಲಕ ನೋಡುಗರನ್ನು ರಂಜಿಸಿದ್ದರು. ಮೊದಲಿಗೆ ‘ಮಜಾ ಟಾಕೀಸ್‌;ಗೆ ಬರಲು ಒಲ್ಲದ ಅಪರ್ಣಾ ಅವರಿಗೆ ಮನವೊಲಿಸಿದ್ದು ಸೃಜನ್‌ ಲೋಕೇಶ್‌.

ಮಜಾ ಟಾಕೀಸ್‌ ವೇದಿಕೆಯಲ್ಲಿ ಸ್ವೀಟ್ 16 ಕ್ಯಾರೆಕ್ಟರ್ ಎಂದು ‘ಒನ್ ಅಂಡ್ ಒನ್ಲಿ ವರಲಕ್ಷ್ಮಿ’ ಪಾತ್ರಕ್ಕೆ ಜೀವ ತುಂಬಿ ವೀಕ್ಷಕರ ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದವರು ಅಪರ್ಣಾ. ಸಲ್ಮಾನ್ ಖಾನ್, ಶಾರುಖ್ ಖಾನ್ ಹೀಗೆ ಅನೇಕ ದೊಡ್ಡ ದೊಡ್ಡ ಗಣ್ಯರ ಹೆಸರುಗಳನ್ನು ಬಳಸಿ ಕಾಮಿಡಿ ಮಾಡಿ ನೋಡುಗರನ್ನು ರಂಜಿಸುತ್ತಿದ್ದರು. ಆದರೆ ‘ಮಜಾ ಟಾಕೀಸ್‌;ಗೆ ಬರಲು ಒಲ್ಲದ ಅಪರ್ಣಾ ಅವರಿಗೆ ಮನವೊಲಿಸಿದ್ದು ಸೃಜನ್‌ ಲೋಕೇಶ್‌.

ಈ ಕಾರ್ಯಕ್ರಮ ಮಾಡುತ್ತಿರುವಾಗ ಅಪರ್ಣಾ ಅವರಿಗೆ ನೆಟ್ಟಿಗರು ಟ್ರೋಲ್‌ ಮಾಡುತ್ತಾರೆ. ಕೆಟ್ಟ ಕಮೆಂಟ್‌ ಮಾಡುತ್ತಾರೆ. ಇದೆಲ್ಲ ನೋಡಿ ಬೇಸರಗೊಂಡು ಕಾರ್ಯಕ್ರಮಕ್ಕೆ ಬರದಿರಲು ನಿರ್ಧಾರ ಮಾಡುತ್ತಾರೆ. ಆದರೆ ಆಗ ಅವರ ಮನವೊಲಿಸಿದ್ದು ಸೃಜನ್‌ ,ಲೋಕೇಶ್‌. ಎಂಬತ್ತು ಜನ ಚೆನ್ನಾಗಿ, ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ. ನಿಮಗೆ ಈ ಎಂಬತ್ತು ಜನರ ಕಮೆಂಟ್‌ಗಳು ಮುಖ್ಯನಾ? ಅಥವಾ ನೆಗೆಟಿವ್ ಮಾತನಾಡಿರುವ ಇಪ್ಪತ್ತು ಜನರ ಅಭಿಪ್ರಾಯ ಮುಖ್ಯನಾ? ವರಲಕ್ಷ್ಮಿ ಕ್ಲಿಕ್ ಆಗುತ್ತಾಳೆ ಎಂಬ ನಂಬಿಕೆ ಇದ್ದರೆ ಇರಿ. ಇಲ್ಲ ಅಂದರೆ ಬೇಡ ಎಂದು ಸೃಜನ್ ಲೋಕೇಶ್ ಅಪರ್ಣಾ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಆ ನಂತರ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರಿದರು.

ಇದನ್ನೂ ಓದಿ: Anchor Aparna: ಅಪರ್ಣಾ ಕೊನೆ ಆಸೆ ಏನಾಗಿತ್ತು? ಕನಸು ಈಡೇರುವ ಮುನ್ನವೇ ಕಣ್ಮುಚ್ಚಿದ ನಟಿ!

ವರಲಕ್ಷ್ಮೀ ಪಾತ್ರ ಜನ ಮನ ಗೆದ್ದ ನಂತರ ಚಿತ್ರರಂಗದಿಂದ ಅನೇಕ ಅವಕಾಶಗಳು ಅಪರ್ಣಾ ಅವರನ್ನು ಹುಡುಕಿಕೊಂಡು ಹೋಗಿದ್ದವು. ಕಾಮಿಡಿ ಸಿನಿಮಾಗಳಲ್ಲಿ ಅಭಿನಯಿಸುವ ಚಾನ್ಸ್ ಅಪರ್ಣಾಗೆ ಸಿಕ್ಕಿತ್ತು. ಆದರೆ, ಅದನ್ನು ಅಪರ್ಣಾ ಒಪ್ಪಿಕೊಳ್ಳಲಿಲ್ಲ.

ಇದೀಗ ಅಪರ್ಣಾ ಬಾರದ ಲೋಕಕ್ಕೆ ಹೋಗಿದ್ದಾರೆ. ಮಜಾ ಟಾಕೀಸ್ ಇಜಿಲಾ , ಇಂದ್ರಜೀತ್‌ ಇದೀಗ ಈ ಬಗ್ಗೆ ಮಾತನಾಡಿ ʻʻನಾನು ಚಿಕ್ಕವನಿದ್ದಾಗಿಂದಲು ಅಪರ್ಣಾ ನನಗೆ ಪರಿಚಯ. ಇತ್ತೀಚಿನ ನಮ್ಮ ತಂದೆಯವರ ಕಾರ್ಯಕ್ರಮ ವನ್ನ ನಡೆಸಿಕೊಟ್ಡಿದ್ದರು. ಅದ್ಭುತವಾದ ನಟಿ. ಅವರ ಮಾತುಗಳನ್ನು ಕೇಳಿಸೊಕೊಳ್ಳುವುದೆ ಖುಷಿಯಾಗ್ತಿತ್ತುʼʼಎಂದು ಹೇಳಿದರು.

ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಮನೆಯ ಬಳಿಯೇ ವ್ಯವಸ್ಥೆ ಮಾಡಲಾಗಿದೆ. ನಂತರ ಕುಟುಂಬದಿಂದ ಅಂತಿಮ ವಿಧಿವಿಧಾನ ಕಾರ್ಯ ನಡೆಯಲಿದೆ. ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ’

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Wayanad Tragedy: ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಗುಡ್ಡಗಾಡು ಪ್ರದೇಶಗಳಲ್ಲಿ ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಮುನ್ನೂರಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ. ನೂರಾರು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಲನಚಿತ್ರೋದ್ಯಮದ ಸೆಲೆಬ್ರಿಟಿಗಳಾದ ಮೋಹನ್‌‌ಲಾಲ್, ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ಸೂರ್ಯ, ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್, ನಟ ವಿಕ್ರಮ್, ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

VISTARANEWS.COM


on

Wayanad Tragedy
Koo

ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ (Wayanad Tragedy )ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ (ಜುಲೈ 30) ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಹಲವು ಜನರು ಸಾವನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಬದುಕುಳಿದವರಲ್ಲಿ ಅನೇಕ ಜನರು ತಮ್ಮ ಮನೆ, ಕುಟುಂಬದವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಚಲನಚಿತ್ರೋದ್ಯಮದ ಹಲವಾರು ಸೆಲೆಬ್ರಿಟಿಗಳು ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಅದಕ್ಕಾಗಿ ತಮ್ಮ ಕೈಲಾದಷ್ಟು ಸಹಾಯ ಹಸ್ತ ನೀಡಿದ್ದಾರೆ.

ಖ್ಯಾತ ನಟ ಮೋಹನ್ ಲಾಲ್ 3 ಕೋಟಿ ರೂ. ನೆರವು ನೀಡಿದ್ದಾರೆ. ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ನಟ ಸೂರ್ಯ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಹಾಗೇ ಮಲಯಾಳಂ ನಟ ದಂಪತಿ ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್ ಕೂಡ ಸಂತ್ರಸ್ತರಿಗೆ ಸಹಾಯ ಮಾಡಲು 25 ಲಕ್ಷ ರೂ. ನೀಡಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿ, “ನಾವು ಸಿಎಂಡಿಆರ್ ಎಫ್ ಗೆ 25 ಲಕ್ಷ ರೂ.ಗಳ ದೇಣಿಗೆ ನೀಡುತ್ತಿದ್ದೇವೆ. ಇದನ್ನು ತೀವ್ರ ಅಗತ್ಯವಿರುವವರಿಗೆ ಅಗತ್ಯತೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂಬುದಾಗಿ ತಿಳಿಸಿದ್ದಾರೆ.

ಹಾಗೇ ಪೊನ್ನಿಯಿನ್ ಸೆಲ್ವನ್ ಪಾರ್ಟ್ 1 ಮತ್ತು ರಾವಣನ್‍ನಂತಹ ಚಿತ್ರಗಳಲ್ಲಿ ನಟಿಸಿದ ಖ್ಯಾತ ತಮಿಳು ನಟ ವಿಕ್ರಮ್ ಭೂಕುಸಿತದ ಸಂತ್ರಸ್ತರಿಗೆ 20 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ಅವರ ಮ್ಯಾನೇಜರ್ ಯುವರಾಜ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

ಅಲ್ಲದೇ ಮಲಯಾಳಂ ನಟ ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ನಟ ದುಲ್ಕರ್ ಸಲ್ಮಾನ್ ಕೂಡ ಪರಿಹಾರ ನಿಧಿಗೆ 35 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ನಟ ಮುಮ್ಮಟಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಅವರ ಚಾರಿಟಬಲ್ ಟ್ರಸ್ಟ್ ತೀವ್ರ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ವಸ್ತುಗಳಾದ ಆಹಾರ ಪದಾರ್ಥಗಳು, ಔಷಧಿಗಳು, ಬಟ್ಟೆಗಳು ಮತ್ತು ಇತರ ಪ್ರಮುಖ ವಸ್ತುಗಳನ್ನು ಪೂರೈಸುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ನಟಿ ರಶ್ಮಿಕಾ ಮಂದಣ್ಣ ಕೂಡ ಸಂತ್ರಸ್ತರಿಗೆ 10 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.

Continue Reading

ಕಾಲಿವುಡ್

Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್‌’ ಸೇರಿದ ಧನುಷ್ ನಟನೆಯ’ರಾಯನ್‌’ ಸಿನಿಮಾ!

Raayan Movie: ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

VISTARANEWS.COM


on

Raayan Movie crosses Rs 100 crore
Koo

ಬೆಂಗಳೂರು: ಧನುಷ್ ಅವರ ‘ರಾಯನ್‌’ ಸಿನಿಮಾ ಎಂಟು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋ ರೂ. ಗಳಿಕೆ ಕಂಡಿದೆ. ‘ಮಹಾರಾಜ’ ಮತ್ತು ‘ಇಂಡಿಯನ್ 2’ ನಂತರ ಜಾಗತಿಕವಾಗಿ ಒಳ್ಳೆಯ ಕಲೆಕ್ಷನ್‌ ಮಾಡಿದ ವರ್ಷದ ಮೂರನೇ ತಮಿಳು ಚಿತ್ರವಾಗಿದೆ.

ತಮಿಳು ಮಾರುಕಟ್ಟೆಯಲ್ಲಿ ಚಿತ್ರಕ್ಕೆ ಯಾವುದೇ ಸ್ಪರ್ಧೆಯಿಲ್ಲ. ಚಿತ್ರವುಭಾರತದಲ್ಲಿ ಸುಮಾರು ರೂ 72.75 ಕೋಟಿ ಗಳಿಕೆ ಮಾಡಿದೆ. ವಿಜಯ್ ಸೇತುಪತಿ ಅಭಿನಯದ ‘ಮಹಾರಾಜ’ ಸಿನಿಮಾದ ಕಲೆಕ್ಷನ್‌ವನ್ನು ವಿಶ್ವದಾದ್ಯಂತ ಮೀರಿಸಲಿದೆ ಎಂದು ವರದಿಯಾಗಿದೆ. ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಸಿನಿಮಾ 145.53 ಕೋಟಿ ರೂ. ಗಳಿಸಿದೆ.

‘ತಮಿಳುನಾಡು ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 50 ಕೋಟಿ ರೂ.ಗಳ ಗಡಿ ದಾಟುವ ಹಂತದಲ್ಲಿದೆ. ಆಗಸ್ಟ್ 3ರ ಎರಡನೇ ಶನಿವಾರದ ಅಂತ್ಯದ ವೇಳೆಗೆ ಚಿತ್ರ ಈ ಸಾಧನೆ ಮಾಡಲಿದೆ. ‘ತಿರುಚಿತ್ರಂಬಲಂ’ ಮತ್ತು ‘ವಾತಿ’ ನಂತರ ‘ರಾಯನ್‌’ ಧನುಷ್ ಅವರ 100 ಕೋಟಿ ರೂ. ಗಳಿಕೆ ಕಂಡ ಸಿನಿಮಾವಿದು.

ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

ಎಸ್.ಜೆ.ಸೂರ್ಯ, ಪ್ರಕಾಶ್ ರಾಜ್, ಸೆಲ್ವರಾಘವನ್, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಸರವಣನ್ ಕೂಡ ಇದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಇದು ವರ್ಷದ ಬಹು ನಿರೀಕ್ಷಿತ ತಮಿಳು ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ A ಸರ್ಟಿಫಿಕೇಟ್‌ ಪಡೆದುಕೊಂಡಿದೆ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻಗೋಪಿಲೋಲ’ನ ಜೊತೆ ಹೆಜ್ಜೆ ಹಾಕಿದ ಜಾಹ್ನವಿ!

Kannada New Movie: ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

VISTARANEWS.COM


on

Kannada New Movie Kann Kann Talking Kai Kai Touching Gopilola
Koo

ಬೆಂಗಳೂರು: ಆರ್ ರವೀಂದ್ರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʻಗೋಪಿಲೋಲ ಸಿನಿಮಾʼದ (Kannada New Movie) ಸ್ಪೆಷಲ್ ನಂಬರ್ ಬಿಡುಗಡೆಯಾಗಿದೆ. ಕಣ್ ಕಣ್ ಟಾಕಿಂಗ್, ಕೈ ಕೈ ಟಚ್ಚಿಂಗ್ ಎಂಬ ಹಾಡಿಗೆ ಕೇಶವ ಚಂದ್ರ ಸಾಹಿತ್ಯ ಬರೆದಿದ್ದು, ಮಿದುನ್ ಅಸೋಕನ್ ಚೆನ್ನೈ ಸಂಗೀತ ಒದಗಿಸಿದ್ದು, ಶಶಾಂಕ್ ಶೇಷಗಿರಿ ಹಾಗೂ ಗೀತಾ ಭಟ್ ಧ್ವನಿಯಾಗಿದ್ದಾರೆ. ಧನಂಜಯ್ ನೃತ್ಯ ಸಂಯೋಜನೆಗೆ ನಾಯಕ ಮಂಜುನಾಥ್ ಅರಸು ಹಾಗೂ ಜಾಹ್ನವಿ ಹೆಜ್ಜೆ ಹಾಕಿದ್ದಾರೆ.

ಸಹಜ ಕೃಷಿ ಹಾಗೂ ಪ್ರೇಮ ಕಥಾ ಹಂದರ ಹೊಂದಿರುವ ಗೋಪಿಲೋಲ ಸಿನಿಮಾಗೆ ಎಸ್.ಆರ್.ಸನತ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರಾಗಿ ನಾಯಕ ಮಂಜುನಾಥ್ ಸಾಥ್ ಕೊಟ್ಟಿದ್ದಾರೆ‌.

ಮಂಜುನಾಥ್ ಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ನಿರ್ದೇಶಕ ಆರ್ ರವೀಂದ್ರ ಈ ಹಿಂದೆ ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇದೀಗ ಗೋಪಿಲೋಲ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರಚಾರ ಕೆಲಸದಲ್ಲಿ ಬ್ಯುಸಿಯಾಗಿದೆ.

Continue Reading

ಕಿರುತೆರೆ

Anchor Shalini: ಅವತ್ತಿನ ಕಾಲಕ್ಕೆ ‘ಪಾಪ ಪಾಂಡು’ ಖ್ಯಾತಿಯ ಶಾಲಿನಿ ಪಡೆಯುತ್ತಿದ್ದ ಸಂಭಾವನೆ ಏಷ್ಟು?

Anchor Shalini: ಸತತ 5 ವರ್ಷಗಳ ಕಾಲ ಈ ಧಾರಾವಾಹಿ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಹೆಂಡತಿ ಅಂದ್ರೆ ಹೆದರುವ ಪುಕ್ಕಲು ಪಾಂಡು ಹಾಗೂ ಖಡಕ್ ಪತ್ನಿ ಶ್ರೀಮತಿ ನಡುವೆ ದಿನಕ್ಕೊಂದು ಕಥೆ ಹೇಳಿ ಧಾರವಾಹಿ ವೀಕ್ಷಕರನ್ನು ರಂಜಿಸಿತ್ತು. ಬಳಿಕ ಇದೇ ತರಹದ ಪಾತ್ರಗಳಿಗೆ ಬ್ರ್ಯಾಂಡ್ ಆಗಿಬಿಟ್ಟರು ಶಾಲಿನಿ. ಆ ಬಗ್ಗೆ ತಮಗೆ ಇನ್ನು ಬೇಸರವಿದೆ ಎಂದು ಶಾಲಿನಿ ಹೇಳಿಕೊಂಡಿದ್ದಾರೆ.

VISTARANEWS.COM


on

Anchor Shalini reveals her paycheck per day for paapa pandu tv serial
Koo

ಬೆಂಗಳೂರು: ಸುವರ್ಣ ಸೂಪರ್ ಸ್ಟಾರ್ (suvarna superstar) ಕಾರ್ಯಕ್ರಮವನ್ನು ಶಾಲಿನಿ (Super Star Shalini) ನಡೆಸಿಕೊಡುತ್ತಿದ್ದಾರೆ. ಈ ಶೋ ನೋಡುವ ಬಹುತೇಕ ಮಹಿಳೆಯರಿಗೆ, ಶಾಲಿನಿ ಇವತ್ತು ಯಾವ ರೀತಿಯ ಬ್ಲೌಸ್‌ ಧರಿಸುತ್ತಾರೆ ಎಂಬುದೇ ಕುತೂಹಲ. ಆ ಕಾರ್ಯಕ್ರಮ ಮಹಿಳೆಯರದ್ದೇ ಆದರೂ ಕೂಡ ಶಾಲಿನಿ ಅವರ ಬ್ಲೌಸ್‌ (suvarna superstar shalini) ಪ್ರಮುಖ ಹೈಲೈಟ್‌. ಇದೀಗ ಶಾಲಿನಿ ಅವರು ಸಂದರ್ಶನವೊಂದರಲ್ಲಿ ತಮ್ಮ ಹಳೆಯ ದಿನಗಳ ಬಗ್ಗೆ ಮೆಲುಕು ಹಾಕಿದ್ದಾರೆ. 23 ವರ್ಷಗಳ ಹಿಂದೆ ‘ಪಾಪ ಪಾಂಡು’ (Anchor Shalini) ಧಾರಾವಾಹಿಯ ಪಾತ್ರದಿಂದ ಮೋಡಿ (papa pandu old serial) ಮಾಡಿದ್ದರು. ಸಿಹಿಕಹಿ ಚಂದ್ರು ಸಾರಥ್ಯದಲ್ಲಿ ಮೂಡಿಬಂದಿದ್ದ ಈ ಧಾರಾವಾಹಿ ಅವತ್ತಿನ ಕಾಲಕ್ಕೆ ಸೂಪರ್ ಹಿಟ್ ಆಗಿತ್ತು.

ಸತತ 5 ವರ್ಷಗಳ ಕಾಲ ಈ ಧಾರಾವಾಹಿ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಹೆಂಡತಿ ಅಂದ್ರೆ ಹೆದರುವ ಪುಕ್ಕಲು ಪಾಂಡು ಹಾಗೂ ಖಡಕ್ ಪತ್ನಿ ಶ್ರೀಮತಿ ನಡುವೆ ದಿನಕ್ಕೊಂದು ಕಥೆ ಹೇಳಿ ಧಾರವಾಹಿ ವೀಕ್ಷಕರನ್ನು ರಂಜಿಸಿತ್ತು. ಬಳಿಕ ಇದೇ ತರಹದ ಪಾತ್ರಗಳಿಗೆ ಬ್ರ್ಯಾಂಡ್ ಆಗಿಬಿಟ್ಟರು ಶಾಲಿನಿ. ಆ ಬಗ್ಗೆ ತಮಗೆ ಇನ್ನು ಬೇಸರವಿದೆ ಎಂದು ಶಾಲಿನಿ ಹೇಳಿಕೊಂಡಿದ್ದಾರೆ.

ಶಾಲಿನಿ ಮಾತನಾಡಿ ʻʻಶಿಖರ ಎನ್ನುವ ಧಾರಾವಾಹಿಯಲ್ಲಿ ನಾನು ಮತ್ತು ಸಿಹಿ ಕಹಿ ಚಂದ್ರು ಅವರು ಅಪ್ಪ ಮಗಳ ರೋಲ್‌ ಮಾಡುತ್ತಿದ್ದೇವು. ನಾನು ಮತ್ತು ಸಿಹಿ ಕಹಿ ಚಂದ್ರು ಅವರು ತುಂಬ ಪುಸ್ತಕಗಳನ್ನು ಓದುತ್ತಿದ್ದೆವು. ಅದರ ಬಗ್ಗೆ ಮಾತನಾಡುತ್ತಿದ್ದೆವು. ಒಂದು ದಿನ ಕಾಲ್‌ ಮಾಡಿ, ಒಂದು ಸೀರಿಯಲ್‌ ಮಾಡುತ್ತ ಇದ್ದೀನಿ. ಬರ್ತೀಯಾ ಎಂದು ಕೇಳಿದರು. ಆಮೇಲೆ ಹೋದೆ. ನಾನು ಹೋದಾಗ ಇದು ಕಾಮಿಡಿ ಸೀರಿಯಲ್ ಅಂದ್ರು. ನನಗೆ ಶಾಕ್ ಆಯಿತು. ಅಲ್ಲಿಯವರೆಗೂ ನಾನು ಗಂಭೀರ ಪಾತ್ರಗಳಲ್ಲೇ ಹೆಚ್ಚು ನಟಿಸಿದ್ದೆ. ನನಗೆ ಕಾಮಿಡಿ ಬರಲ್ಲ ಎಂದೆ. ನಿನಗೆ ಬರುತ್ತೆ ಮಾಡು ಎಂದರು. ಆಡಿಷನ್ ಬಳಿಕ ನೀನು ಸೆಲೆಕ್ಟ್ ಆಗಿದ್ದೀಯಾ. ನೀನೇ ಲೀಡ್ ರೋಲ್, ಶ್ರೀಮತಿ ಅಂತ ಪಾಂಡು ಹೆಂಡಿತಿ ಪಾತ್ರ ಎಂದುಬಿಟ್ಟರುʼʼಎಂದರು.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ʻʻಪಾಪ ಪಾಂಡು ದಿನ ಬರುತ್ತೇ ಎಂದರು. ಗಂಡನ ಬಳಿ ಬಂದು ಹೇಳಿದೆ. ಪಾಪ ಪಾಂಡು ಹೆಸರು ಕೇಳಿ ಬೇಡ ಅಂದರು. 25 ದಿನ ಕೆಲಸ ಅಂದೆ. 2000 ಅಲ್ಲಿ ಆಫೀಸ್‌ ಕೆಲಸಕ್ಕೆ ಹೋಗೊ ತರ ಹೋಗ್ತಿದ್ದೆ. ಒಳ್ಳೆಯ ಸಂಬಳ ಕೂಡ ಇತ್ತು. ಸಿದ್ಲಿಂಗು ಡೈರೆಕ್ಟರ್ ವಿಜಯಪ್ರಸಾದ್ ಆಗ ಧಾರಾವಾಹಿ ನಿರ್ದೇಶಿಸುತ್ತಿದ್ದರು. ದಿನಕ್ಕೆ 1000 ರೂಪಾಯಿಯಿಂದ ಆರಂಭಿಸಿ ಮುಂದೆ ಹೋಗ್ತಾ 1700 ರೂಪಾಯಿವರೆಗೆ ಸಂಭಾವನೆ ಪಡೆಯುತ್ತಿದ್ದೆ. ಬರೋಬ್ಬರಿ 1000ಕ್ಕೂ ಅಧಿಕ ಎಪಿಸೋಡ್‌ಗಳಲ್ಲಿ ಧಾರಾವಾಹಿ ಪ್ರಸಾರವಾಯಿತು.5 ವರ್ಷಗಳ ಕಾಲ ಕಾಮಿಡಿ ಪಾತ್ರದಲ್ಲಿ ನೋಡಿದವರು ಬಳಿಕ ಗಂಭೀರ ಪಾತ್ರದಲ್ಲಿ ನೋಡಲು ಇಷ್ಟಪಡಲಿಲ್ಲ. ಆ ರೀತಿ ಸಂಪೂರ್ಣವಾಗಿ ನನ್ನನ್ನು ಹಾಸ್ಯಪಾತ್ರಕ್ಕೆ ಸೀಮಿತವಾಗಿ ಬಿಟ್ಟೆʼʼಎಂದರು.

Continue Reading
Advertisement
Kavya Maran
ಕ್ರಿಕೆಟ್8 mins ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ36 mins ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್38 mins ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ40 mins ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ58 mins ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ60 mins ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ1 hour ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ1 hour ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ1 hour ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Minister MB Patil statement in janandolana programme by congress party at ramanagara
ಕರ್ನಾಟಕ1 hour ago

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ9 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌