ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ (Anchor Aparna) ಅವರು ಮೃತರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಜುಲೈ 11ರಂದು ನಿಧನರಾಗಿದ್ದಾರೆ. ಅಪರ್ಣಾ ನಿಧನಕ್ಕೆ ಇಡಿ ಸ್ಯಾಂಡಲ್‌ವುಡ್ ಸಂತಾಪ ಸೂಚಿಸಿದೆ. ರಾಗಿಣಿ, ಬಿಗ್ ಬಾಸ್ ಸಿರಿ, ಶ್ವೇತಾ ಚೆಂಗಪ್ಪ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರು ಎಕ್ಸ್ ಮೂಲಕ “ಸ್ವಚ್ಛ ಕನ್ನಡದ ಆ ನಿಮ್ಮ ದನಿ ನಮ್ಮ ನಡುವೆ ಸದಾ ಶಾಶ್ವತ”ಎಂದು ಬರೆದು ಸಂತಾಪ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಗುರುವಾರ (ಜುಲೈ 11) ರಾತ್ರಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರಿನ ಪಂಚನಹಳ್ಳಿ ಗ್ರಾಮದ ಅಪರ್ಣಾ ಕನ್ನಡ ಜನರಿಗೆ ಹತತಿರವಾಗಿದ್ದರು ಎಂದರೆ ತಮ್ಮ ಸುಮಧುರ ಮಾತುಗಳಿಂದ. ಇದೀಗ ನಟಿಯ ಬಗ್ಗೆ ಕಿಚ್ಚ ಪೋಸ್ಟ್ ಮಾಡಿದ್ದು ಹೀಗೆ.
ʻʻಇದು ನಿಜಕ್ಕೂ ದುಃಖಕರ ಸಂಗತಿ. ಅಪರ್ಣಾ ಮೇಡಮ್,,ಸ್ವಚ್ಛ ಕನ್ನಡದ ಆ ನಿಮ್ಮ ದನಿ ನಮ್ಮ ನಡುವೆ ಸದಾ ಶಾಶ್ವತ”. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಆಳವಾದ ಸಂತಾಪಗಳುʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Anchor Aparna: ಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿ ‘ಮಜಾ ಟಾಕೀಸ್’ ನಿಂದ ಹೊರ ಬರಲು ನಿರ್ಧರಿಸಿದ್ದೇಕೆ?
ಕಳೆದ ಒಂದೂವರೆ ವರ್ಷಗಳಿಂದ ಅವರು ನಡೆಸಿದ ಹೋರಾಟದ ಬಗ್ಗೆಯೂ ಪತಿ ನಾಗರಾಜ್ ಅವರೂ ತಿಳಿಸಿದ್ದಾರೆ. ಒಂದೂವರೆ ವರ್ಷ ಆಕೆ ಬದುಕಿದ್ದೇ ಹೆಚ್ಚು ಎಂದಿದ್ದಾರೆ. ಅಂದರೆ ಆಗಲೇ ಅಪರ್ಣಾ ಅವರಿಗೂ ತಿಳಿದಿತ್ತು.
ಅಪರ್ಣಾ ಕುರಿತು ಅವರ ಪತಿ ನಾಗರಾಜ್, ʻʻವೈಯಕ್ತಿವಾಗಿ ನಾನು ಅಪರ್ಣಾ ತುಂಬಾ ಖಾಸಗಿಯಾಗಿ ಬದುಕಿದವರು. ಅಷ್ಟೇ ಖಾಸಗಿಯಾಗಿ ನಾನು ಅವಳನ್ನು ಬಿಳ್ಕೊಡಲಿಕ್ಕೆ ಇಷ್ಟಪಡ್ತೀನಿ. ಹಾಗಂತ ಆಕೆ ನನಗೆ ಸೇರೋಕೆ ಮುಂಚೆನೇ ಹೆಚ್ಚಾಗಿ ಕರ್ನಾಟಕಕ್ಕೆ ಸೇರಿದವಳು. ಅಪರ್ಣಾಗೆ ಒಂದು ಆಶಯ ಇತ್ತು. ಸಾವಿನ ಬಳಿಕ ಮಾಧ್ಯಮಗಳ ಮುಂದೆ ಎಲ್ಲವನ್ನೂ ಹೇಳುವಂತೆ ತಿಳಿಸಿದ್ದಳು. ಎರಡು ವರ್ಷಗಳ ಹಿಂದೆ ಜುಲೈನಲ್ಲಿ ಶ್ವಾಸಕೋಶ ಕ್ಯಾನ್ಸರ್ ಅಂತಾ ಗೊತ್ತಾಯ್ತು. ಮೊದಲು ನೋಡಿದ ವೈದ್ಯರು ಇನ್ನೂ ಆರು ತಿಂಗಳು ಬದುಕಬಹುದು ಎಂದು ಹೇಳಿದ್ರು. ಅವರ ಛಲಗಾತಿ ನಾನು ಬದುಕ್ತಿನಿ ಎಂದು ಹೇಳ್ತಿದ್ಳು. ಅಲ್ಲಿಂದ ಜನವರಿತನಕ ಶಕ್ತಿಮೀರಿ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಿದ್ಳು. ಫೆಬ್ರವರಿಯಿಂದ ಕೈಚೆಲ್ಲಿದಳು. ಕ್ಯಾನ್ಸರ್ ಎಂದು ಗೊತ್ತಿದ್ದರೂ ಅವಳು ಒಂದೂವರೆ ವರ್ಷದಿಂದ ಛಲದಿಂದ ಬದುಕಿದ್ದಳು. ನಿಜಕ್ಕೂ ಅವಳು ಧೀರೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ನಾವಿಬ್ಬರೂ ಸೋತಿದ್ದೀವಿ. ಬರೋ ಅಕ್ಟೋಬರ್‌ಗೆ ಅವಳಿಗೆ 58 ವರ್ಷ ತುಂಬ್ತಿತ್ತುʼʼಎಂದು ಕಣ್ಣೀರಾಗಿದ್ದಾರೆ.