ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ (Kantara Movie) ವಿಶ್ವಾದ್ಯಂತ 400 ಕೋಟಿ ರೂ ಗಳಿಕೆ ಕಂಡು ಹಿಟ್ ಕಂಡಿತು. ಈಗ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಹಾಗೂ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಅವರು ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ‘ವರಾಹ ರೂಪಂ’ ಹಾಡಿನ ವಿವಾದ ಕುರಿತಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್‌ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.
ಕೇರಳ ಹೈಕೋರ್ಟ್ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ರಿಷಬ್ ಹಾಗೂ ವಿಜಯ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಜತೆಗೆ ಅರ್ಜಿದಾರರಿಗೆ ಷರತ್ತುಗಳನ್ನು ಹಾಕಿದ್ದಾರೆ. ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರುವವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ. ಈ ಪ್ರಕರಣದ ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ’ ಎಂದು ಹೇಳಿದ್ದಾರೆ.
ಕಾಂತಾರ’ ಸಿನಿಮಾದ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ಕೋಯಿಕ್ಕೋಡ್ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬುಧವಾರ ಫೆ.8ರಂದು ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಇದನ್ನೂ ಓದಿ: Kantara Movie: ಒಟಿಟಿಯಲ್ಲಿ ಬರಲಿದೆ ಕಾಂತಾರ ಇಂಗ್ಲಿಷ್ ಆವೃತ್ತಿ: ರಿಷಬ್ ಶೆಟ್ಟಿ
ಇದನ್ನೂ ಓದಿ: Kantara Movie: 2024ರಲ್ಲಿ ತೆರೆ ಕಾಣಲಿದೆ ಕಾಂತಾರ-1: ಪ್ರಿಕ್ವೆಲ್ ಬಗ್ಗೆ ಬಾಯ್ಬಿಟ್ಟ ರಿಷಬ್ ಶೆಟ್ಟಿ
ಪ್ರಿಕ್ವೆಲ್ ಆಗಿ ಬರಲಿದೆ ಕಾಂತಾರ 2:
ಕಾಂತಾರ-1 ಸಿಕ್ವೆಲ್ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್ ಖಚಿತಪಡಿಸಿದ್ದಾರೆ.