Anupam Kher announces his next project Vijay 69 Anupam Kher: ಅನುಪಮ್ ಖೇರ್ ಹೊಸ ಸಿನಿಮಾ ಪೋಸ್ಟರ್‌ ಔಟ್‌: `ಆಲ್ಬರ್ಟ್ ಐನ್‌ಸ್ಟೈನ್'ಅಂದ್ರು ನೆಟ್ಟಿಗರು: - Vistara News

South Cinema

Anupam Kher: ಅನುಪಮ್ ಖೇರ್ ಹೊಸ ಸಿನಿಮಾ ಪೋಸ್ಟರ್‌ ಔಟ್‌: `ಆಲ್ಬರ್ಟ್ ಐನ್‌ಸ್ಟೈನ್’ಅಂದ್ರು ನೆಟ್ಟಿಗರು:

ಅನುಪಮ್​ ಖೇರ್ (Anupam Kher)​ ಅವರಿಗೆ 68 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ.

VISTARANEWS.COM


on

Anupam Kher announces his next project Vijay 69
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ನಟ ಅನುಪಮ್ ಖೇರ್ (Anupam Kher) ಯಶ್ ರಾಜ್ ಫಿಲ್ಮ್ಸ್ ಎಂಟರ್‌ಟೈನ್‌ಮೆಂಟ್‌ನೊಂದಿಗೆ ʻವಿಜಯ್ 69ʼ ಎಂಬ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ. ಮೇ 4ರಂದು ಸಿನಿಮಾದ ಮೊದಲ ಪೋಸ್ಟರ್ ಹಂಚಿಕೊಂಡಿದ್ದಾರೆ. ಫೋಟೊದಲ್ಲಿ, ಅನುಪಮ್ ಅವರು ಆನಿಮೇಟೆಡ್ ಆವೃತ್ತಿಯಲ್ಲಿ ಸ್ಪೋರ್ಟ್ಸ್ ವೇರ್‌ನೊಂದಿಗೆ ಮತ್ತು ಬೈಸಿಕಲ್ ಸವಾರಿಯಲ್ಲಿ ಕಂಡಿದ್ದಾರೆ. ಅನುಪಮ್​ ಖೇರ್​ ಅವರಿಗೆ 68 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಸಿನಿಮಾದ ಪೋಸ್ಟರ್​ನಲ್ಲಿ ಅನುಪಮ್​ ಖೇರ್​ ಅವರು ಸೈಕಲ್ ರೇಸ್​​ನಲ್ಲಿ ಭಾಗವಹಿಸಿರುವುದು ಹೈಲೈಟ್​ ಆಗಿದೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯ ‘ವೈಆರ್​ಎಫ್​ ಎಂಟರ್​ಟೇನ್ಮೆಂಟ್​’ ಒಟಿಟಿ ಮೂಲಕ ‘ವಿಜಯ್​ 69’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ನೇರವಾಗಿ ಒಟಿಟಿ ಮೂಲಕ ಸ್ಟ್ರೀಮಿಂಗ್​ ಆಗಲಿದೆ. ಮನೀಶ್​ ಶರ್ಮಾ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಅಕ್ಷಯ್​ ರಾಯ್​ ನಿರ್ದೇಶನ ಮಾಡುತ್ತಿದ್ದಾರೆ.

ಪೋಸ್ಟರ್ ಹಂಚಿಕೊಂಡ ಅನುಪಮ್‌ ಖೇರ್‌ ʻ 69 ವರ್ಷ ಚಿಕ್ಕವರಾಗಿರುವುದು ಒಳ್ಳೆಯದು! ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾಗೆ ನಟಿಸಲು ತುಂಬಾ ಉತ್ಸುಕನಾಗಿದ್ದೇನೆ. ಟ್ರಯಥ್ಲಾನ್ ಸ್ಪರ್ಧೆಗೆ ಸ್ಪರ್ಧಿಸಲು ನಿರ್ಧರಿಸಿದ 69ನೇ ವಯಸ್ಸಿನ ವ್ಯಕ್ತಿಯ ಕಥೆಯಾಗಿದೆʼʼಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ದರ್ಶನ್ ಕುಮಾರ್, “ಅಭಿನಂದನೆಗಳು ಮತ್ತು ಶುಭಾಶಯಗಳು ಸರ್” ಎಂದು ಪ್ರತಿಕ್ರಿಯಿಸಿದ್ದಾರೆ. ಅಭಿಮಾನಿಯೊಬ್ಬರು, “ಸರ್ ಆಲ್ಬರ್ಟ್ ಐನ್‌ಸ್ಟೈನ್ ಪಾತ್ರ ಮಾಡುತ್ತಿದ್ದಾರೆಂದು ನಾನು ಭಾವಿಸಿದೆ” ಎಂದು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು “ನಾಸಿರುದ್ದೀನ್ ಶಾ ಅವರಂತೆ ಕಾಣುತ್ತಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Vivek Agnihotri | ವಿವೇಕ್ ಅಗ್ನಿಹೋತ್ರಿಯ ʻದಿ ವ್ಯಾಕ್ಸಿನ್ ವಾರ್ʼ ಸಿನಿಮಾ ಸೆಟ್‌ನಲ್ಲಿ ಅನುಪಮ್‌ ಖೇರ್‌

ಅನುಪಮ್ ಖೇರ್ ಹೊಸ ಸಿನಿಮಾ ಪೋಸ್ಟರ್‌ ಔಟ್‌

ಈ ಸಿನಿಮಾ ಅನುಪಮ್‌ ಖೇರ್‌ ಅವರ 537ನೇ ಸಿನಿಮಾವಾಗಿದೆ. ಅನುಪಮ್‌ ಖೇರ್‌ ಹಲವು ಸಿನಿಮಾಗಳಲ್ಲಿ ಬ್ಯಸಿಯಾಗಿದ್ದು, ದಿ ವ್ಯಾಕ್ಸಿನ್ ವಾರ್ , ಐಬಿ 71, ಎಮರ್ಜೆನ್ಸಿ, ಕಾರ್ತಿಕೇಯ-2 ಹೀಗೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Raghu Thatha: ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು.

VISTARANEWS.COM


on

Raghu Thatha Hombale Films Realease date announced
Koo

ಬೆಂಗಳೂರು: ʼಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ಗಮನ ಸೆಳೆದ ಕೀರ್ತಿ ಸುರೇಶ್‌

ಈ ಮುಂಚೆ ಬಿಡುಗಡೆಯಾದ ಒಂದು ನಿಮಿಷದ ಟೀಸರ್‌ನಲ್ಲಿ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡುವ ಯುವತಿಯಾಗಿ ಕೀರ್ತಿ ಸುರೇಶ್‌ ಮಿಂಚಿದ್ದರು. ಉದ್ಯೋಗ ಬಡ್ತಿಗಾಗಿ ಹಿಂದಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಬೇಕು ಎನ್ನುವ ಷರತ್ತನ್ನು ಆಕೆ ವಿರೋಧಿಸುತ್ತಾಳೆ. ಅನೇಕ ಜನರನ್ನು ಸಂಘಟಿಸಿ ಬೀದಿಗಿಳಿದು ಹೋರಾಡುತ್ತಾಳೆ. ಸದ್ಯ ಇದಿಷ್ಟು ವಿಚಾರ ಟೀಸರ್‌ ಮೂಲಕ ಬಹಿರಂಗಗೊಂಡಿತ್ತು. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ದಿಟ್ಟ ಯುವತಿ ಪಾತ್ರದಲ್ಲಿ ಕಂಡು ಬಂದಿರುವ ಕೀರ್ತಿ ಸುರೇಶ್‌ ಪಾತ್ರಕ್ಕೆ ಅಭಿಮಾನಿಗಳು ಮನ ಸೋತಿದ್ದರು.

ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. 

ಪುಷ್ಪ ಸಿನಿಮಾಗೆ ಸೆಡ್ಡು ಹೊಡೆದ ಹೊಂಬಾಳೆ!

ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು.ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

Continue Reading

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading

ಟಾಲಿವುಡ್

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

VISTARANEWS.COM


on

Maharaja trailer released Vijay Sethupathi has a secret
Koo

ಬೆಂಗಳೂರು: ನಟ ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʻಮಹಾರಾಜʼ ಟ್ರೈಲರ್‌ (Maharaja Trailer) ಬಿಡುಗಡೆಯಾಗಿದೆ. ನಿಥಿಲನ್ ಸಾಮಿನಾಥನ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ಮತ್ತು ಅನುರಾಗ್ ಕಶ್ಯಪ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ರೈಲರ್‌ನಲ್ಲಿ ನೋಡಿದಾಗ ವಿಜಯ್ ಕ್ಷೌರಿಕ ಪಾತ್ರ ನಿಭಾಯಿಸಿದ್ದಾರೆ. ನಾಪತ್ತೆಯಾದ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ಟ್ರೈಲರ್‌ನಲ್ಲಿ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಚಿನ್ನ, ಹಣ,ಸಹೋದರಿ, ಹೆಂಡತಿ , ಮಗು ಯಾವುದು ಅಲ್ಲ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

ಇದನ್ನೂ ಓದಿ: Air India Maharaja : ಏರ್‌ ಇಂಡಿಯಾ ರಿಬ್ರಾಂಡಿಂಗ್‌, ಮಹಾರಾಜ ನೇಪಥ್ಯಕ್ಕೆ?

ಮಹಾರಾಜ ಚಿತ್ರದಲ್ಲಿ ಮಮತಾ ಮೋಹನ್‌ದಾಸ್, ನಟರಾಜ್ , ಭಾರತಿರಾಜ, ಅಭಿರಾಮಿ, ಸಿಂಗಂಪುಲಿ ಮತ್ತು ಕಲ್ಕಿ ಕೂಡ ನಟಿಸಿದ್ದಾರೆ. ಪ್ಯಾಶನ್ ಸ್ಟುಡಿಯೋಸ್ ಮತ್ತು ದಿ ರೂಟ್ ಅಡಿಯಲ್ಲಿ ಸುಧನ್ ಸುಂದರಂ ಮತ್ತು ಜಗದೀಶ್ ಪಳನಿಸಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಹಾರಾಜ ಚಿತ್ರದ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಈ ಹಿಂದೆ ನಟ ಈ ಸಿನಿಮಾ ಕುರಿತು ಮಾತನಾಡಿ ʻʻʻ50ನೇ ಸಿನಿಮಾವನ್ನು ನಿರೀಕ್ಷಿಸಿರಲಿಲ್ಲ. ಇದು ಮೈಲಿಗಲ್ಲಿನಂತಿದೆ. ನಾವು ಎಷ್ಟು ದೂರ ಬಂದಿದ್ದೇವೆ ಎಂಬುದದಕ್ಕೆ ಒಂದು ಭರವಸೆ ಇದು. ಒಳ್ಳೆಯ ಅನುಭವ ನೀಡಿದ ಎಲ್ಲಾ ನಿರ್ದೇಶಕರು ಮತ್ತು ಕಲಾವಿದರಿಗೆ ಧನ್ಯವಾದಗಳು” ಎಂದಿದ್ದರು.

“ನಾನ್ ಮಹಾನ್ ಅಲ್ಲಾ ಚಿತ್ರದ ಡಬ್ಬಿಂಗ್ ಮುಗಿದ ನಂತರ, ಅರುಲ್ದಾಸ್ ಅಣ್ಣನ್ ಮತ್ತು ನಾನು ಪರಸ್ಪರರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡೆವು. ಇದ್ದಕ್ಕಿದ್ದಂತೆ ಒಂದು ದಿನ ಎರಡು ಮಿಸ್ಡ್ ಕಾಲ್‌ಗಳಿದ್ದವು. ನಾವು ಮತ್ತೆ ಕರೆ ಮಾಡಿದಾಗ, ನಮ್ಮ ಸ್ನೇಹಿತ ಸೀನು ರಾಮಸಾಮಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಯಾವುದೇ ಪಾತ್ರ ಕೊಟ್ಟರೂ ಸಿನಿಮಾ ಮಾಡು ಎಂದು ಹೇಳಿದ್ದರು. ಆಮೇಲೆ ಹೋಗಿ ಸೀನು ರಾಮಸಾಮಿ ಸರ್ ಅವರನ್ನು ನೋಡಿದೆ. ಆ ನಂತರ ನಡೆದಿದ್ದೆಲ್ಲ ಇತಿಹಾಸ, ಈಗ ಈ ಹಂತ ತಲುಪಿದ್ದೇನೆ. ತುಂಬಾ ಧನ್ಯವಾದಗಳು ಅರುಲ್ದಾಸ್. ಧನ್ಯವಾದಗಳು ಸೀನು ಸರ್. ಈ ಕ್ಷಣಕ್ಕೆ ಧನ್ಯವಾದಗಳುʼʼ ಎಂದು ಹೇಳಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

Kannada New Movie: ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

VISTARANEWS.COM


on

back benchers Movie Kannada song
Koo

ಬೆಂಗಳೂರು: ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ (Kannada New Movie) ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್ “. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ “ಬ್ಯಾಕ್ ಬೆಂಚರ್ಸ್” ಚಿತ್ರದ “ಯಲ್ಲೋ ಯಲ್ಲೋ” ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ “ಬ್ಯಾಕ್ ಬೆಂಚರ್ಸ್” ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ ಎಂದು ಮಾತನಾಡಿದ ನಿರ್ದೇಶಕ, ನಿರ್ಮಾಪಕ ಬಿ.ಆರ್ ರಾಜಶೇಖರ್, ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮುಂದಿನ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುʼʼ ಎಂದರು.

ಇದನ್ನೂ ಓದಿ: Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

ಇದನ್ನೂ ಓದಿ: Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

ʻʻನಿರ್ದೇಶಕ ರಾಜಶೇಖರ್ ಅವರು ನಮಗೆಲ್ಲಾ ನೀಡಿದ ಪ್ರೋತ್ಸಹ ಅಷ್ಟಿಷ್ಟಲ್ಲ. ನಮ್ಮಗೆಲ್ಲಾ ಇದು ಮೊದಲ ಚಿತ್ರ. ಆದರೆ ನಮಗೆ ನಟನೆ ಹೊಸತಲ್ಲ‌‌. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ ಬಂದ ಮೇಲು ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆʼʼ ಎಂದು “ಬ್ಯಾಕ್ ಬೆಂಚರ್ಸ್ ” ಚಿತ್ರದಲ್ಲಿ ನಟಿಸಿರುವ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್ ಹೆಚ್, ಮನೋಜ್ ಶೆಟ್ಟಿ ಮುಂತಾದವರು ತಿಳಿಸಿದರು.

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

Continue Reading
Advertisement
Prajwal revanna
ಪ್ರಮುಖ ಸುದ್ದಿ7 mins ago

Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆ ಬ್ರಾಂಡ್ ಯಾವುದು? ಅದಕ್ಕೆಷ್ಟು ಬೆಲೆ?

contractor self harming
ಕ್ರೈಂ17 mins ago

Self Harming: ಕಂಟ್ರಾಕ್ಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ, ಮತ್ತೊಂದು ಸರ್ಕಾರಿ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಯಲಿಗೆ!

Aadhaar-PAN Link
ದೇಶ31 mins ago

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Valmiki Corporation Scam
ಪ್ರಮುಖ ಸುದ್ದಿ43 mins ago

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

RBI
ದೇಶ51 mins ago

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Raghu Thatha Hombale Films Realease date announced
ಕಾಲಿವುಡ್51 mins ago

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Anant Ambani Shakira set to perform 2nd pre-wedding
ಬಾಲಿವುಡ್55 mins ago

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Prajwal Revanna
ಪ್ರಮುಖ ಸುದ್ದಿ59 mins ago

Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

T20 World Cup 2024
ಕ್ರೀಡೆ1 hour ago

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

Vijayanagara News
ವಿಜಯನಗರ1 hour ago

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌