Ram Mandir: ಸೂಪರ್‌ ಸ್ಟಾರ್‌ ರಜನಿಕಾಂತ್ ಭೇಟಿ ಮಾಡಿ ʻಹನುಮಾನ್ʼ ದರ್ಶನ ಪಡೆದ ಅನುಪಮ್‌ ಖೇರ್‌! - Vistara News

South Cinema

Ram Mandir: ಸೂಪರ್‌ ಸ್ಟಾರ್‌ ರಜನಿಕಾಂತ್ ಭೇಟಿ ಮಾಡಿ ʻಹನುಮಾನ್ʼ ದರ್ಶನ ಪಡೆದ ಅನುಪಮ್‌ ಖೇರ್‌!

Ram Mandir: ಈಗಾಗಲೇ ಅಯೋಧ್ಯೆಗೆ ನಟ ಅನುಪಮ್ ಖೇರ್ ತಲುಪಿದ್ದಾರೆ. ಸೋಮವಾರ ಬೆಳಗ್ಗೆ (ಜ.22) ʻಹನುಮಾನ್ ಗಢಿʼ ದೇವಸ್ಥಾನದಲ್ಲಿ ಅನುಪಮ್ ಖೇರ್ ಪ್ರಾರ್ಥನೆ ಸಲ್ಲಿಸಿದರು.

VISTARANEWS.COM


on

Anupam Kher offers prayers poses with ‘superstar’ Rajinikanth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ ರಾಮ ಮಂದಿರದಲ್ಲಿ (Ram Mandir) ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಣ ಪ್ರತಿಷ್ಠೆ ಮಾಡಲಿದ್ದಾರೆ. ಪ್ರತಿಷ್ಠಾಪನೆಯು ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಈಗಾಗಲೇ ಅಯೋಧ್ಯೆಗೆ ನಟ ಅನುಪಮ್ ಖೇರ್ ತಲುಪಿದ್ದಾರೆ. ಸೋಮವಾರ ಬೆಳಗ್ಗೆ (ಜ.22) ʻಹನುಮಾನ್ ಗಢಿʼ ದೇವಸ್ಥಾನದಲ್ಲಿ ಅನುಪಮ್ ಖೇರ್ ಪ್ರಾರ್ಥನೆ ಸಲ್ಲಿಸಿದರು.

ವಿಡಿಯೋವೊಂದರಲ್ಲಿ ಅನುಪಮ್ ಖೇರ್‌ ಕೈ ಜೋಡಿಸಿ ಪ್ರಾರ್ಥಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅನುಪಮ್ ಖೇರ್, ʻʻಶ್ರೀರಾಮನ ಬಳಿಗೆ ಹೋಗುವ ಮುನ್ನ ಹನುಮಂತನ ದರ್ಶನ ಪಡೆಯುವುದು ಬಹಳ ಮುಖ್ಯ. ಅಯೋಧ್ಯೆಯ ವಾತಾವರಣ ತುಂಬಾ ಸೊಗಸಾಗಿದೆ. ಎಲ್ಲೆಡೆ ಜೈ ಶ್ರೀರಾಮ್ ಘೋಷಣೆ ಮೊಳಗುತ್ತಿದೆ. ಎಲ್ಲೆಲ್ಲೂ ರಾಮನ ಸಾನ್ನಿಧ್ಯವಿದೆ. ಮತ್ತೆ ದೀಪಾವಳಿ ಬಂದಿದೆ ಇದೇ ನಿಜವಾದ ದೀಪಾವಳಿʼʼ ಎಂದರು.

ರಜನಿಕಾಂತ್ ಭೇಟಿ ಮಾಡಿದ ಅನುಪಮ್

ಅನುಪಮ್ ಅವರು ಹಿರಿಯ ನಟ ರಜನಿಕಾಂತ್ ಅವರೊಂದಿಗೆ ಪೋಸ್ ಕೊಟ್ಟಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊದಲ್ಲಿ ಇಬ್ಬರೂ ನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಅನುಪಮ್ ಅವರನ್ನು ರಜನಿಕಾಂತ್ ಬಿಗಿದಪ್ಪಿದ್ದರು. ರಜನಿಕಾಂತ್ ಹಸಿರು ಶರ್ಟ್ ಧರಿಸಿದ್ದರು. ಅನುಪಮ್ ಬ್ಲೇಜರ್, ಶಾಲು ಮತ್ತು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಫೋಟೊವನ್ನು ಹಂಚಿಕೊಂಡ ಅವರು, “ನನ್ನ ಸ್ನೇಹಿತ ಮತ್ತು ಏಕೈಕ ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಶ್ರೀ ರಾಮ ಜನ್ಮ ಭೂಮಿ, ಅಯೋಧ್ಯೆಯಲ್ಲಿ ಭೇಟಿಯಾದೆ. ಜೈ ಶ್ರೀ ರಾಮ್! ತಲೈವಾ” ಎಂದು ಶೀರ್ಷಿಕೆ ನೀಡಿದ್ದಾರೆ.

ಇದನ್ನೂ ಓದಿ: Ram Mandir : ಮುಂಬೈ ಬಳಿ ಎರಡು ಸಮುದಾಯಗಳ ನಡುವೆ ಮಾರಾಮಾರಿ; ಐದು ಮಂದಿಯ ಸೆರೆ

ಅಮಿತಾಭ್‌ ಬಚ್ಚನ್, ಅಭಿಷೇಕ್ ಬಚ್ಚನ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಣಬೀರ್ ಕಪೂರ್, ಆಲಿಯಾ ಭಟ್, ಆಯುಷ್ಮಾನ್ ಖುರಾನಾ, ಕಂಗನಾ ರಣಾವತ್, ಟೈಗರ್ ಶ್ರಾಫ್ ಮತ್ತು ಆಶಾ ಭೋಸ್ಲೆ ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆಯಲ್ಲಿ ಬಿಗಿ ಭದ್ರತೆಯ ನಡುವೆ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ.

ಪ್ರತಿಷ್ಠಾಪನಾ ಸಮಾರಂಭದ ನಂತರ ದೇವಾಲಯವು ಸಾರ್ವಜನಿಕರಿಗೆ ತೆರೆದಿರುತ್ತದೆ. ಅಧಿಕಾರಿಗಳು ಹೆಚ್ಚಿನ ಸಂಖ್ಯೆಯ ಭಕ್ತರನ್ನು ನಿರೀಕ್ಷಿಸುತ್ತಾರೆ, ಪ್ರತಿದಿನ ಅಂದಾಜು 100,000 ಸಂದರ್ಶಕರನ್ನು ನಿರೀಕ್ಷಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

Actor Darshan: ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ.

VISTARANEWS.COM


on

Actor Darshan Chandranna Family Members Want Anu To Attend Funeral
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್‌ 15) ನಿರ್ಧಾರವಾಗಲಿದೆ. ಇನ್ನೊಂದೆಡೆ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಕೂಡ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದರಿಂದ ಮನನೊಂದು ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಕುಟುಂಬದವರು ಮಾಹಿತಿ ನೀಡಿ ʻʻಮಗ ಅರೆಸ್ಟ್‌ ಆಗಿದ್ದಕ್ಕೆ ತಂದೆಗೆ ಹೀಗೆ ಆಗಿದೆ. ಮಗ ಇಲ್ಲದೇ ಚಂದ್ರಣ್ಣ ಅವರನ್ನು ಮಣ್ಣಾಗಿಸಲು ಬಿಡುವುದಿಲ್ಲ. ಎಷ್ಟೇ ದಿನ ಆದರೂ ಶವ ಇಲ್ಲೇ ಇಡುತ್ತೇವೆ. ಅನು ಬರುವವರೆಗೂ ಶವ ಎತ್ತಲ್ಲʼʼಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಅನುಕುಮಾರ್‌ ಚಿಕ್ಕಪ್ಪ ಕೂಡ ಪ್ರತಿಕ್ರಿಯೆ ನೀಡಿ ‘ನನ್ನ ಅಣ್ಣನ ಸಾವಿಗೆ ದರ್ಶನ್ ಕಾರಣ. ಅವರೊಬ್ಬರೇ ಕೊಲೆ ಮಾಡಿದ್ದರೆ ಆಗಿತ್ತು. 16 ಜನರನ್ನು ಇಟ್ಟುಕೊಂಡು ಮಾಡೋದು ಬೇಕಿರಲಿಲ್ಲ. ಇಲ್ಲಿ ಬಡವರೇ ಸಾಯೋದು;ʼʼಎಂದು ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

ಮತ್ತೊಬ್ಬ ವ್ಯಕ್ತಿ ಪೊಲೀಸ್‌ ವಶಕ್ಕೆ

ಈ ಮಧ್ಯೆ ಪೊಲೀಸರು ತಡರಾತ್ರಿ ದರ್ಶನ್‌ ಮತ್ತು ಸಹಚರರಿಗೆ ಸಹಾಯ ಮಾಡಿದ್ದ ಇನ್ನೋರ್ವ ವ್ಯಕ್ತಿಯನ್ನೂ ವಶಕ್ಕೆ ಪಡೆದಿದ್ದಾರೆ. ಈತ ಆರೋಪಿಗಳ ಮೊಬೈಲ್ ಡೇಟಾ ಡಿಲೀಟ್ ಮಾಡಲು ಸಹಾಯ ಮಾಡಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಏನಿದು ಪ್ರಕರಣ?

ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರ ಹೆಸರು ಕೇಳಿ ಬಂದಿದೆ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಜೂನ್‌ 11ರಂದು ದರ್ಶನ್‌ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ಧ್ರುವ ಸರ್ಜಾ ನಿರಾಳ ; ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆಯಲು ʻಕೆಡಿʼ ಸಜ್ಜು

Actor Darshan: ದರ್ಶನ್ ಅರೆಸ್ಟ್ ಆದ ಬೆನ್ನಲ್ಲಿಯೇ ಮಾಧ್ಯಮದವರು, ಧ್ರುವ ಅವರಲ್ಲಿ ಈ ಪ್ರಕರಣದ ಕುರಿತು ಮಾತನಾಡುವಂತೆ ಮನವಿಯನ್ನ ಮಾಡಿಕೊಂಡಿದ್ದರು. ಧ್ರುವಾ ಸರ್ಜಾ ಪ್ರಶ್ನೆ ಕೇಳಿಯೂ ಕೇಳಿಸದಂತೆ ಹೋದರು.  ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Actor Darshan arrest dhruva sraja KD will release
Koo

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌ (Actor Darshan) ಹಾಗೂ ತಮ್ಮ ನಡುವಿನ ಎದ್ದು ತೋರಿದ ಮನಸ್ತಾಪದ ವಿಚಾರವನ್ನು ಧ್ರುವ ಸರ್ಜಾ (Dhruva Sarja) ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದರು. ದರ್ಶನ್ ಅವರ ಬಳಿ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದು ಹೇಳಿಕೆ ನೀಡಿದ್ದರು. ಇಬ್ಬರ ಸಮರದ ವಾತಾವರಣ ನಡುವೆಯೇ ʻಡೆವಿಲ್ʼ ಮತ್ತು ಧ್ರುವಾ ಸರ್ಜಾ ಅಭಿನಯದ ʻಕೆಡಿʼ ಒಂದೇ ದಿನ ತೆರೆಗೆ ಬರಲಿದೆ ಎನ್ನಲಾಗಿತ್ತು. ಇದೀಗ ದರ್ಶನ್‌ ಜೈಲಿನಲ್ಲಿ ಇರುವುದರಿಂದ ʻಡೆವಿಲ್ʼ ಈ ವರ್ಷ ಬರಲು ಸಾಧ್ಯವೇ ಇಲ್ಲ. ಹಾಗಾಗಿ ಈ ಕಾರಣಕ್ಕೆ ಧ್ರುವ ಸರ್ಜಾ ಎದುರಿದ್ದ ಲೈನ್ ಕ್ಲಿಯರ್ ಆಗಿದೆ ಎಂಬ ಮಾತು ಚಂದನವನದಲ್ಲಿ ಕೇಳಿ ಬರುತ್ತಿದೆ.

ದರ್ಶನ್ ಅರೆಸ್ಟ್ ಆದ ಬೆನ್ನಲ್ಲಿಯೇ ಮಾಧ್ಯಮದವರು, ಧ್ರುವ ಅವರಲ್ಲಿ ಈ ಪ್ರಕರಣದ ಕುರಿತು ಮಾತನಾಡುವಂತೆ ಮನವಿಯನ್ನ ಮಾಡಿಕೊಂಡಿದ್ದರು. ಧ್ರುವಾ ಸರ್ಜಾ ಪ್ರಶ್ನೆ ಕೇಳಿಯೂ ಕೇಳಿಸದಂತೆ ಹೋದರು.  ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗಲಿದೆ ಎಂದು ಘೋಷಣೆ ಆಗಿತ್ತು. ಆದರೆ ದರ್ಶನ್‌ ಜೈಲಿನಲ್ಲಿ ಇರುವುದರಿಂದ ಡೆವಿಲ್ ಈ ವರ್ಷ ಬರಲು ಸಾಧ್ಯವೇ ಇಲ್ಲ.

ಇದನ್ನೂ ಓದಿ: Actor Darshan: ಇಂದು ನಟ ದರ್ಶನ್‌ ಭವಿಷ್ಯ ನಿರ್ಧಾರ; ಕೋರ್ಟ್‌ ತೀರ್ಪು ಏನಿರಲಿದೆ?

ಧ್ರುವ ಮತ್ತು ದರ್ಶನ್ ನಡುವೆ ಇರುವ ಮನಸ್ತಾಪ ಏನು?

ಕಾವೇರಿಗಾಗಿ ಇಡೀ ಕನ್ನಡ ಚಿತ್ರರಂಗ ಒಂದೇ ವೇದಿಕೆಯನ್ನೇರಿದ್ದ ಸಮಯದಲ್ಲಿ ದರ್ಶನ್ ಮುಖವನ್ನ ಧ್ರುವ ಒಮ್ಮೆಯೂ ನೋಡಿರಲಿಲ್ಲ. ದರ್ಶನ್ ಬಂದಾಗ ಎಲ್ಲರೂ ಎದ್ದು ನಿಂತರೂ ಧ್ರುವ ಮಾತ್ರ ಕುರ್ಚಿಯಿಂದ ಕದಲಿರಲಿಲ್ಲ.

ಈ ಬಗ್ಗೆ ಧ್ರುವ ಮಾತನಾಡಿ ʻʻದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಗೆ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು. ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲʼʼಎಂದಿದ್ದರು. ಸದ್ಯಕ್ಕೆ ಡಿಸೆಂಬರ್ ನಲ್ಲಿ ʻಡೆವಿಲ್ʼ ತೆರೆಗೆ ಬರಲು ಸಾಧ್ಯ ಇಲ್ಲ. ಹೀಗಾಗಿ ಗಲ್ಲಾಪೆಟ್ಟಿಗೆಯ ಅಖಾಡಕ್ಕೆ ಧ್ರುವ ಒಬ್ಬರೇ ಧುಮುಕಲಿದ್ದಾರೆ.

ಕೆಡಿ ಸಿನಿಮಾ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading

ಸ್ಯಾಂಡಲ್ ವುಡ್

Samarjit Lankesh: ʻಗೌರಿʼ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ’ ಸಾಂಗ್ ರಿಲೀಸ್!

Samarjit Lankesh: ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.ನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು.

VISTARANEWS.COM


on

Samarjit Lankesh Dhool Yebsava Video Song Out
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನ, ನಾಯಕ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ಸಾನ್ಯ ಅಯ್ಯರ್ ನಟಿಸಿರುವ ʻಗೌರಿ’ ಚಿತ್ರದ ʻಧೂಳ್ ಎಬ್ಬಿಸಾವ..’ ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ.

ಅನಿರುದ್ಧ್ ಶಾಸ್ತ್ರೀ, ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಈಗಾಗಲೇ ಧೂಳ್ ಎಬ್ಬಿಸಾವ..’ ಸಾಂಗ್ ಸಖತ್ ವೈರಲ್ ಆಗುವ ಮೂಲಕ ಜನಮನ ಸೂರೆಗೊಂಡಿದೆ. ನೈಜ ಘಟನೆ ಆಧರಿಸಿ ದೊಡ್ಡ ಬಜೆಟ್‌ನಲ್ಲಿ ಸಿನಿಮಾ ಮಾಡಿದ್ದು, ಬೆಂಗಳೂರು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ.

ಅಕ್ಕ ಗೌರಿಯ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಯುವ ನಟ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

ಪ್ರಿಯಾಂಕ ಉಪೇಂದ್ರ, ವಸುಂಧರಾ ದಾಸ್, ಲೂಸ್ ಮಾದ ಯೋಗಿ, ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾಲತಿ ಸುಧೀರ್, ಕೆಜಿಎಫ್ ಖ್ಯಾತಿಯ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading
Advertisement
Students Fall Sick
ಯಾದಗಿರಿ3 mins ago

Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

RSA vs NEP
ಕ್ರೀಡೆ9 mins ago

RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್​

Actor Darshan Chandranna Family Members Want Anu To Attend Funeral
ಸ್ಯಾಂಡಲ್ ವುಡ್15 mins ago

Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

cow smuuggling
ಪ್ರಮುಖ ಸುದ್ದಿ17 mins ago

Cow Smuggling : ಗೋವು ಸಾಗಿಸುತ್ತಿದ್ದವರಿಂದ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಗಂಭೀರ ಹಲ್ಲೆ

Actor Darshan
ಕ್ರೈಂ39 mins ago

Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

Actor Darshan arrest dhruva sraja KD will release
ಸ್ಯಾಂಡಲ್ ವುಡ್40 mins ago

Actor Darshan: ಧ್ರುವ ಸರ್ಜಾ ನಿರಾಳ ; ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆಯಲು ʻಕೆಡಿʼ ಸಜ್ಜು

IND vs CAN
ಕ್ರಿಕೆಟ್46 mins ago

IND vs CAN: ಇಂದು ಭಾರತ-ಕೆನಡಾ ಪಂದ್ಯ ಅನುಮಾನ; ಭಾರೀ ಮಳೆ ಎಚ್ಚರಿಕೆ ನೀಡಿದ ಹಮಾಮಾನ ಇಲಾಖೆ

Chitradurga News
ಪ್ರಮುಖ ಸುದ್ದಿ51 mins ago

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Namma Metro
ಪ್ರಮುಖ ಸುದ್ದಿ1 hour ago

Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ; ಜೂನ್​ 17ರಂದು 1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

G7 Summit
ಪ್ರಮುಖ ಸುದ್ದಿ1 hour ago

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು16 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು17 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ17 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌