Site icon Vistara News

Bangalore Kambala: ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ ಸೇರಿ ಹಲವು ತಾರೆಯರು ಕಂಬಳಕ್ಕೆ ಭಾಗಿ!

Anushka Shetty, Pooja Hegde and many other stars joined the Bangalore Kambala

ಬೆಂಗಳೂರು: ಉದ್ಯಾನ ನಗರಿಯಲ್ಲಿ ನವೆಂಬರ್‌ 25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ (Bangalore Kambala) ಸಕಲ ಸಿದ್ಧತೆಗಳು ನಡೆದಿವೆ. ಕರಾವಳಿಯಿಂದ ಈಗಾಗಲೇ ಸುಮಾರು 200 ಜೋಡಿ ಕೋಣಗಳು ಮತ್ತು ಅದರ ಪರಿಚಾರಕರಾಗಿ ಐದು ಸಾವಿರ ಮಂದಿ ಆಗಮಿಸಿದ್ದಾರೆ. ಇನ್ನು ರಾಜಕಾರಣಿಗಳು, ಸಿನಿಮಾ ನಟರು ಮತ್ತು ಕಂಬಳ ಅಭಿಮಾನಿಗಳು, ಕುತೂಹಲಿಗಳು ಸೇರಿ ಎರಡು ದಿನದಲ್ಲಿ ಆರರಿಂದ ಏಳು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಅನುಷ್ಕಾ ಶೆಟ್ಟಿ , ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ (Bangalore Palace ground) ನಡೆಯಲಿರುವ ಕಂಬಳಕ್ಕೆ ಬರುವವರಿಗಾಗಿ ಸಂಚಾರಿ ಪೊಲೀಸರು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್, ಕಾಂತಾರ ಹೀರೋ ರಿಷಬ್ ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

ಕಂಬಳ: ಎಷ್ಟು ಹೊತ್ತಿಗೆ ಯಾವ ಇವೆಂಟ್‌?

ಕಂಬಳ ಆರು ವಿಭಾಗಗಳಲ್ಲಿ ನಡೆಯಲಿದೆ. ಹಗ್ಗದ ವಿಭಾಗದಲ್ಲಿ ಹಿರಿಯ ಮತ್ತು ಕಿರಿಯ ಎಂಬ ಎರಡು ವರ್ಗಗಳಿವೆ. ನೇಗಿಲು ವಿಭಾಗದಲ್ಲೂ ಹಿರಿಯ ಮತ್ತು ಕಿರಿಯ ವರ್ಗಗಳಿವೆ. ಉಳಿದಂತೆ ಅಡ್ಡಹಲಗೆ ಮತ್ತು ಕನಹಲಗೆ ವಿಭಾಗಗಳಿವೆ.

ಬೆಳಗ್ಗೆ 10.30ರಿಂದಲೇ ಕೋಣಗಳ ಓಟ ಶುರುವಾಗಲಿದೆ. ಆರಂಭದಲ್ಲಿ ಹಗ್ಗ ಮತ್ತು ನೇಗಿಲಿನ ಕಿರಿಯ ವಿಭಾಗದ ಕೋಣಗಳ ಒಂಟಿ ಓಟವಿರುತ್ತದೆ. ಈ ಕೋಣಗಳು 155 ಮೀಟರ್‌ ಓಡಲು ತೆಗೆದುಕೊಳ್ಳುವ ಸಮಯವನ್ನು ನೋಟ್‌ ಮಾಡಲಾಗುತ್ತದೆ. ಇದು ಅವುಗಳ ನಡುವೆ ಓಟದ ಸ್ಪರ್ಧೆಯನ್ನು ಆಯೋಜಿಸಲು ಅನುಕೂಲವಾಗುತ್ತದೆ.

ಇದನ್ನೂ ಓದಿ: Bangalore Kambala : ಕಂಬಳ ನೋಡಲು ಹೋಗ್ತೀರಾ? ಹಾಗಿದ್ದರೆ ಈ ಸಂಗತಿಗಳನ್ನು ತಿಳಿದುಕೊಳ್ಳಿ

ಅದೇ ರೀತಿ ಹಗ್ಗ ಮತ್ತು ನೇಗಿಲಿನ ಹಿರಿಯ ವಿಭಾಗದ ಕೋಣಗಳ ಒಂಟಿ ಓಟ ನಡೆದು ಅಲ್ಲೂ ಸಾಲುಗಳ ನಿರ್ಣಯ ಮಾಡಲಾಗುತ್ತದೆ. ಅಡ್ಡಹಲಗೆಯಲ್ಲಿ ಕೂಡಾ ಇದೇ ರೀತಿಯಲ್ಲಿ ಸಾಲು ನಿರ್ಣಯವಾಗುತ್ತದೆ. ಕನೆಹಲಗೆಯ ಕೋಣಗಳಿಗೆ ಸ್ಪರ್ಧೆ ಇರುವುದಿಲ್ಲ. ಅವು ಒಂಟಿಯಾಗಿ ಓಡುತ್ತಲೇ ನಿಶಾನೆಗೆ ನೀರು ಹಾರಿಸುವ ಸ್ಪರ್ಧೆ.

ಸಾಮಾನ್ಯವಾಗಿ ಸಂಜೆಯವರೆಗೆ ಒಂಟಿ ಓಟವೇ ಹೆಚ್ಚಾಗಿದ್ದು, ಸಂಜೆ ಮತ್ತು ಕತ್ತಲಿನ ಹೊತ್ತಿಗೆ ಕನೆಹಲಗೆ ಓಟ ಗಮನ ಸೆಳೆಯಲಿದೆ. ಅದಾದ ಬಳಿಕ ಇತರ ವಿಭಾಗಗಳಲ್ಲಿ ಸ್ಪರ್ಧೆ ಆರಂಭವಾಗುತ್ತದೆ.

Exit mobile version