Site icon Vistara News

Aparna Nair: ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿಯ ಶವ ಪತ್ತೆ

Aparna Nair Malayalam actor

ಬೆಂಗಳೂರು: ಮಲಯಾಳಂ ಕಿರುತೆರೆ ನಟಿ ಅಪರ್ಣಾ ನಾಯರ್ (Aparna Nair) ಅವರ ಶವವು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರ್ಣಾ ನಾಯರ್​ ಅವರು ತಿರುವನಂತಪುರಂನಲ್ಲಿ ವಾಸವಾಗಿದ್ದರು. ಕೆಲವು ಚಲನಚಿತ್ರಗಳು ಮತ್ತು ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ನಟಿಗೆ ಕೇವಲ 33 ವರ್ಷ ವಯಸ್ಸಾಗಿತ್ತು. ಗುರುವಾರ (ಆಗಸ್ಟ್​ 31) ಸಂಜೆ 7.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ಅವರು ಕೊನೆಯುಸಿರು ಎಳೆದಿದ್ದರು ಎಂದು ವರದಿ ಆಗಿದೆ. ಅಪರ್ಣಾ ಪತಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ (Unnatural Death Case) ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ಸಮಸ್ಯೆಯೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಅಪರ್ಣಾ ನಾಯರ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Navya Nair: ಮನಿ ಲಾಂಡರಿಂಗ್ ಪ್ರಕರಣದಲ್ಲಿ ʻಗಜʼ ಸಿನಿಮಾ ನಟಿ ನವ್ಯಾ ನಾಯರ್‌; ಐಆರ್‌ಎಸ್ ಅಧಿಕಾರಿ ಜತೆ ಸ್ನೇಹ?

ಮಲಯಾಳಂ ಪ್ರಮುಖ ಧಾರಾವಾಹಿಳಾದ “ಚಂದನಮಜ” ಮತ್ತು “ಆತ್ಮಸಖಿ” ಯಲ್ಲಿ ಅಭಿನಯಿಸಿದ್ದರು. “ಮೇಘತೀರ್ಥಂ” (2009), “ಮುಧುಗೌವ್” (2016), “ಮೈಥಿಲಿ ವೀಂದುಂ ವರುನ್ನು” (2017) ಮತ್ತು “ಅಚಾಯನ್ಸ್” (2017) ನಂತಹ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ನಟಿಯ ನಿಧನಕ್ಕೆ ಅವರ ಫ್ಯಾನ್ಸ್‌ ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

Exit mobile version