Site icon Vistara News

Nenapirali Prem: ‘ಅಪ್ಪಾ ಐ ಲವ್ ಯುʼ ಸಿನಿಮಾ ಸಾಂಗ್‌ ಔಟ್‌; ನೆನಪಿರಲಿ ಪ್ರೇಮ್‌ಗೆ ಅಭಿಷೇಕ್ ಅಂಬರೀಶ್ ಸಾಥ್‌!

`Appa I Love You' Movie Song Out Abhishek Ambarish Sath for Prem

ಬೆಂಗಳೂರು: ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿರುವ ʻಅಪ್ಪಾ ಐ ಲವ್ ಯುʼ ಸಿನಿಮಾದ ಮೊದಲ ಹಾಡು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಜಿಟಿ‌ ಮಾಲ್ ನಲ್ಲಿರುವ ಎಂಎಂ ಲೆಗಸಿಯಲ್ಲಿ ಆಡಿಯೊ ಬಿಡುಗಡೆ ಕಾರ್ಯಕ್ರಮ ನಡೆಯಿತು. ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಆಡಿಯೊ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು.

ಅಭಿಷೇಕ್ ಅಂಬರೀಶ್ ಮಾತನಾಡಿ,‌ ʻʻಪ್ರತಿಯೊಬ್ಬರಿಗೂ ಅಪ್ಪನ ಜತೆಗೆ ಒಂದು ಮೆಮೋರಿ ಇದ್ದೇ ಇರುತ್ತದೆ ಎಂದುಕೊಂಡಿದ್ದೇ‌ನೆ. ತಂದೆ ಇರುವವರಿಗೂ ಅವರ ವಾಲ್ಯು ಗೊತ್ತಾಗಲ್ಲ. ಪ್ರೇಮ್ ಹೀರೊ ಆದವರು ಮನೆಯಿಂದ ಹೀರೋಯಿನ್ ತಂದಿದ್ದಾರೆ. ಕವಿ ರಾಜ್ ಸರ್ ತುಂಬಾ ಚೆನ್ನಾಗಿ ಹಾಡು ಬರೆದಿದ್ದಾರೆ. ತಬಲ ನಾಣಿ ಸರ್ ಒಂದೊಳ್ಳೆ ಮೆಸೇಜ್ ಇಟ್ಟುಕೊಂಡು, ಒಂದೊಳ್ಳೆ‌ ಕಂಟೆಂಟ್ ಇಟ್ಕೊಂಡು ಸೊಸೈಟಿಗೆ ಏನಾದರೂ ಕೊಡಬೇಕು ಎಂದು ಬಂದಿದ್ದೀರಾ..ನಿಮಗೆ ಒಳ್ಳೆಯದಾಗಲಿʼʼ ಎಂದರು.

ನೆನಪಿರಲಿ ಪ್ರೇಮ್ ಮಾತನಾಡಿ, ʻʻಸಿನಿಮಾದಲ್ಲಿ 22 ವರ್ಷ ಪೂರೈಸಿದ್ದೇನೆ ಅಂದರೆ ಅದು ನಮ್ಮ ತಂದೆಯಿಂದ ಅಂತಾ ಹೆಮ್ಮೆಯಿಂದ ಹೇಳಲು ಇಷ್ಟಪಡುತ್ತೇನೆ. ಕಾರಣ ಏನೆಂದರೆ ಸಿನಿಮಾ ಹೀರೊ ಆಗಬೇಕು ಅಂತಾ ಕನಸು ಕಟ್ಟಿಕೊಂಡಾಗ ಗಾಂಧಿನಗರದಲ್ಲಿ ಫೋಟೋ ಇಟ್ಟುಕೊಂಡು ತಿರುಗಾಡುತ್ತಿದ್ದೆ. ಮದುವೆ ಆಗಿತ್ತು. ಆಗ ತಾನೇ ಮಗಳು ಹುಟ್ಟಿದ್ದಳು. ಆಗ ಕಷ್ಟದಲ್ಲಿ ಇದ್ದೆ. ಕೆಲಸ ಮಾಡು ಅಂತಾ ಎಲ್ಲರು ಹೇಳುವವರು. ಆಗ ನಮ್ಮ‌ತಂದೆ ಬಳಿ ಕೆಲಸ ಹೋಗುತ್ತೇನೆ ಎಂದೆ. ನನ್ನ ತಂದೆ ಹೇಳಿದ‌ ಒಂದು ಮಾತು ನಾನು ಸ್ಟಾರ್ ಆಗಿ ಇಲ್ಲಿ ನಿಂತಿದ್ದೇನೆ. ತಬಲನಾಣಿ ಸಿನಿಮಾರಂಗದಲ್ಲಿ ಆದ ಛಾಪೂ ಮೂಡಿಸಿದ್ದಾರೆ. ಹೆಮ್ಮೆಯಾಗುತ್ತದೆ ಈಗ ಸ್ನೇಹಿತರ ಜೊತೆಗೂಡಿ ಅವರು ನಿರ್ಮಾಪಕರು ಆಗಿದ್ದಾರೆ. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ಮೊದಲ ಪ್ರೊಡಕ್ಷನ್ ನಲ್ಲಿ ಹೊಸಬರಿಗೆ ಅವಕಾಶ ಕೊಟ್ಟಿದ್ದಾರೆ. ಅಥರ್ವ ಆರ್ಯ ಮೊದಲ ಸಿನಿಮಾದಲ್ಲಿ ಅದ್ಭುತ ಕಂಟೆಂಟ್ ತೆಗೆದುಕೊಂಡು ಬಂದಿದ್ದಾರೆ. ನಮಗೆಲ್ಲರಿಗೂ ಅವಕಾಶ ಕೊಟ್ಟಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿʼʼ ಎಂದರು.

ನಿರ್ದೇಶಕ ಅಥರ್ವ ಆರ್ಯ ಮಾತನಾಡಿ, ʻʻನಾವು ಮಂಡ್ಯದವರು. ಅಂಬರೀಶ್ ಅಣ್ಣ ಅಂದರೆ ನಮಗೆ ವಿಶೇಷವಾದ ಪ್ರೀತಿ. ಅವರು ರೋಲ್ ಮಾಡೆಲ್. ನಮಗೆ ಬುದ್ದಿ ಬಂದಾಗಿನಿಂದ ನಮ್ಮ ಫಸ್ಟ್ ಹೀರೋ ಯಾರು ಅಂದರೆ ಅಂಬರೀಶ್ ಅಣ್ಣ. ಅಂಬರೀಶ್ ಅಣ್ಣನ ಸಿನಿಮಾ ನೋಡಿಕೊಂಡು ಬಂದವರು ನಾವು. ಅಂಬಿಯಣ್ಣನ ಸ್ಫೂರ್ತಿಯಿಂದ ಇಂಡಸ್ಟ್ರೀಗೆ ಬಂದಿದ್ದೇವೆ. ಜೀವನದಲ್ಲಿ ಪ್ರತಿಯೊಬ್ಬ ಮಕ್ಕಳು ತಮ್ಮ ತಂದೆಗೆ ಅಪ್ಪ ಐ ಲವ್ ಯು ಅಂತಾ ಹೇಳಲೇಬೇಕು. ಚಿಕ್ಕವರು ಇದ್ದಾಗ ಹೇಳುವುದು ಸಾಮಾನ್ಯ. ವಯಸ್ಸಾಗಿ, ಏನೂ ಆಗುತ್ತಿಲ್ಲ ಅಂತಾದಾಗ ಅವರ ಮುಂದೆ ನಿಂತು ಅಪ್ಪಾ ಐ ಲವ್ ಯು ಅಂತಾ ಹೇಳಬೇಕು. ಅವರ ಪ್ರೀತಿಗೆ,ತ್ಯಾಗಕ್ಕೆ ನಾವು ಪ್ರತಿಫಲ ಕೊಡಬೇಕು ಅಂದಾಗ ಅಪ್ಪಾ ಐ ಲವ್ ಯು ಅಂತಾ ಹೇಳಬೇಕು. ಸಂಸಾರದಲ್ಲಿ ಅಪ್ಪ ಎಷ್ಟು ಮುಖ್ಯ. ಸಮಾಜಕ್ಕೆ ತಂದೆ ಸ್ಥಾನ ಏನು ಅನ್ನೋದು ಕಥೆಯ ತಿರುಳುʼʼ ಎಂದರು.

ಇದನ್ನೂ ಓದಿ: Weekend With Ramesh: ಕನಸು ನನಸಾಗಲು ತಾಳಿ ಅಡ ಇಟ್ಟಿದ್ದಳು: ನೆನಪಿರಲಿ ಪ್ರೇಮ್‌ ಭಾವುಕ

ಅಪ್ಪ-ಮಗನ ಬಾಂಧವ್ಯದ ಗೀತೆಯಾಗಿರುವ ಮನೆಗೊಂದು ಮಾಳಿಗೆ ಹಾಡಿಗೆ ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಆಕಾಶ್ ಪರ್ವ ಸಂಗೀತ ಒದಗಿಸಿದ್ದಾರೆ. ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

ಜೂಟಾಟ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಅಥರ್ವ್ ಆರ್ಯ ಅಪ್ಪಾ ಐ ಲವ್ ಯೂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಎರಡನೇ ಪ್ರಯತ್ನ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದೇ ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಅಪ್ಪಾ ಐ ಲವ್ ಯೂ ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, k. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. K R.S ಪ್ರೊಡಕ್ಷನ್ಸ್ ನ ಚೊಚ್ಚಲ ಕಾಣಿಕೆ‌ ಅಪ್ಪಾ ಐ ಲವ್ ಯೂ ಸಿನಿಮಾ.

Exit mobile version