Divya Uruduga: ʼಅರುʼ ಭೇಟಿ ಮಾಡಿ ಇಂದಿಗೆ 1000 ದಿನ ಆಯ್ತಂತೆ; ಖುಷಿ ಪಟ್ಟ ದಿವ್ಯಾ ಉರುಡುಗ! - Vistara News

ಸಿನಿಮಾ

Divya Uruduga: ʼಅರುʼ ಭೇಟಿ ಮಾಡಿ ಇಂದಿಗೆ 1000 ದಿನ ಆಯ್ತಂತೆ; ಖುಷಿ ಪಟ್ಟ ದಿವ್ಯಾ ಉರುಡುಗ!

Divya Uruduga:  ಅರವಿಂದ್ ಕೆಪಿ ಜತೆಗಿನ ಫೋಟೋನ ದಿವ್ಯಾ ಹಂಚಿಕೊಂಡಿದ್ದಾರೆ. ‘ನಿಮ್ಮ ಜತೆ ಒಂದು ಸಾವಿರ ಗೋಲ್ಡನ್ ದಿನಗಳು. ನಿಮ್ಮ ಬಗ್ಗೆ ಆಲೋಚಿಸಿದಾಗ ನಾನೆಷ್ಟು ಲಕ್ಕಿ ಎಂಬುದು ಮನಸ್ಸಿಗೆ ಬರುತ್ತದೆ’ ಎಂದು ದಿವ್ಯಾ ಉರುಡುಗ ಬರೆದುಕೊಂಡಿದ್ದಾರೆ.

VISTARANEWS.COM


on

Aravind Kp And Divya Uruduga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Divya Uruduga
ಬಿಗ್‌ಬಾಸ್ ಜೋಡಿ ದಿವ್ಯಾ ಉರುಡುಗ (Divya Uruduga) ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ (aravind kp).ಬಂಧ ಗಟ್ಟಿ ಆಗುತ್ತಲೇ ಇದೆ.
Divya Uruduga
ಅರವಿಂದ್ ಕೆಪಿ ಜತೆಗಿನ ಫೋಟೋನ ದಿವ್ಯಾ ಹಂಚಿಕೊಂಡಿದ್ದಾರೆ. ‘ನಿಮ್ಮ ಜತೆ ಒಂದು ಸಾವಿರ ಗೋಲ್ಡನ್ ದಿನಗಳು. ನಿಮ್ಮ ಬಗ್ಗೆ ಆಲೋಚಿಸಿದಾಗ ನಾನೆಷ್ಟು ಲಕ್ಕಿ ಎಂಬುದು ಮನಸ್ಸಿಗೆ ಬರುತ್ತದೆ’ ಎಂದು ದಿವ್ಯಾ ಉರುಡುಗ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Divya Uruduga: ಮದುವೆಯ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿದ ದಿವ್ಯಾ ಉರುಡುಗ-ಅರವಿಂದ್ ಕೆಪಿ?

Divya Uruduga

ಜೋಡಿ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎನ್ನಲಾಗಿದೆ. ವಿನಾಯಕನ ದೇವಸ್ಥಾನಕ್ಕೆ ಭೇಟಿ ಕೊಟ್ಟ ದಿವ್ಯಾ ಉರುಡುಗ ಹಾಗೂ ಅರವಿಂದ್, ಮದುವೆಯ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿರುವ ವಿಡಿಯೊ ವೈರಲ್‌ ಆಗಿತ್ತು.

ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಅರ್ಧಂಬರ್ಧ’ ಪ್ರೇಮಕಥೆಯಲ್ಲಿ ಇವರೇ ನಾಯಕ ನಾಯಕಿ. 

Divya Uruduga

ಕನ್ನಡ ಬಿಗ್ ಬಾಸ್ ಸೀಸನ್ 8’ 2021ರ ಮೇ 8ರಂದು ಆರಂಭ ಆಯಿತು. ಅಂದು ಇಬ್ಬರು ಪರಸ್ಪರ ಭೇಟಿ ಆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಾಲಿವುಡ್

Varalaxmi Sarathkumar: ʻಮಾಣಿಕ್ಯʼನಟಿಯ ಭಾವಿ ಪತಿಗೆ ಇದು 2ನೇ ಮದುವೆ? ಮೊದಲ ಪತ್ನಿ ಖ್ಯಾತ ಮಾಡೆಲ್!

Varalaxmi Sarathkumar: ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಆರ್ಟ್ ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ (Nicholai Sachdev) ಅವರೊಂದಿಗೆ ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.  ಆದರೆ ನಿಕೋಲಾಯ್ ಸಚ್‌ದೇವ್ ಅವರಿಗೆ ಇದು ಎರಡನೇ ಮದುವೆ ಎನ್ನಲಾಗಿದೆ.

VISTARANEWS.COM


on

Varalaxmi Sarathkumar Nicholai Sachdev to be husband first wife
Koo

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದಾರೆ. ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಆರ್ಟ್ ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ (Nicholai Sachdev) ಅವರೊಂದಿಗೆ ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.  ಆದರೆ ನಿಕೋಲಾಯ್ ಸಚ್‌ದೇವ್ ಅವರಿಗೆ ಇದು ಎರಡನೇ ಮದುವೆ ಎನ್ನಲಾಗಿದೆ.

ನಿಕೋಲಾಯ್ ಸಚ್‌ದೇವ್ ಅವರು ಮಾಡೆಲ್ ಕವಿತಾ ಅವರನ್ನು ಮದುವೆಯಾಗಿದ್ದರು. 2010ರಲ್ಲಿ ಮಿಸ್ ಗ್ಲಾಡ್ರಾಗ್ಸ್ ಆಗಿ ಹೊರಹೊಮ್ಮಿದ್ದರು. 2007 ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಮಿಸ್ ಗ್ಲೋಬ್ 2011 ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎಂದು ವರದಿಯಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಿಟ್ಟುಕೊಂಡಿದ್ದರು. ನಿಕೋಲಾಯ್ ಹಾಗೂ ಕವಿತಾ ವಿಚ್ಛೇದನದ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

ಇದನ್ನೂ ಓದಿ: Varalaxmi Sarathkumar:‌ 14 ವರ್ಷದ ಪ್ರೀತಿಗೆ 38ನೇ ವಯಸ್ಸಿನಲ್ಲಿ ನಿಶ್ಚಿತಾರ್ಥದ ಮುದ್ರೆ ಹಾಕಿದ ಮಾಣಿಕ್ಯ ನಟಿ!

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ

Continue Reading

ಫ್ಯಾಷನ್

Nita Ambani: ಮಗನ ಮದುವೆ: ಕೈ ಮಗ್ಗದ ಕಾಂಚೀವರಂ ಸೀರೆಯುಟ್ಟು ಮಿಂಚಿದ ನೀತಾ ಅಂಬಾನಿ!

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

VISTARANEWS.COM


on

Nita Ambani Kanchipuram sari at Anant-Radhika pre-wedding
Koo

ಅನಂತ್ ಅಂಬಾನಿ (Nita Ambani) ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ಕೈಮಗ್ಗದ ಕಾಂಚೀಪುರಂ ಸೀರೆಯನ್ನು ಧರಿಸಿದ್ದರು. ಈ ಸೀರೆಯ ವಿಶೇಷತೆ ಏನೆಂದರೆ, ಇದು ದಕ್ಷಿಣ ಭಾರತದ ನೇಕಾರರು ಕೈಯಿಂದಲೇ ಸಿದ್ಧಪಡಿಸಿದ್ದಾಗಿದೆ. ಇದನ್ನು ಕೈ ಮಗ್ಗದ ಸೀರೆ ಎನ್ನಲಾಗುತ್ತದೆ. ಯಂತ್ರಗಳಿಂದ ಅಲ್ಲದೆ, ಕುಶಲಕರ್ಮಿಗಳು ತಮಗೆ ತಲೆತಲಾಂತರದಿಂದ ಬಂದಂಥ ಅದ್ಭುತ ಕಲೆಯನ್ನು ಮೂಡಿಸಿರುವಂಥ ಮೇರು ಕಲಾಕೃತಿ ಇದು. ಭಾರತೀಯ ಸಾಂಪ್ರದಾಯಿಕ ಕರಕುಶಲತೆ ಬಗ್ಗೆ ನೀತಾ ಅಂಬಾನಿ ಅವರಿಗೆ ಇರುವಂಥ ಗೌರವ, ಪ್ರೀತಿಯನ್ನು ವ್ಯಕ್ತಪಡಿಸುವುದಕ್ಕೆ ಇದು ಇನ್ನೊಂದು ಸುಮಧುರ ಕ್ಷಣವಾಗಿತ್ತು.

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

ರಿಲಯನ್ಸ್ ನ ಸ್ವದೇಶ್ ಎಂಬ ಉಪಕ್ರಮವು ಸಮುದಾಯಗಳ ಕೈ ಬಲಪಡಿಸುತ್ತದೆ ಹಾಗೂ ಪಾರಂಪರಿಕ ಕರಕುಶಲತೆಯ ಸಂರಕ್ಷಣೆ ಮಾಡುತ್ತದೆ.

ಇದನ್ನೂ ಓದಿ: Nita Ambani: ಅನಂತ್ ಅಂಬಾನಿ ಮದುವೆ: ವಿಶ್ವಂಭರಿ ಸ್ತುತಿಗೆ ನೀತಾ ಅಂಬಾನಿ ಅದ್ಭುತ ನೃತ್ಯ!

ವಿಶ್ವಂಭರಿ ಸ್ತುತಿಗೆ ಅದ್ಭುತ ನೃತ್ಯ ಪ್ರದರ್ಶನ ನೀಡಿದ ನೀತಾ ಅಂಬಾನಿ

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಮಗ ಅನಂತ್ ಹಾಗೂ ರಾಧಿಕಾ ಮರ್ಚಂಟ್ ವಿವಾಹ ಪೂರ್ವ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದಿದೆ. ನೀತಾ ಅಂಬಾನಿ ಹಾಗೂ ಅವರ ಜತೆಗೆ ಇತರರು ಸೇರಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಿದ್ದಾರೆ. ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡಿದ್ದು, ವಿಶಾಲವಾದ ವೇದಿಕೆಯಲ್ಲಿ ಈ ಸಮಾರಂಭಕ್ಕೆ ಇನ್ನಷ್ಟು ಕಳೆ ಕಟ್ಟುವಂತೆ ಮಾಡಿದ್ದಾರೆ.

ಅಂದ ಹಾಗೆ, ಅನಂತ್ ಅಂಬಾನಿ ಅವರ ಭಾವೀ ಪತ್ನಿ ರಾಧಿಕಾ ಮರ್ಚಂಟ್ ಸಹ ಅತ್ಯುತ್ತಮ ನೃತ್ಯಪಟು. ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಸ್ವತಃ ನೀತಾ ಅಂಬಾನಿ ಅವರು ಈ ಹಿಂದೆಯೂ ಸಹ ನೃತ್ಯ ಪ್ರದರ್ಶನವನ್ನು ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಭಾರತೀಯ ಸಂಪ್ರದಾಯದಂತೆ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಅತಿಥಿ ಸತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವತಾ ಆರಾಧನೆ ಹೀಗೆ ವಿವಿಧ ರೀತಿಯ ಆಚರಣೆಗಳನ್ನು ಮಾಡಲಾಗುತ್ತದೆ.

Continue Reading

ಸ್ಯಾಂಡಲ್ ವುಡ್

Actor Upendra: ‘UI’ ಹಾಡಲ್ಲಿ ತಗಡು, ಗುಮ್ಮಿಸ್ಕೋತಿಯಾ: ಉಪ್ಪಿ ಗುಮ್ಮಿದ್ದು ಯಾರ‍್ಯಾರಿಗೆ?

Actor Upendra: ಇನ್ನು ದರ್ಶನ್‌ ಅವರ ವಿವಾದಾತ್ಮಕ ಹೇಳಿಕೆಯಾದ ʻತಗಡುʼ, ಗುಮ್ಮಿಸ್ಕೋತಿಯಾ ಪದವನ್ನೂ ಹಾಡಿನಲ್ಲಿ ಬಳಕೆ ಮಾಡಲಾಗಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಸಾಂಗ್‌ ಸಖತ್‌ ಕಿಕ್‌ ನೀಡುತ್ತಿದೆ ಎನ್ನುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Troll Song UI TheMovie Out
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ಅವರ ‘ಯುಐ’ ಸಿನಿಮಾ ಹೊಸ ಅಪ್‌ಡೇಟ್‌ಗಳೊಂದಿಗೆ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡುತ್ತಲೇ ಬಂದಿದೆ. ಇದೀಗ ಸಿನಿಮಾದ ಸಾಂಗ್‌ವೊಂದು ಔಟ್‌ ಆಗಿದೆ. ವಿಶೇಷ ಅಂದರೆ ಬೆಳ್ಳುಳ್ಳಿ ಕಬಾಬ್‌, ಕರಿಮಣಿ ಮಾಲೀಕ ಹೀಗೆ ಹಲವಾರು ಟ್ರೆಂಡ್‌ ರೀಲ್ಸ್‌ಗಳನ್ನೇ ಇಟ್ಟುಕೊಂಡು ಹಾಡನ್ನು ಕಂಪೋಸ್‌ ಮಾಡಲಾಗಿದೆ. ಇನ್ನು ದರ್ಶನ್‌ ಅವರ ವಿವಾದಾತ್ಮಕ ಹೇಳಿಕೆಯಾದ ʻತಗಡುʼ, ಗುಮ್ಮಿಸ್ಕೋತಿಯಾ ಪದವನ್ನೂ ಹಾಡಿನಲ್ಲಿ ಬಳಕೆ ಮಾಡಲಾಗಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಸಾಂಗ್‌ ಸಖತ್‌ ಕಿಕ್‌ ನೀಡುತ್ತಿದೆ ಎನ್ನುತ್ತಿದ್ದಾರೆ ಫ್ಯಾನ್ಸ್‌.

ಕ್ಯಾಚಿಯಾಗಿ ಮೂಡಿಬಂದ ʻUIʼ ಸಿನಿಮಾದ ಈ ಟ್ರೋಲ್‌ ಸಾಂಗ್‌ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಬೆಳ್ಳುಳ್ಳಿ ಕಬಾಬ್, ಕರಿಮಣಿ ಮಾಲೀಕ, ನಂದಿನಿ ರೀಲ್ಸ್‌, ಲಾರಿ ಡ್ರೈವರಾ, ಸುಂದರಿ ಸನ್ಯಾಸಿ, ಬಿಸಿ ರಾಗಿ ಮುದ್ದೆ ಹೀಗೆ ಈಗಿನ ಟ್ರೆಂಡ್‌ ರೀಲ್ಸ್‌ಗಳನ್ನೇ ಬಳಸಿಕೊಂಡು ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಹಾಡಿದರೆ, ನರೇಶ್ ಕುಮಾರ್ ಎಚ್.ಎನ್ ಅವರ ಸಾಹಿತ್ಯ ಈ ಹಾಡಿಗಿದೆ. ಇನ್ನು ದರ್ಶನ್‌ ಅವರ ವಿವಾದಾತ್ಮಕ ಹೇಳಿಕೆಯಾದ ತಗಡು, ಗುಮ್ಮಿಸ್ಕೊತೀಯಾ ಪದವನ್ನೂ ಹಾಡಿನಲ್ಲಿ ಬಳಕೆ ಮಾಡಲಾಗಿದೆ.

ಇದೀಗ ಈ ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂ. ಎಂದು ವರದಿಗಳಾಗಿವೆ. ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು‌ ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್‌ ಹಾಕಿ, ಮೈಕ್‌ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Upendra: ‘ಕೆರೆಬೇಟೆ’ ಸಿನಿಮಾದ ಹಾಡು ರಿಲೀಸ್‌ ಮಾಡಿದ ರಿಯಲ್‌ ಸ್ಟಾರ್‌ ಉಪೇಂದ್ರ!

ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ.

ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಷ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ದುಬಾರಿ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

Continue Reading

ಬಾಲಿವುಡ್

Aaradhya Bachchan: ಅಬ್ಬಾ.. ಅಂತೂ ಐಶ್ವರ್ಯಾ ರೈ ಪುತ್ರಿ ಹಣೆ ನೋಡಿದ್ವಲ್ಲ! ನಿಟ್ಟುಸಿರು ಬಿಟ್ಟ ನೆಟ್ಟಿಗರು!

Aaradhya Bachchan: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಹೇರ್‌ಸ್ಟೈಲ್‌ ಹೈಲೈಟ್‌ ಆಗಿದೆ. ಅಂತೂ ಹೇರ್‌ ಸ್ಟೈಲ್‌ ಚೇಂಜ್‌ ಆಯ್ತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ ನೆಟ್ಟಿಗರು!

VISTARANEWS.COM


on

Aaradhya Bachchan flaunts new hairstyle for Ambanis bash
Koo

ಬೆಂಗಳೂರು: ಬಚ್ಚನ್ ಕುಟುಂಬ ಭಾನುವಾರ ಸಂಜೆ (ಮಾ.3) ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಭಾಗವಹಿಸಿದ್ದರು. ಕುಟುಂಬ ಸದಸ್ಯರ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಹೇರ್‌ಸ್ಟೈಲ್‌ ಹೈಲೈಟ್‌ ಆಗಿದೆ. ಅಂತೂ ಹೇರ್‌ ಸ್ಟೈಲ್‌ ಚೇಂಜ್‌ ಆಯ್ತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ ನೆಟ್ಟಿಗರು!

ಕೆಲವು ವರ್ಷಗಳಿಂದ ಆರಾಧ್ಯ ಅವರು ಯಾವಾಗಲೂ ಒಂದೇ ಹೇರ್‌ಸ್ಟೈಲ್‌ನೊಂದಿಗೆ ಕಾಣಿಸಿಕೊಳ್ಳುತ್ತಿದ್ದರು. ಈಗ ಫ್ರೀ ಹೇರ್ಸ್‌ ಬಿಟ್ಟು ಕ್ಯೂಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ ಆರಾಧ್ಯ. ಆರಾಧ್ಯ ಅವರ ಹೊಸ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ವ್ಯಕ್ತಿಯೊಬ್ಬರು, “ಆ ಬ್ಯಾಂಗ್ಸ್ ಇಲ್ಲದೆ ಆರಾಧ್ಯ ತುಂಬಾ ಸುಂದರವಾಗಿ ಕಾಣುತ್ತಾಳೆ” ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಬ್ಬರು ʻಐಶ್ವರ್ಯಾ ಅವರ ಪ್ರತಿರೂಪ. ಈಗ ಐಶ್ವರ್ಯಾ ಚಿಕ್ಕವಳಂತೆ ಕಾಣುತ್ತಾಳೆʼʼಎಂದು ಕಮೆಂಟ್‌ ಮಾಡಿದ್ದಾರೆ.

ಪಾರ್ಟಿಗಾಗಿ ಆರಾಧ್ಯ ಗುಲಾಬಿ ಮತ್ತು ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಐಶ್ವರ್ಯಾ ಕ್ರೀಂ ಕಲರ್‌ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

ಇದನ್ನೂ ಓದಿ: Aaradhya Bachchan: ಆರಾಧ್ಯ ಬಚ್ಚನ್‌ ಬಗ್ಗೆ ಇರುವ ಸುಳ್ಳು ವಿಡಿಯೊಗಳನ್ನು ತೆಗೆದುಹಾಕಿ: ಯೂಟ್ಯೂಬ್‌ಗೆ ಹೈಕೋರ್ಟ್‌ ಸೂಚನೆ

ಶಾರುಖ್‌, ಸಲ್ಮಾನ್ ಮತ್ತು ಆಮೀರ್ ಹೊರತುಪಡಿಸಿ, ಹಲವಾರು ಬಾಲಿವುಡ್ ತಾರೆಯರು ಈವೆಂಟ್‌ನಲ್ಲಿ ಕಾಣಿಸಿಕೊಂಡರು. ಇವರಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಆಡ್ವಾಣಿ, ಸೈಫ್ ಅಲಿ ಖಾನ್, ಕರೀನಾ ಕಪೂರ್ ಖಾನ್, ವರುಣ್ ಧವನ್, ಅನಿಲ್ ಕಪೂರ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಅನನ್ಯ ಪಾಂಡೆ ಮತ್ತು ಆದಿತ್ಯ ರಾಯ್ ಕಪೂರ್ ಸೇರಿದ್ದಾರೆ. ರಾಣಿ ಮುಖರ್ಜಿ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಹಾಜರಿದ್ದರು. ಎಂಎಸ್ ಧೋನಿ, ರೋಹಿತ್ ಶರ್ಮಾ ಮತ್ತು ಸಚಿನ್ ತೆಂಡೂಲ್ಕರ್ ಅವರಂತಹ ಕ್ರೀಡಾಪಟುಗಳು ಕೂಡ ಆಚರಣೆಯಲ್ಲಿ ಭಾಗವಹಿಸಿದ್ದರು.

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ, ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ ಉದ್ಯಮಿ ಮುಕೇಶ್‌ (Mukesh Ambani) ಅಂಬಾನಿ ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ವಿವಾಹ ಪೂರ್ವ ಸಂಭ್ರಮದ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವೇ ಧರೆಗಿಳಿದಿತ್ತು. ಸಾವಿರಾರು ಗಣ್ಯರ ಆಗಮನದ ಮಧ್ಯೆಯೇ ಅದ್ಧೂರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು.

Continue Reading
Advertisement
Missile Attack
ವಿದೇಶ16 mins ago

Missile Attack: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ; ಕೇರಳ ಮೂಲದ ವ್ಯಕ್ತಿ ಸಾವು

Raja Marga Column Beena das2
ಸ್ಫೂರ್ತಿ ಕತೆ2 hours ago

Raja Marga Column : ಕ್ರಾಂತಿ ಸಿಂಹಿಣಿ ಬೀನಾ ದಾಸ್! ಅನಾಥ ಶವದ ಪರ್ಸಲ್ಲಿತ್ತು ಸುಭಾಸ್ ಚಿತ್ರ!

Best Ways To Clean Fruits
ಆಹಾರ/ಅಡುಗೆ2 hours ago

Best Ways To Clean Fruits: ಹಣ್ಣುಗಳನ್ನು ತಿನ್ನುವ ಮೊದಲು ನೀವು ಈ ವಿಧಾನದಲ್ಲಿ ತೊಳೆದುಕೊಂಡಿದ್ದೀರಾ?

Sunny weather across the karnataka
ಮಳೆ3 hours ago

Karnataka Weather: ರಾಜ್ಯಾದ್ಯಂತ ಇಂದು ಬಿಸಿಲಿನ ವಾತಾವರಣ

Supreme Court On Udhayanidhi Stalin
ದೇಶ3 hours ago

ವಿಸ್ತಾರ ಸಂಪಾದಕೀಯ: ‘ಅಧರ್ಮ’ ಹೇಳಿಕೆಯ ಸ್ಟಾಲಿನ್‌ಗೆ ಸುಪ್ರೀಂ ಚಾಟಿ; ಇನ್ನಾದರೂ ಬುದ್ಧಿ ಬರಲಿ

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣಭಾಗ್ಯ

Water tanker to be seized if not registered by March 7‌ says DK Shivakumar
ಪ್ರಮುಖ ಸುದ್ದಿ9 hours ago

Water Crisis: ಮಾ. 7ರೊಳಗೆ ನೋಂದಣಿ ಮಾಡಿಸದಿದ್ರೆ ನೀರಿನ ಟ್ಯಾಂಕರ್‌ ಸೀಜ್, ಸರ್ಕಾರದಿಂದಲೇ ದರ ನಿಗದಿ: ಡಿಕೆಶಿ

Seema Haider Sachin Meena
ದೇಶ10 hours ago

3 ಕೋಟಿ ರೂ. ಕೇಳಿ ಪಾಕ್‌ನಿಂದಲೇ ನೋಟಿಸ್‌ ಕಳುಹಿಸಿದ ಸೀಮಾ ಹೈದರ್‌ ಮೊದಲ ಪತಿ!

Accused sent to police custody for raising pro-Pakistan slogans
ಪ್ರಮುಖ ಸುದ್ದಿ10 hours ago

Sedition Case: ಪಾಕ್‌ ಪರ ಘೋಷಣೆ ಕೂಗಿದವರಿಗೆ 3 ದಿನ ಪೊಲೀಸ್‌ ಕಸ್ಟಡಿ: ಕೋರ್ಟ್‌ ಆದೇಶ

Mouth Freshner
ದೇಶ10 hours ago

Mouth Freshener: ರೆಸ್ಟೋರೆಂಟ್‌ನಲ್ಲಿ ಮೌತ್‌ ಫ್ರೆಶ್‌ನರ್‌ ಬಳಸಿದ ಐವರಿಗೆ ರಕ್ತದ ವಾಂತಿ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ16 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ19 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌