Arjun Sarja: ಖ್ಯಾತ ಹಾಸ್ಯ ನಟನ ಪುತ್ರನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಾ ಅರ್ಜುನ್ ಸರ್ಜಾ ಪುತ್ರಿ? - Vistara News

South Cinema

Arjun Sarja: ಖ್ಯಾತ ಹಾಸ್ಯ ನಟನ ಪುತ್ರನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಾ ಅರ್ಜುನ್ ಸರ್ಜಾ ಪುತ್ರಿ?

Arjun Sarja: ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಈ ಜೋಡಿ ಸಾಕಷ್ಟು ಸಮಯದಿಂದ ಡೇಟಿಂಗ್ ನಡೆಸುತ್ತಿತ್ತು. ಇಬ್ಬರ ಮನೆಯಲ್ಲಿ ಮದುವೆ ಮಾತುಕತೆ ನಡೆದಿದೆ ಎಂದು ಕನಕರಾಜ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Arjun’s Daughter To Get Married
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ (Thambi Ramaiah) ಅವರ ಪುತ್ರ ಉಮಾಪತಿ ರಾಮಯ್ಯ (Umapathy Ramaiah) ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಈ ಜೋಡಿ ಸಾಕಷ್ಟು ಸಮಯದಿಂದ ಡೇಟಿಂಗ್ ನಡೆಸುತ್ತಿತ್ತು. ಇಬ್ಬರ ಮನೆಯಲ್ಲಿ ಮದುವೆ ಮಾತುಕತೆ ನಡೆದಿದೆ ಎಂದು ಕನಕರಾಜ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

80-90ರ ದಶಕದ ಪ್ರಮುಖ ನಾಯಕರಲ್ಲಿ ಒಬ್ಬರಾದ ಅರ್ಜುನ್ ಸರ್ಜಾ ಬಹುಭಾಷಾ ನಟ. 1998ರಲ್ಲಿ ಆಶಾ ರಾಣಿ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಅಂಜನಾ ಇಬ್ಬರು ಪುತ್ರಿಯರು. ʼಪ್ರೇಮ ಬರಹʼ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಪದಾರ್ಪಣೆ ಮಾಡಿದರು. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಜತೆಗೆ ಐಶ್ವರ್ಯ ತೆರೆ ಹಂಚಿಕೊಳ್ಳಲಿದ್ದಾರೆ. ಇದು ತೆಲುಗು ಸಿನಿಮಾವಾಗಿದೆ. ಅರ್ಜುನ್ ಸರ್ಜಾ ನಿರ್ಮಾಣ ಹಾಗೂ ನಿರ್ದೇಶನವಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ-ನಿರ್ದೇಶಕ ತಂಬಿ ರಾಮಯ್ಯ ಅವರ ಪುತ್ರ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಐಶ್ವರ್ಯ ಸರ್ಜಾ ಬಹಳ ಸಮಯದಿಂದ ಡೇಟಿಂಗ್‌ ನಡೆಸುತ್ತಿದ್ದರು ಎಂದು ವರದಿಯಾಗಿತ್ತು. ಎರಡೂ ಕುಟುಂಬಗಳ ಆಶೀರ್ವಾದದೊಂದಿಗೆ ಅವರು ಶೀಘ್ರದಲ್ಲೇ ಮದುವೆಯಾಗಲು ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಂಬಿ ರಾಮಯ್ಯ ಅವರು ಮದುವೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Aishwarya Arjun | ಐಶ್ವರ್ಯ ಸರ್ಜಾ ಚಿತ್ರಕ್ಕೆ ಆ್ಯಕ್ಷನ್‌ ಕಿಂಗ್‌ ಆ್ಯಕ್ಷನ್‌ ಕಟ್

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ. ಇದೀಗ ಈ ಜೋಡಿಯ ಸಂಬಂಧಕ್ಕೆ ಹಿರಿಯರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading

ಟಾಲಿವುಡ್

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

VISTARANEWS.COM


on

Maharaja trailer released Vijay Sethupathi has a secret
Koo

ಬೆಂಗಳೂರು: ನಟ ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʻಮಹಾರಾಜʼ ಟ್ರೈಲರ್‌ (Maharaja Trailer) ಬಿಡುಗಡೆಯಾಗಿದೆ. ನಿಥಿಲನ್ ಸಾಮಿನಾಥನ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ಮತ್ತು ಅನುರಾಗ್ ಕಶ್ಯಪ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ರೈಲರ್‌ನಲ್ಲಿ ನೋಡಿದಾಗ ವಿಜಯ್ ಕ್ಷೌರಿಕ ಪಾತ್ರ ನಿಭಾಯಿಸಿದ್ದಾರೆ. ನಾಪತ್ತೆಯಾದ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ಟ್ರೈಲರ್‌ನಲ್ಲಿ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಚಿನ್ನ, ಹಣ,ಸಹೋದರಿ, ಹೆಂಡತಿ , ಮಗು ಯಾವುದು ಅಲ್ಲ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

ಇದನ್ನೂ ಓದಿ: Air India Maharaja : ಏರ್‌ ಇಂಡಿಯಾ ರಿಬ್ರಾಂಡಿಂಗ್‌, ಮಹಾರಾಜ ನೇಪಥ್ಯಕ್ಕೆ?

ಮಹಾರಾಜ ಚಿತ್ರದಲ್ಲಿ ಮಮತಾ ಮೋಹನ್‌ದಾಸ್, ನಟರಾಜ್ , ಭಾರತಿರಾಜ, ಅಭಿರಾಮಿ, ಸಿಂಗಂಪುಲಿ ಮತ್ತು ಕಲ್ಕಿ ಕೂಡ ನಟಿಸಿದ್ದಾರೆ. ಪ್ಯಾಶನ್ ಸ್ಟುಡಿಯೋಸ್ ಮತ್ತು ದಿ ರೂಟ್ ಅಡಿಯಲ್ಲಿ ಸುಧನ್ ಸುಂದರಂ ಮತ್ತು ಜಗದೀಶ್ ಪಳನಿಸಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಹಾರಾಜ ಚಿತ್ರದ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಈ ಹಿಂದೆ ನಟ ಈ ಸಿನಿಮಾ ಕುರಿತು ಮಾತನಾಡಿ ʻʻʻ50ನೇ ಸಿನಿಮಾವನ್ನು ನಿರೀಕ್ಷಿಸಿರಲಿಲ್ಲ. ಇದು ಮೈಲಿಗಲ್ಲಿನಂತಿದೆ. ನಾವು ಎಷ್ಟು ದೂರ ಬಂದಿದ್ದೇವೆ ಎಂಬುದದಕ್ಕೆ ಒಂದು ಭರವಸೆ ಇದು. ಒಳ್ಳೆಯ ಅನುಭವ ನೀಡಿದ ಎಲ್ಲಾ ನಿರ್ದೇಶಕರು ಮತ್ತು ಕಲಾವಿದರಿಗೆ ಧನ್ಯವಾದಗಳು” ಎಂದಿದ್ದರು.

“ನಾನ್ ಮಹಾನ್ ಅಲ್ಲಾ ಚಿತ್ರದ ಡಬ್ಬಿಂಗ್ ಮುಗಿದ ನಂತರ, ಅರುಲ್ದಾಸ್ ಅಣ್ಣನ್ ಮತ್ತು ನಾನು ಪರಸ್ಪರರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡೆವು. ಇದ್ದಕ್ಕಿದ್ದಂತೆ ಒಂದು ದಿನ ಎರಡು ಮಿಸ್ಡ್ ಕಾಲ್‌ಗಳಿದ್ದವು. ನಾವು ಮತ್ತೆ ಕರೆ ಮಾಡಿದಾಗ, ನಮ್ಮ ಸ್ನೇಹಿತ ಸೀನು ರಾಮಸಾಮಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಯಾವುದೇ ಪಾತ್ರ ಕೊಟ್ಟರೂ ಸಿನಿಮಾ ಮಾಡು ಎಂದು ಹೇಳಿದ್ದರು. ಆಮೇಲೆ ಹೋಗಿ ಸೀನು ರಾಮಸಾಮಿ ಸರ್ ಅವರನ್ನು ನೋಡಿದೆ. ಆ ನಂತರ ನಡೆದಿದ್ದೆಲ್ಲ ಇತಿಹಾಸ, ಈಗ ಈ ಹಂತ ತಲುಪಿದ್ದೇನೆ. ತುಂಬಾ ಧನ್ಯವಾದಗಳು ಅರುಲ್ದಾಸ್. ಧನ್ಯವಾದಗಳು ಸೀನು ಸರ್. ಈ ಕ್ಷಣಕ್ಕೆ ಧನ್ಯವಾದಗಳುʼʼ ಎಂದು ಹೇಳಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

Kannada New Movie: ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

VISTARANEWS.COM


on

back benchers Movie Kannada song
Koo

ಬೆಂಗಳೂರು: ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ (Kannada New Movie) ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್ “. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ “ಬ್ಯಾಕ್ ಬೆಂಚರ್ಸ್” ಚಿತ್ರದ “ಯಲ್ಲೋ ಯಲ್ಲೋ” ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ “ಬ್ಯಾಕ್ ಬೆಂಚರ್ಸ್” ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ ಎಂದು ಮಾತನಾಡಿದ ನಿರ್ದೇಶಕ, ನಿರ್ಮಾಪಕ ಬಿ.ಆರ್ ರಾಜಶೇಖರ್, ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮುಂದಿನ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುʼʼ ಎಂದರು.

ಇದನ್ನೂ ಓದಿ: Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

ಇದನ್ನೂ ಓದಿ: Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

ʻʻನಿರ್ದೇಶಕ ರಾಜಶೇಖರ್ ಅವರು ನಮಗೆಲ್ಲಾ ನೀಡಿದ ಪ್ರೋತ್ಸಹ ಅಷ್ಟಿಷ್ಟಲ್ಲ. ನಮ್ಮಗೆಲ್ಲಾ ಇದು ಮೊದಲ ಚಿತ್ರ. ಆದರೆ ನಮಗೆ ನಟನೆ ಹೊಸತಲ್ಲ‌‌. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ ಬಂದ ಮೇಲು ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆʼʼ ಎಂದು “ಬ್ಯಾಕ್ ಬೆಂಚರ್ಸ್ ” ಚಿತ್ರದಲ್ಲಿ ನಟಿಸಿರುವ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್ ಹೆಚ್, ಮನೋಜ್ ಶೆಟ್ಟಿ ಮುಂತಾದವರು ತಿಳಿಸಿದರು.

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

Continue Reading

South Cinema

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

Nandamuri Balakrishna: ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

VISTARANEWS.COM


on

Nandamuri Balakrishna pushed incident Anjali breaks silence
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದಾರೆ, “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Nandamuri Balakrishna: ಕುಡಿದು ಬಂದು ವೇದಿಕೆ ಮೇಲೆ ನಟಿ ಅಂಜಲಿಯನ್ನು ತಳ್ಳಿದ್ರಾ ಬಾಲಯ್ಯ?

ಆಗಿದ್ದೇನು?

. ‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಬಾಲಕೃಷ್ಣ ‘ಅಖಂಡ’ ಮತ್ತು ‘ವೀರಸಿಂಹ ರೆಡ್ಡಿ’ಯಂತಹ ಹಿಟ್‌ ಸಿನಿಮಾಗಳಿಂದ ಸುದ್ದಿ ಮಾಡುತ್ತಿದ್ದಾರೆ. ‘ಅಖಂಡ 2’ ಗಾಗಿ ನಿರ್ದೇಶಕ ಬೋಯಪತಿ ಶ್ರೀನು ಅವರೊಂದಿಗೆ ಕೈಜೋಡಿಸಲು ಯೋಜಿಸುತ್ತಿದ್ದಾರೆ.

Continue Reading
Advertisement
Bhavani Reavanna
ಕರ್ನಾಟಕ26 mins ago

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Gold Rate Today
ಚಿನ್ನದ ದರ27 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Physical Abuse
ಕಲಬುರಗಿ27 mins ago

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Spelling Bee
ವಿದೇಶ33 mins ago

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Nivetha Pethuraj heated argument video with cops
ಟಾಲಿವುಡ್41 mins ago

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

T20 World Cup 2024
ಕ್ರಿಕೆಟ್46 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

Rameshwaram Cafe
ವೈರಲ್ ನ್ಯೂಸ್1 hour ago

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ1 hour ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ1 hour ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ1 hour ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ24 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌