Site icon Vistara News

Art Director Nitin Desai: ನಿತಿನ್ ಪೋಸ್ಟ್ ಮಾರ್ಟಂ ವರದಿಯಲ್ಲಿ ಏನಿದೆ? ಆತ್ಮಹತ್ಯೆಗೆ ಕಾರಣವೇನು?

Art Director Nitin Desai

ಬೆಂಗಳೂರು: ಬಾಲಿವುಡ್ ಕಲಾ ನಿರ್ದೇಶಕ ನಿತಿನ್ ಚಂದ್ರಕಾಂತ್ ದೇಸಾಯಿ (Art Director Nitin Desai) ಜುಲೈ 2ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮರಣೋತ್ತರ ಪರೀಕ್ಷೆಯನ್ನು ನಾಲ್ವರು ವೈದ್ಯರ ತಂಡ ನಡೆಸಿದೆ. ಮರಣೋತ್ತರ ವರದಿ ಪ್ರಕಾರ ನಿತಿನ್ ಚಂದ್ರಕಾಂತ್ ದೇಸಾಯಿ ನೇಣು ಬಿಗಿದುಕೊಂಡೇ ಮೃತಪಟ್ಟಿರುವುದಾಗಿ ರಾಯಗಢ ಪೊಲೀಸರು ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರ ಮೃತದೇಹವನ್ನು ಖಲಾಪುರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ತಂದಿದ್ದರು. ನಿತಿನ್ ದೇಸಾಯಿ ಅವರು ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅವರ ಸ್ಟುಡಿಯೊದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಜುಲೈ 2ರಂದು ತಿಳಿಸಿದ್ದರು. ಪೊಲೀಸರ ಪ್ರಕಾರ ದೇಸಾಯಿ ಅವರು ಮುಂಬೈನ ಹೊರಗೆ ಸುಮಾರು 80 ಕಿಮೀ ದೂರದಲ್ಲಿರುವ ಕರ್ಜತ್‌ನಲ್ಲಿರುವ ಅವರ ಎನ್‌ಡಿ ಸ್ಟುಡಿಯೊದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು.

ಬಿಜೆಪಿ ಶಾಸಕ ಮಹೇಶ್ ಬಾಲ್ಡಿ ಈ ಬಗ್ಗೆ , ‘ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ನಿತಿನ್, ಎರಡು ತಿಂಗಳ ಹಿಂದೆ ನನ್ನ ಬಳಿ ಈ ವಿಷಯವನ್ನು ಹಂಚಿಕೊಂಡಿದ್ದರು. ತಮ್ಮ ಎನ್‌ಡಿ ಸ್ಟುಡಿಯೊ ಪರಿಸ್ಥಿತಿ ಉತ್ತಮವಾಗಿಲ್ಲ. ಚಿತ್ರೀಕರಣಗಳು ನಡೆಯುತ್ತಿಲ್ಲ. ಮಳೆಗಾಲದ ನಂತರ ಚಿತ್ರಗಳು ಬರಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದರು. ಆರ್ಥಿಕ ಸಂಕಷ್ಟವೇ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಿರಬಹುದು’ ಎಂತಲೂ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Art Director Nitin Desai: ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

ರಾಯಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೋಮನಾಥ್ ಘರ್ಗೆ ಅವರು ಈ ಬಗ್ಗೆ, “ ನಿತಿನ್ ಚಂದ್ರಕಾಂತ್ ದೇಸಾಯಿ ಅಂತ್ಯಕ್ರಿಯೆ ಎನ್‌ಡಿ ಸ್ಟುಡಿಯೊದಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಸದಸ್ಯರು ನಮಗೆ ತಿಳಿಸಿದ್ದಾರೆ. ಅವರ ಮೃತದೇಹವನ್ನು ಜೆಜೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಅಷ್ಟೇ ಅಲ್ಲದೇ ಅಧಿಕಾರಿ ಮಾತನಾಡಿ “ನಾವು ಸ್ಥಳದಲ್ಲಿ ಪತ್ತೆಯಾದ ಮೊಬೈಲ್‌ಗಳು, ಇತರ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಕೇರ್‌ಟೇಕರ್ ಮತ್ತು ಡ್ರೈವರ್‌ ಹೇಳಿಕೆಯನ್ನು ಸಹ ಪಡೆದುಕೊಂಡಿದ್ದೇವೆʼʼ ಎಂದು ಹೇಳಿದರು.

Exit mobile version