Site icon Vistara News

Ashika Ranganath | ಗತವೈಭವದಲ್ಲಿ ದೇವಕನ್ಯೆಯಾಗಿ ಆಶಿಕಾ: ಜನುಮದಿನದ ಮೊದಲೇ ಭರ್ಜರಿ ಗಿಫ್ಟ್‌ ಕೊಟ್ಟ ಸುನಿ

Ashika Ranganath

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಆಶಿಕಾ ರಂಗನಾಥ್‌ಗೆ (Ashika Ranganath) ಜನುಮದಿನ ಸಂಭ್ರಮ. ಸಿಂಪಲ್‌ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿರುವ ಆಶಿಕಾ ವಿಭಿನ್ನ ಪಾತ್ರದ ಮೂಲಕ ತೆರೆ ಮೇಲೆ ಬರುತ್ತಿದ್ದಾರೆ.

ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಪುತ್ರ ದುಷ್ಯಂತ್‌ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಅವರ ಪಾತ್ರದ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದ್ದಾರೆ. ಸಿಂಪಲ್‌ ಸುನಿ ಅವರ ʻಅವತಾರ ಪುರುಷʼ ಸಿನಿಮಾದಲ್ಲಿ ಆಶಿಕಾ ನಾಯಕಿಯಾಗಿದ್ದರು.

ʻಅವತಾರ ಪುರುಷʼ ಸಿನಿಮಾ ನಂತರ ಆಶಿಕಾ ಸ್ವಲ್ಪ ವಿರಾಮ ಪಡೆದುಕೊಂಡಿದ್ದರು. ಪವನ್‌ ಒಡೆಯರ್‌ ನಿರ್ದೇಶನದ ʻರೇಮೊʼ ಚಿತ್ರದ ಬಿಡುಗಡೆಗಾಗಿ ಅವರು ಕಾಯುತ್ತಿದ್ದು, ಇಲ್ಲಿ ಗಾಯಕಿಯ ಪಾತ್ರದಲ್ಲಿ ಮಿಂಚಿದ್ದಾರೆ. ಸೆಪ್ಟೆಂಬರ್‌ನಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.

ಗತ ವೈಭವ ಸಿನಿಮಾವನ್ನು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡಿದ್ದು, ವಿಲಿಯಂ ಡೇವಿಡ್‌ ಛಾಯಾಗ್ರಹಣ ಚಿತ್ರಕ್ಕಿದೆ. ರೊಮ್ಯಾಂಟಿಕ್ ಲವ್ ಸ್ಟೋರಿಯುಳ್ಳ ಗತವೈಭವ ಸಿನಿಮಾದಲ್ಲಿ ಸೈಂಟಿಫಿಕ್ ಥ್ರಿಲ್ಲರ್ ಕಂಟೆಂಟ್ ಕೂಡ ಇರಲಿದೆ. ಈಗಾಗಲೇ ಶೇ.40ರಷ್ಟು ಚಿತ್ರೀಕರಣ ಮುಗಿದಿದೆ.

ಆಶಿಕಾ ದೇವಕನ್ಯೆ ಹಾಗೂ ಪೋರ್ಚುಗೀಸ್ ಯುವತಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.

ಇದನ್ನೂ ಓದಿ | Lucky Man Movie | ನಟ ಪುನೀತ್ ರಾಜಕುಮಾರ್ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಔಟ್‌

Exit mobile version