ಬೆಂಗಳೂರು : ಕ್ರಿಕೆಟಿಗ ಕೆ.ಎಲ್. ರಾಹುಲ್(Athiya Shetty-KL Rahul ) ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಮದುವೆ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಪುತ್ರಿ ಅಥಿಯಾ ಶೆಟ್ಟಿ ಮತ್ತು ರಾಹುಲ್ ಮದುವೆಗೆ ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ. ಮದುವೆ ನಡೆಯುವ ಸುನೀಲ್ ಶೆಟ್ಟಿ ಫಾರ್ಮ್ ಹೌಸ್ ಮುಂಭಾಗದಲ್ಲಿ ಅನೇಕ ಪಾಪರಾಜಿಗಳು ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ವೇಳೆ ಪಾಪರಾಜಿಗಳಿಗೆ ನಟ ಸುನೀಲ್ ಶೆಟ್ಟಿ ಭರವಸೆ ನೀಡಿದ್ದಾರೆ. ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್‌ಹೌಸ್‌ನಲ್ಲಿ ಈ ಜೋಡಿಗಳ ವಿವಾಹ ಸಮಾರಂಭ ನಡೆಯಲಿದೆ ಎಂದು ಸುದ್ದಿಯಾಗಿದೆ.
ವಿವಾಹ ಪೂರ್ವ ಕಾರ್ಯಕ್ರಮಗಳು ಜನವರಿ 22 ಭಾನುವಾರದಿಂದಲೇ ಆರಂಭವಾಗಿದ್ದು ಹಳದಿ ಕಾರ್ಯಕ್ರಮ ನಡೆದಿದೆ ಎಂದು ವರದಿಯಾಗಿದೆ. ಫಾರ್ಮ್ ಹೌಸ್ ಮುಂಭಾಗದಲ್ಲಿ ಅನೇಕ ಪಾಪರಾಜಿಗಳು ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಅವರನ್ನು ನೋಡಿದ ಸುನೀಲ್ ಶೆಟ್ಟಿ ಅವರು ಕಾರಿನಿಂದ ಕೆಳಗೆ ಇಳಿದು ಬಂದು ಮಾತನಾಡಿದ್ದಾರೆ. ನಾವು ನಾಳೆ ಬರುತ್ತೇವೆ. ಮಕ್ಕಳನ್ನು ನಾನು ಕರೆದುಕೊಂಡು ಬರುತ್ತೇನೆ ಎಂದು ಪಾಪರಾಜಿಗಳಿಗೆ ವಿನಯತೆಯಿಂದ ಸುನೀಲ್ ಶೆಟ್ಟಿ ಹೇಳಿದ್ದಾರೆ.
ಇದನ್ನೂ ಓದಿ: Athiya Shetty | ಶೂಟಿಂಗ್ ವೇಳೆ ಒಟ್ಟಿಗೆ ಕಾಣಿಸಿಕೊಂಡ ನಟಿ ಅಥಿಯಾ ಶೆಟ್ಟಿ- ಕ್ರಿಕೆಟಿಗ ಕೆ ಎಲ್ ರಾಹುಲ್
ಈ ವಿವಾಹ ಸಮಾರಂಭದಲ್ಲಿ ಕೇವಲ 100 ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದ್ದು, ಇತರ ಕೆಲವು ಸೆಲೆಬ್ರಿಟಿಗಳಂತೆ ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಬರುವ ಅತಿಥಿಗಳಿಗೆ ಫೋನ್ ಬಳಸದಂತೆ ವಿನಂತಿಸಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭದಲ್ಲಿ ಜಾಕಿ ಶ್ರಾಫ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಎಂ.ಎಸ್. ಧೋನಿ, ವಿರಾಟ್ ಕೊಹ್ಲಿ ಸೇರಿ ಟೀಮ್ ಇಂಡಿಯಾದ ಕೆಲ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದಿದೆ. ಆದರೆ ಈ ಬಗ್ಗೆ ರಾಹುಲ್ ಹಾಗೂ ಅಥಿಯಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಕ್ರಿಕೆಟಿಗ ರಾಹುಲ್ (Kl Rahul) ಮತ್ತು ಅಥಿಯಾ ಶೆಟ್ಟಿ ಅವರು ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು.