Atlee Kumar: ಲೋಕೇಶ್‌, ಕಾರ್ತಿಕ್ ಸುಬ್ಬರಾಜ್‌ಕ್ಕಿಂತ ನಾನು ಭಿನ್ನ ಎಂದ ಅಟ್ಲೀ! - Vistara News

South Cinema

Atlee Kumar: ಲೋಕೇಶ್‌, ಕಾರ್ತಿಕ್ ಸುಬ್ಬರಾಜ್‌ಕ್ಕಿಂತ ನಾನು ಭಿನ್ನ ಎಂದ ಅಟ್ಲೀ!

Atlee Kumar: ಅಟ್ಲಿ ತಮ್ಮ ಮತ್ತು ಇತರ ಜನಪ್ರಿಯ ನಿರ್ದೇಶಕರ ನಡುವಿನ ವ್ಯತ್ಯಾಸಗಳ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

VISTARANEWS.COM


on

Atlee Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ನಿರ್ದೇಶಕರಲ್ಲಿ ಈಗ ಅಟ್ಲೀ (Atlee Kumar) ಕೂಡ ಒಬ್ಬರು. ಅಟ್ಲೀ ʻಜವಾನ್‌ʼ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಇತರ ಯಶಸ್ವಿ ನಿರ್ದೇಶಕರ ನಡುವೆ ಹೋಲಿಕೆ ಮಾಡಲು ಈಗಾಗಲೇ ಶುರುವಾಗಿದೆ. ಅಟ್ಲಿ ತಮ್ಮ ಮತ್ತು ಇತರ ಜನಪ್ರಿಯ ನಿರ್ದೇಶಕರ ನಡುವಿನ ವ್ಯತ್ಯಾಸಗಳ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಅಟ್ಲೀ ತಮ್ಮ ಮತ್ತು ಇತರ ಜನಪ್ರಿಯ ನಿರ್ದೇಶಕರ ನಡುವಿನ ವ್ಯತ್ಯಾಸಗಳ ಬಗ್ಗೆ ಸಂವಾದದಲ್ಲಿ ಮಾತನಾಡಿ ʻʻಕಾರ್ತಿಕ್ ಸುಬ್ಬರಾಜ್, ಲೋಕೇಶ್ ಕನಕರಾಜ್, ಮತ್ತು ಪಾ ರಂಜಿತ್ ಅವರಂತಹ ಇತರ ಫೇಮಸ್‌ ತಮಿಳು ನಿರ್ದೇಶಕರಿಗಿಂತ ನಾನು ಭಿನ್ನ. ನೋಡಿದ ದೈಶ್ಯಗಳನ್ನೇ ಮತ್ತೆ ಮತ್ತೆ ತರುತ್ತಾರೆ ಎಂದು ಜನರು ಹಲವು ಬಾರಿ ನನ್ನನ್ನು ಟೀಕೆ ಮಾಡಿದ್ದುಂಟು. ಕಾರ್ತಿಕ್ ಸುಬ್ಬರಾಜ್, ಲೋಕೇಶ್ ಮತ್ತು ಪಾ ರಂಜಿತ್ ಅವರಂತಹ ನನ್ನ ಸ್ನೇಹಿತರನ್ನು ನೋಡಿದರೆ ಅವರ ಸಿನಿಮಾ, ಚಿತ್ರನಿರ್ಮಾಣ, ಸಾಮಾಜಿಕ ಸಮಸ್ಯೆಗಳು, ಇತ್ಯಾದಿ ಕಟೆಂಟ್‌ಗಳು ಒಳಗೊಂಡಿರುತ್ತದೆ. ನಾನು ಮಾಡುವ ಸಿನಿಮಾಗಿಂತ ಭಿನ್ನವಾಗಿರುತ್ತದೆ. ನಾನು ಮಾತ್ರ ಕಮರ್ಷಿಲ್‌ ಸಿನಿಮಾ ಮಾಡುವಲ್ಲಿ ನಂಬುವವನು. ಮಾಸ್‌ ಸಿನಿಮಾವಾಗಿಯೇ ಮಾಡಬೇಕು ಎಂದು ಹೇಳುವವನು. ನನ್ನ ಉದ್ದೇಶ ಪ್ರೇಕ್ಷಕರನ್ನು ರಂಜಿಸಲು ಮತ್ತು ನನ್ನ ಪಾತ್ರಗಳಿಗೆ ಅವರಿಗೆ ಭಾವನೆ ಮೂಡಿಸಲು. ನಾನು ಇಲ್ಲಿಯವರೆಗೆ ಯಶಸ್ವಿಯಾಗಿದ್ದೇನೆ ಎಂದು ನಾನು ಭಾವಿಸುತ್ತೇನೆʼʼಎಂದು ಹೇಳಿಕೊಂಡರು. ತಮಿಳಿನ ಇತರ ಪ್ರಮುಖ ನಿರ್ದೇಶಕರೊಂದಿಗೂ ತಾನು ಸ್ನೇಹಿತನಾಗಿದ್ದೇನೆ ಎಂದು ಅಟ್ಲೀ ಸ್ಪಷ್ಟಪಡಿಸಿದ್ದಾರೆ.

ಅಟ್ಲೀ ಅವರು ಅಲ್ಲು ಅರ್ಜುನ್ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಇತ್ತು. ಈ ಬಗ್ಗೆ ಅಟ್ಲೀ ಮಾತನಾಡಿ ʻʻಅಲ್ಲು ಸರ್ ತುಂಬಾ ಒಳ್ಳೆಯ ಸ್ನೇಹಿತ. ನಾವಿಬ್ಬರೂ ಕಲೆಯನ್ನು ಪ್ರೀತಿಸುತ್ತೇವೆ. ಸಹಜವಾಗಿ, ನಾವು ಏನು ಸಿನಿಮಾ ಮಾಡಬೇಕು ಮತ್ತು ಹೇಗೆ ಸಿನಿಮಾ ಮಾಡಬೇಕು ಎಂಬ ಕಲ್ಪನೆಯನ್ನು ಹೊಂದಿದ್ದೇವೆ. ಚಿತ್ರವು ದೇವರ ಆಶೀರ್ವಾದದೊಂದಿಗೆ ಸರಿಯಾದ ಸ್ಕ್ರಿಪ್ಟ್ ರೂಪದಲ್ಲಿ ಸಿಗಬೇಕು. ಆದ್ದರಿಂದ ಒಳ್ಳೆಯ ಸ್ಕ್ರಿಪ್ಟ್‌ ಸಿಕ್ಕರೇ ಖಂಡಿತ ಮಾಡುತ್ತೇವೆʼʼಎಂದು ಹೇಳಿದರು.

ಇದನ್ನೂ ಓದಿ: Coming Movies 2023: Top 5 Most expected Upcoming movies on 2023

ವಿಜಯ್‌ ಜತೆ ಸಿನಿಮಾ ಮಾಡುವುದು ಪಕ್ಕಾ!

ಥೇರಿ, ಮೆರ್ಸಲ್ ಮತ್ತು ಬಿಗಿಲ್ ಈ ಜೋಡಿಯ ಈ ಎಲ್ಲ ಸಿನಿಮಾಗಳೂ ಹಿಟ್‌ ಆಗಿವೆ. ಈ ಜೋಡಿ ಲಕ್ಷಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದೆ. ಇದೀಗ ಮತ್ತೆ ಹೊಸ ಸಿನಿಮಾ ಮೂಲಕ ದಳಪತಿ ವಿಜಯ್ ಮತ್ತು ಅಟ್ಲೀ ಒಂದಾಗುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಜವಾನ್ ನಿರ್ದೇಶಕ ಅಟ್ಲೀ ನಾಲ್ಕನೇ ಬಾರಿಗೆ ವಿಜಯ್ ಜತೆ ಮತ್ತೆ ಸಿನಿಮಾ ಮಾಡುವುದಾಗಿ ಸುಳಿವು ಕೊಟ್ಟಿದ್ದಾರೆ.

ಈ ಬಗ್ಗೆ ಅಟ್ಲೀ ಮಾಧ್ಯಮವೊಂದರಲ್ಲಿ ಮಾತನಾಡಿ ʻನಾನು ಕೇವಲ 5 ಸಿನಿಮಾಗಳನ್ನು ಮಾಡಿದ್ದು, ಅದರಲ್ಲಿ 3 ವಿಜಯ್ ಅವರೊಂದಿಗೆ ಮಾಡಿರುವುದಾಗಿದೆ. ಹಾಗಾಗಿ, ಸಮಯ ಬಂದಾಗ ಮತ್ತೆ ಅವರ ಜತೆ ಸಿನಿಮಾ ಮಾಡುತ್ತೇನೆʼʼ ಎಂದು ಖಚಿತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shakhahaari Movie: ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಎಂದ ʻಶಾಖಾಹಾರಿʼ ನಟ ರಂಗಾಯಣ ರಘು!

Shakhahaari Movie: ಚಿತ್ರತಂಡ ನಿರೀಕ್ಷೆ ಮಟ್ಟದಲ್ಲಿ ಪ್ರೇಕ್ಷಕಪ್ರಭು ಥಿಯೇಟರ್‌ನತ್ತ ಹೆಜ್ಜೆ ಇಡುತ್ತಿಲ್ಲ ,ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನೆಮಾ ನೋಡಲು ಬರಲಿ ಎನ್ನುವ ಆಶಯವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆಗೊಂಡ ಶಾಖಾಹಾರಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತನ್ನು ಇಡೀ ಚಿತ್ರತಂಡ ತೊಡಿಕೊಂಡಿದೆ.

VISTARANEWS.COM


on

Don't wait for OTT, come to the theatre , said actor Shakhahaari Movie Rangayana Raghu
Koo

ಬೆಂಗಳೂರು:ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ (Shakhahaari Movie) ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ ರೋಚಕ ತಿರುವು, ಭಾವನಾತ್ಮಕ ಸಂಬಂಧ, ಪ್ರೀತಿ, ಸ್ನೇಹ, ನಂಬಿಕೆ ಇವೆಲ್ಲವುದರ ಬಗ್ಗೆ ಬಹಳ ಸೂಕ್ಷ್ಮವಾಗಿ ಪ್ರೇಕ್ಷಕರಿಗೆ ಮುಟ್ಟಿಸಿ ಎಲ್ಲಾ ರೀತಿಯ ರಸಾನುಭವ ನೀಡಿದೆ. ಇಷ್ಟು ಸಾಕಲ್ವಾ? ಪ್ರೇಕ್ಷಕರು ಬಯಸೋದು ಇದನ್ನೇ. ಕೊಟ್ಟ ಕಾಸಿಗೆ ಒಳ್ಳೆ ಎಂಟರ್ ಟೈನ್ಮೆಂಟ್ ಸಿಗಬೇಕು. ಚಿತ್ರ ಚೆನ್ನಾಗಿರಬೇಕು. ಅದೆಲ್ಲಾ ಕ್ವಾಲಿಟಿ ಶಾಖಾಹಾರಿ ಚಿತ್ರಕ್ಕಿದೆ. ಆದರೆ ಚಿತ್ರತಂಡ ನಿರೀಕ್ಷೆ ಮಟ್ಟದಲ್ಲಿ ಪ್ರೇಕ್ಷಕಪ್ರಭು ಥಿಯೇಟರ್‌ನತ್ತ ಹೆಜ್ಜೆ ಇಡುತ್ತಿಲ್ಲ ,ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನೆಮಾ ನೋಡಲು ಬರಲಿ ಎನ್ನುವ ಆಶಯವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆಗೊಂಡ ಶಾಖಾಹಾರಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತನ್ನು ಇಡೀ ಚಿತ್ರತಂಡ ತೊಡಿಕೊಂಡಿದೆ.

ರಂಗಾಯಣ ರಘು ಮಾತನಾಡಿ, ʻʻಹೊರಗಿನವರು ಜನ ಬಂದು ಎಲ್ಲರೂ ಚೆನ್ನಾಗಿ ಆಗಿದೆ ಅಂದರು. ಇದು ಕ್ಲಾಸ್ ಸಿನಿಮಾ ಎಂದು ನಾನು ಒಪ್ಪುವುದಿಲ್ಲ. ಒಳ್ಳೆ ಸಿನಿಮಾ ಎಂದು ಹೇಳುತ್ತೇನೆ. ಕ್ಲಾಸ್ ಮಾಸ್ ಹೋಗಿ ತುಂಬಾ ದಿನ ಆಗಿದೆ. ಒಳ್ಳೆ ಸಿನಿಮಾ. ದೊಡ್ಡ ದೊಡ್ಡವರ ಸಿನಿಮಾ ಎಂದಾಗ ಕೋಟಿ ಕೋಟಿ ಹಾಕುವ ನಿರ್ಮಾಪಕರು ಸಾಕಾಗುವುದಿಲ್ಲ. ಅದಕ್ಕೆ ಇದ್ದಾರೆ ಅವ್ರು ಮಾಡ್ತಾರೆ. ಸಣ್ಣ ಸಣ್ಣವರು ಮಾಡಿದಾಗ ಅದು ಸಮುದ್ರವಾಗುತ್ತದೆ. ನದಿ ಹರಿವೇ ಇಲ್ಲ ಅಂದರೆ ಸಮುದ್ರಕ್ಕೆ ಕಷ್ಟವಾಗುತ್ತದೆ. ಇದು ಒಳ್ಳೆ ಸಿನಿಮಾ ಎಂದು ಎಲ್ಲರೂ ಹೇಳುತ್ತಿದ್ದಾರೆ. ಒಟಿಟಿಗೆ ಬಂದ್ಮೇಲೆ ಮೆಚ್ಚಿಕೊಳ್ತಾರೆ ಗೊತ್ತಿಲ್ಲʼʼ ಎಂದರು.

ಇದನ್ನೂ ಓದಿ: Kannada New Movie: ’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್ : ಮಾ.15ಕ್ಕೆ ತೆರೆಗೆ!

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, ʻʻಇಷ್ಟು ಪಬ್ಲಿಸಿಟಿ ಮಾಡಿದರು ಯಾಕೆ ಜನಕ್ಕೆ ರೀಚ್ ಮಾಡಲು ಆಗುತ್ತಿಲ್ಲ. ನಾವು ಕ್ಲಾಸ್ ಸಿನಿಮಾ ಎಂದುಕೊಂಡು ಒಂದಷ್ಟು ಸೀಮಿತ ಜನಕ್ಕೆ ನಮ್ಮದೇ ಆದ ಒಂದು ಟಾರ್ಗೆಟ್ ಆಡಿಯನ್ಸ್ ಮಾಡಿಕೊಂಡೆವು. ಅದು ರಿಲೀಸ್ ಆದ್ಮೇಲೆ ಅದು ತೆಗೆದುಕೊಂಡ ವಿಸ್ತಾರ, ಜನರಿಗೆ ರೀಚ್ ಆಗಿದ್ದು ಇರಬಹುದು. ನಮ್ಮ ಸುತ್ತ ವಲಯದಲ್ಲಿ ಹೆಚ್ಚು ರೀಚ್ ಆಗಿದೆ. ಅದು ಬಿಟ್ಟು ಹೋಗಿಲ್ಲ ಎಂಬ ಕೊರಗು ಇತ್ತು. ಇದಾದ ಮೇಲೆ ಇತ್ತೀಚೆಗೆ ಬಂದ ವಿಮರ್ಷೆ ಆಗಿರಬಹುದು. ಥಿಯೇಟರ್ ಫಿಲ್ಲಿಂಗ್ ಇರಬಹುದು. ಈಗಲೂ 50 ರಿಂದ 60% ಆಕ್ಯೂಪೆನ್ಸಿ ಇದೆ. ನಿಮ್ಮ ಮೂಲಕ ಇನ್ನೂ ಹೆಚ್ಚು ಜನರಿಗೆ ರೀಚ್ ಆಗಬಹುದು. ನಿಮ್ಮ ಬೆಂಬಲ ಇರಬೇಕು. ನಮಗೆ ಎಲ್ಲಾ ಒಟಿಟಿ ಕಡೆಯಿಂದ ಆಫರ್ ಬಂದಿದೆʼʼ ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಒಂದು ಪುಟ್ಟ ಗ್ರಾಮದಲ್ಲಿ ನಡೆಯುವ ಬಲು ರೋಚಕವಾದ ಕಥೆ ‘ಶಾಖಾಹಾರಿ’ ಕಹಾನಿ. ಈ ಸಿನಿಮಾದ ಕಥಾನಾಯಕ ಸುಬ್ಬಣ್ಣ ಭಟ್ಟ್ ರಂಗಾಯಣ ರಘು ಒಂದು ವೆಜಿಟೇರಿಯನ್ ಹೋಟೆಲ್ ನಡೆಸುತ್ತಾನೆ. ಆದರೆ ಅಲ್ಲಿ ನಡೆಯುವ ಕೆಲವು ಘಟನೆಗಳಿಂದಾಗಿ ಶಾಕಾಹಾರಿ ಹೋಟೆಲ್ನ ಇಮೇಜ್ ‘ಶಾಖಾಹಾರಿ’ಯಾಗಿ ಬದಲಾಗುತ್ತದೆ. ಇಂಥ ಒಗಟಿನಂತಹ ಟೈಟಲ್ನ ಹಿಂದಿರುವ ಕಥೆ ಏನು ಎಂಬುದು ಸಿನಿಮಾದ ತಿರುಳು..

ಶಾಖಾಹಾರಿ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ. ಶಶಾಂಕ್ ನಾರಾಯಣ್ ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

CCL 2024: ಅಮ್ಮನಿಗೆ ಮುತ್ತಿಟ್ಟು. ಮಕ್ಕಳಿಗೆ ಫ್ರೆಂಚ್ ಫ್ರೈಸ್‌ ತಿನ್ನಿಸಿದ ಸಲ್ಮಾನ್‌ ಖಾನ್‌!

CCL 2024: ಸೊಹೈಲ್ ಮುಂಬೈ ಹೀರೋಸ್‌ ತಂಡದ ಮಾಲೀಕರಾಗಿದ್ದರೆ, ಸಲ್ಮಾನ್ ಖಾನ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮತ್ತು ರಿತೇಶ್ ದೇಶಮುಖ್ ತಂಡದ ನಾಯಕರಾಗಿದ್ದಾರೆ.

VISTARANEWS.COM


on

Salman Khan Kisses Mother Salma Khan, Enjoys Fries With Nephew
Koo

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL 2024) ಪ್ರಾರಂಭಗೊಂಡಿದೆ. ಸಲ್ಮಾನ್ ಖಾನ್ ಅವರು ಸಹೋದರ ಸೋಹೈಲ್ ಖಾನ್ ಇರುವ ಮುಂಬೈ ಹೀರೋಸ್ ತಂಡವನ್ನು ಬೆಂಬಲಿಸಲು ಭಾಗಿಯಾಗಿದ್ದರು. ಈ ವೇಳೆ ಸಲ್ಮಾನ್‌ ಅವರ ಇಡೀ ಕುಟುಂಬ ಮ್ಯಾಚ್‌ ನೋಡಲು ನೆರೆದಿತ್ತು. ಸಲ್ಮಾನ್ ಖಾನ್, ಸಲ್ಮಾ ಖಾನ್, ಹೆಲೆನ್, ಅರ್ಪಿತಾ ಖಾನ್, ಅರ್ಪಿತಾ ಅವರ ಮಕ್ಕಳು, ಸೀಮಾ ಸಜ್ದೇಹ್ ಮತ್ತು ಲುಲಿಯಾ ವಂತೂರ್ ಸೊಹೈಲ್ ತಂಡವನ್ನು ಬೆಂಬಲಿಸಿದರು. ಸಲ್ಮಾನ್ ಹಂಚಿಕೊಂಡ ವೀಡಿಯೊದಲ್ಲಿ ತಾಯಿ, ಸೋದರಳಿಯ ಮತ್ತು ಸೊಸೆಯೊಂದಿಗೆ ಅದ್ಭುತ ಕ್ಷಣಗಳನ್ನು ಹಂಚಿಕೊಂಡರು. ತಾಯಿ ಸಲ್ಮಾಳ ಮುಖಕ್ಕೆ ಮುದ್ದಾಗಿ ಮುತ್ತಿಟ್ಟಿದ್ದಾರೆ ಸಲ್ಲು.

ಸಲ್ಮಾನ್ ಖಾನ್ ಇನ್‌ಸ್ಟಾದಲ್ಲಿ ಈ ಕ್ಯೂಟ್‌ ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಮುಂಬೈ ಹೀರೋಸ್ ಜೆರ್ಸಿಯನ್ನು ಹಾಕಿಕೊಂಡು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಪ್ರವೇಶಿಸಿದ್ದಾರೆ. ಬಳಿಕ ತಾಯಿ ಸಲ್ಮಾಳ ಮುಖಕ್ಕೆಲ್ಲ ಮುತ್ತಿಟ್ಟರು. ಸೋದರಳಿಯ ಮತ್ತು ಸೊಸೆಗೆ ಫ್ರೆಂಚ್ ಫ್ರೈಗಳನ್ನು ತಿನ್ನಿಸಿ ಮುದ್ದು ಮಾಡಿದ್ದಾರೆ.

ಸಲ್ಮಾನ್ ಖಾನ್ ಈ ವೇಳೆ ಮಾಧ್ಯಮದ ಜತೆ ಮಾತನಾಡಿ, “ಕ್ರಿಕೆಟ್ ನಮಗೆ ಒಂದು ಧರ್ಮ. ನಾವೆಲ್ಲರೂ ಅದನ್ನು ಪ್ರೀತಿಸುತ್ತೇವೆ. ಅದಕ್ಕಾಗಿಯೇ ನಾವು ಸಿಸಿಎಲ್‌ನಲ್ಲಿದ್ದೇವೆ. 10 ವರ್ಷಗಳಿಂದ ಸಿಸಿಎಲ್‌ ಮಾಡಿಕೊಂಡು ಬಂದಿದ್ದೇವೆ. ವರ್ಷದಿಂದ ವರ್ಷಕ್ಕೆ ನಾವು ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆʼʼಎಂದು ಹೇಳಿದ್ದಾರೆ.

ಸೊಹೈಲ್ ಮುಂಬೈ ಹೀರೋಸ್‌ ತಂಡದ ಮಾಲೀಕರಾಗಿದ್ದರೆ, ಸಲ್ಮಾನ್ ಖಾನ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮತ್ತು ರಿತೇಶ್ ದೇಶಮುಖ್ ತಂಡದ ನಾಯಕರಾಗಿದ್ದಾರೆ.

ಇದನ್ನೂ ಓದಿ: Cricket Fraud: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಹೆಸರಿನಲ್ಲಿ ಮಹಿಳೆಯಿಂದ 1.5 ಕೋಟಿ ರೂ. ದೋಚಿದ ಗ್ಯಾಂಗ್, 4 ವರ್ಷದ ಬಳಿಕ ಕೇಸ್!

ವೈರಲ್‌ ವಿಡಿಯೊ

ಯಾವ ತಂಡಕ್ಕೆ ಯಾರು ನಾಯಕರು?:

ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ನ ಮುಂಬೈ ಹೀರೋಸ್ ತಂಡಕ್ಕೆ ಸಲ್ಮಾನ್‌ ಖಾನ್‌ ಬ್ರಾಂಡ್ ಅಂಬಾಸಿಡರ್‍ ಆಗಿದ್ದಾರೆ. ರಿತೇಶ್‌ ದೇಶಮುಖ್ ಈ ತಂಡದ ನಾಯಕ. ಸೋಹೈಲ್ ಖಾನ್, ಮುಂಬೈ ಹೀರೊಸ್ ತಂಡದ ಮಾಲೀಕರಾಗಿದ್ದಾರೆ. ‘ತೆಲುಗು ವಾರಿಯರ್ಸ್‌’ ತಂಡಕ್ಕೆ ವೆಂಕಟೇಶ್‌ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅಖಿಲ್ ಅಕ್ಕಿನೇನಿ ‘ತೆಲುಗು ವಾರಿಯರ್ಸ್‌’ ತಂಡದ ನಾಯಕ. ‘ಕರ್ನಾಟಕ ಬುಲ್ಡೋಜರ್ಸ್‌’ ತಂಡಕ್ಕೆ ಕಿಚ್ಚ ಸುದೀಪ್‌ ನಾಯಕನಾಗಿದ್ದಾರೆ. ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಅನ್ನು ಈಗಷ್ಟೇ ಮುಗಿಸಿರುವ ಸುದೀಪ್‌, ಮತ್ತೊಮ್ಮೆ ಸಿಸಿಎಲ್‌ 10 ಮೂಲಕ ಜಿಯೊಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಹನ್‌ಲಾಲ್‌ ಸಹಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್‌’ ತಂಡಕ್ಕೆ ಇಂದ್ರಜಿತ್ ನಾಯಕರಾಗಿದ್ದಾರೆ. ‘ಭೋಜಪುರಿ ದಬಾಂಗ್ಸ್‌’ ತಂಡಕ್ಕೆ ಮನೋಜ್‌ ತಿವಾರಿ ನಾಯಕರಾಗಿದ್ದಾರೆ. ‘ಪಂಜಾಬ್‌ ದೆ ಶೇರ್’ ತಂಡಕ್ಕೆ ಸೋನು ಸೂದ್‌ ನಾಯಕರಾಗಿದ್ದಾರೆ. ಬೋನಿ ಕಪೂರ್ ಮಾಲೀಕರಾಗಿರುವ ‘ಬೆಂಗಾಲ್ ಟೈಗರ್ಸ್‌’ ತಂಡಕ್ಕೆ ಜಿಸ್ಸು ಸೆನ್‌ಗುಪ್ತ ನಾಯಕರಾಗಿದ್ದಾರೆ.

Continue Reading

South Cinema

Actor Darshan: ಕೇಸ್‌ಗಳಿಗೆ ಐ ಡೋಂಟ್‌ ಕೇರ್‌! ಪಾರ್ಟಿಯಲ್ಲಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ ʻಡಿ ಬಾಸ್‌ʼ!

Actor Darshan: ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಪರೋಕ್ಷವಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ಇದೂ ಕೂಡ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದೀಗ ಏಕಾಏಕಿ ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮೀ ಜತೆ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Actor Darshan dance with wife vijayalakshmi in party
Koo

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ವೈಯಕ್ತಿಕ ಜೀವನ ಆಗಾಗ ಚರ್ಚೆಯಲ್ಲಿ ಇರುತ್ತದೆ. ದರ್ಶನ್ ಜತೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೆ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರಾ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದೇ ಹೋಯ್ತು. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಪರೋಕ್ಷವಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ಇದೂ ಕೂಡ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದೀಗ ಏಕಾಏಕಿ ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮೀ ಜತೆ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿದೆ.

ಈಗಾಗಲೇ ದರ್ಶನ್‌ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿವೆ. ಇಷ್ಟೆಲ್ಲ ರಂಪಾಟ ನಡೆದಿದ್ದರೂ ಸ್ನೇಹಿತರ ಬರ್ತ್‌ಡೇ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜತೆ ಕುಣಿದು ಕುಪ್ಪಳಿಸಿದ್ದಾರೆ. ವಿಜಯಲಕ್ಷ್ಮಿ ಜತೆ ವೇದಿಕೆ ಏರಿ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಈಗ ವೈರಲ್ ಆಗುತ್ತಿದೆ. ʻಬಾಸ್- ಅತ್ತಿಗೆ ಡ್ಯಾನ್ಸ್ ಸೂಪರ್ʼ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ. ತಮ್ಮ ಬಗ್ಗೆ ಮಾತನಾಡುವವರಿಗೆ ತಮ್ಮದೇ ಸ್ಟೈಲ್‌ನಲ್ಲಿ ಬಾಸ್ ಉತ್ತರ ಕೊಡುತ್ತಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೊಬ್ಬರು ʻʻತೊಡೆ ತಟ್ಟೋರ್ಗೆಲ್ಲಾ ಜಗಜಟ್ಟಿ ಮಲ್ಲ ಸಾಮ್ರಾಟ ಇವನು ಸಾಟಿ ಯಾರಿಲ್ಲʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ದೇಹ ಅಷ್ಟೇ ಅಲ್ಲ, ಮಾತೂ ತೂಕ ಇರ್ಬೇಕು; ದರ್ಶನ್‌ಗೆ ಉಮಾಪತಿ ತಿರುಗೇಟು!

ದರ್ಶನ್‌ ವಿರುದ್ಧ ಮಹಿಳೆಯರ ದೂರು

ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದು ದರ್ಶನ್ (Actor Darshan) ಮಾತಿನ ಭರದಲ್ಲಿ ಹೇಳಿದ್ದು ಈಗ ಭಾರಿ ವಿವಾದ ಸೃಷ್ಟಿಸಿದೆ. ಈಗಾಗಲೇ ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ . ಇದರ ಬೆನ್ನಲ್ಲೇ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ನಾವು ಬಂದಿದ್ದು, ಯಾವುದೇ ರಾಜಕೀಯ ಉದ್ದೇಶದಿಂದ ಇಲ್ಲಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರು ಕನ್ನಡ ಚಿತ್ರರಂಗಕ್ಕೆ (Actor Darshan) ಪದಾರ್ಪಣೆ ಮಾಡಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸಲು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನು ಯಾವುದೇ ಮುಚ್ಚು ಮರೆಯಿಲ್ಲದೇ ಹಂಚಿಕೊಂಡರು. ಇಷ್ಟೆಲ್ಲ ಮಾತಾಡಿ ʻʻಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದಿದ್ದರುʼʼ ದರ್ಶನ್. ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆ ಈಗ ವಿವಾದ ಸೃಷ್ಟಿಯಾಗಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ’ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್ : ಮಾ.15ಕ್ಕೆ ತೆರೆಗೆ!

Kannada New Movie: ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ.

VISTARANEWS.COM


on

Kannada New Movie Line Man March 15th Release
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರನ್ ಆಂಟೋನಿ ಹಾಗೂ ಟಕ್ಕರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ (Kannada New Movie) ನಿರ್ದೇಶಕ ರಘು ಶಾಸ್ತ್ರಿ ಇದೀಗ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ಲೈನ್ ಮ್ಯಾನ್’ ಎಂಬ ಶೀರ್ಷಿಕೆ ಇಡಲಾಗಿದೆ. ವಿಭಿನ್ನ ಟೈಟಲ್ ಮೂಲಕ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದು, ಇದೀಗ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಲೈನ್ ಮ್ಯಾನ್ ಮೋಷನ್ ಪೋಸ್ಟರ್ ಅನಾವರಣಗೊಂಡಿದೆ. ಸರಿಗಮ ಕನ್ನಡ ಯೂಟ್ಯೂಬ್‌ನಲ್ಲಿ ಚಿತ್ರದ ಝಲಕ್ ರಿಲೀಸ್ ಆಗಿದ್ದು, ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಮೂಡಿಬಂದಿದೆ. ಕದ್ರಿ ಮಣಿಕಾಂತ್ ಮ್ಯೂಸಿಕ್ ಕಿಕ್ ಕೊಡುವಂತಿದೆ. ಯುವ ನಟ ತ್ರಿಗುಣ್ ಅವರು ಲೈನ್ ಮ್ಯಾನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗಿದು ನಾಯಕ ನಟನಾಗಿ ಚೊಚ್ಚಲ ಚಿತ್ರ. ಹಾಗಾಗಿ ಸಿನಿಮಾ ಕುರಿತು ಸಾಕಷ್ಟು ನಿರೀಕ್ಷೆ, ಭರವಸೆಯನ್ನಿಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ವಿದ್ಯುತ್‌ಗೆ ಸಂಬಂಧಿಸಿದ ಕೆಲಸ, ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ಸುತ್ತುತ್ತದೆ. ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಚಿತ್ರವೇ ‘ಲೈನ್ ಮ್ಯಾನ್’. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: BIFFES 2024: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಬೇಟೆಗಿಳಿದ ‘ಲೈನ್ ಮ್ಯಾನ್ʼ!

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರದ ಚಂದಕವಾಡಿಯಲ್ಲಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Continue Reading
Advertisement
Drunk husband assaults wife
ಬೆಂಗಳೂರು33 mins ago

Assault Case :‌ ಹೊಡಿತಾನೆ ಬಡಿತಾನೆ ನನ್ನ ಗಂಡ; ಅನುಮಾನ ಪಿಶಾಚಿ ಕಾಟಕ್ಕೆ ಬೇಸತ್ತಳು ಹೆಂಡತಿ

indian penal code
ದೇಶ36 mins ago

New Laws: ಐಪಿಸಿ ಮೂಲೆಗೆ; ಜುಲೈ 1ರಿಂದಲೇ ಹೊಸ ಕಾನೂನು ಜಾರಿ, ಏನೆಲ್ಲ ಬದಲು?

bankok
ವೈರಲ್ ನ್ಯೂಸ್44 mins ago

Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

Amazon Sweets
ವಾಣಿಜ್ಯ53 mins ago

Empower HER Exhibition : ಎಫ್‌ಕೆಸಿಸಿಐ ಆವರಣದಲ್ಲಿ ಮಹಿಳಾ ಉದ್ದಿಮೆದಾರರಿಂದ ಯಶಸ್ವಿ ವಸ್ತು ಪ್ರದರ್ಶನ ಮತ್ತು ಮಾರಾಟ

Actor Manoj Rajput Arrested On Allegations Of Raping
ಸಿನಿಮಾ53 mins ago

Actor Manoj Rajput: ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಮನೋಜ್ ರಜಪೂತ್ ಬಂಧನ

40 percent commission Court summons CM No defamation if advertised says Siddaramaiah
ರಾಜಕೀಯ1 hour ago

40 percent commission: ಸಿಎಂಗೆ ಕೋರ್ಟ್‌ ಸಮನ್ಸ್;‌ ಜಾಹೀರಾತು ಕೊಟ್ಟರೆ ಮಾನನಷ್ಟ ಆಗಲ್ಲ: ವಕೀಲರು ಉತ್ತರಿಸುತ್ತಾರೆಂದ ಸಿದ್ದರಾಮಯ್ಯ

Shah Rukh Kahan
ಪ್ರಮುಖ ಸುದ್ದಿ1 hour ago

Shah rukh Khan : ಕನ್ನಡದಲ್ಲಿ ಮಾತನಾಡಿ ಅಭಿಮಾನಿಗಳ ಮನಗೆದ್ದ ಶಾರುಖ್​ ಖಾನ್​

PM Narendra Modi is determined to make India a developing country by 2047 says Pralhad Joshi
ರಾಜಕೀಯ2 hours ago

PM Narendra Modi: ಮೋದಿ ಚಿಂತೆ ಮಾಡುವವರಲ್ಲ, ಚಿಂತನೆ ಮಾಡುವ ಪ್ರಧಾನಿ: ಪ್ರಲ್ಹಾದ್‌ ಜೋಶಿ

Idli
ವೈರಲ್ ನ್ಯೂಸ್2 hours ago

Biodiversity: ದಿನಾ ಇಡ್ಲಿ ತಿಂತೀರಾ? ಹಾಗಾದ್ರೆ ಜೀವವೈವಿಧ್ಯ ಹಾನಿಗೆ ನಿಮ್ಮದೇ ಹೆಚ್ಚಿನ ಕೊಡುಗೆ!

Anil John Sequeira youngest judge in Karnataka
ದಕ್ಷಿಣ ಕನ್ನಡ2 hours ago

Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Varthur Santhosh
ಮಂಡ್ಯ4 hours ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ11 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ23 hours ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು1 day ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ1 day ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು2 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ2 days ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ4 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

ಟ್ರೆಂಡಿಂಗ್‌