Ayodhya was created in Tirupati! Adipurush pre-release event ತಿರುಪತಿಯಲ್ಲಿ ಅಯೋಧ್ಯೆಯ ವೈಭವ ಸೃಷ್ಟಿ! ದಾಖಲೆ ಬರೆದ ಆದಿಪುರುಷ್​​ ಪ್ರಿ ರಿಲೀಸ್ ಈವೆಂಟ್​ - Vistara News

ಪ್ರಮುಖ ಸುದ್ದಿ

ತಿರುಪತಿಯಲ್ಲಿ ಅಯೋಧ್ಯೆಯ ವೈಭವ ಸೃಷ್ಟಿ! ದಾಖಲೆ ಬರೆದ ಆದಿಪುರುಷ್​​ ಪ್ರಿ ರಿಲೀಸ್ ಈವೆಂಟ್​

ಮಳೆಯನ್ನು ಲೆಕ್ಕಿಸದೇ ಲಕ್ಷಾಂತರ ಮಂದಿ ಪ್ರಭಾಸ್​ ಅಭಿಮಾನಿಗಳು ಆದಿ ಪುರುಷ್​ ಪ್ರೀ ರಿಲೀಸ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

VISTARANEWS.COM


on

Adipurush pre-release event
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುಪತಿ : ನಟ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ ಆದಿಪುರುಷ್ ನ ಪ್ರಿ ರಿಲೀಸ್ ಈವೆಂಟ್ ಆಧ್ಯಾತ್ಮಿಕ ನಗರ ತಿರುಪತಿಯಲ್ಲಿ ನಡೆಯಿತು. ಈ ಕಾರ್ಯಕ್ರಮವು ಅಭಿಮಾನಿಗಳ ಪಾಲಿಗೆ ಅಪಾರ ಉತ್ಸಾಹ ಉಂಟು ಮಾಡಿತು. ತಿರುಪತಿ ನಗರದ ಮಧ್ಯಭಾಗದಲ್ಲಿ ಅಯೋಧ್ಯೆಯ ಮರುಸೃಷ್ಟಿಸಲಾಗಿತ್ತು. ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಒಂದು ಲಕ್ಷಕ್ಕೂ ಅಧಿಕ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಸಂಜೆಯ ವೇಳೆಗೆ ಜೋರಾಗಿ ಮಳೆ ಸುರಿಯಿತು. ಅದನ್ನೂ ಲೆಕ್ಕಿಸದೇ ಅಭಿಮಾನಿಗಳು ಅದ್ಧೂರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡದರು.

ಅಯೋಧ್ಯೆಯ ಪ್ರತಿಕೃತಿಯನ್ನು ಪ್ರದರ್ಶಿಸಲು ಸಂಘಟಕರು ಎಲ್ಇಡಿ ಪರದೆಗಳನ್ನು ಬಳಸಿದ್ದರು. ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ನಾನಾ ದೃಶ್ಯ ವೈಭಗಳ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಸ್ ವಿ ವಿಶ್ವವಿದ್ಯಾಲಯದಲ್ಲಿ ನಿರ್ಮಾಣ ಮಾಡಲಾಗಿದ್ದ ಬೃಹತ್ ವೇದಿಕೆಯ ಮುಂಭಾಗದಲ್ಲಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು.

ಪ್ರಭಾಸ್ ಅವರ ಅಭಿಮಾನಿಗಳು ಲಕ್ಷಕ್ಕೂ ಮಿಗಿಲಾಗಿ ಇಲ್ಲಿ ಸೇರುವ ಮೂಲಕ ಹೊಸ ದಾಖಲೆ ಸೃಷ್ಟಿಸಿದರು. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಬೃಹತ್​ ಪ್ರೀ ರಿಲೀಸ್ ಈವೆಂಟ್​ ಎಂಬ ಖ್ಯಾತಿಗೆ ಪಾತ್ರವಾಯಿತು. ಸಿನಿಮಾದ ವಿದೇಶಿ ಥಿಯೇಟರ್​​ಗಳ ಬುಕಿಂಗ್ ಆರಂಭಗೊಂಡಿದ್ದು, ದೇಶದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.

ಆದಿಪುರುಷ್​ ಸಿನಿಮಾ ಶಾರುಖ್​ ಖಾನ್​ ನಟನೆಯ ಪಠಾಣ್ ಸಿನಿಮಾ ಮಾಡಿದ್ದ ಬಾಕ್ಸ್ ಆಫೀಸ್ ದಾಖಲೆಯನ್ನು ಮುರಿಯಲಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ಅದೇ ರೀತಿ ಪ್ರಭಾಸ್​ ಅವರ ನಟನೆಯ ಬಾಹುಬಲಿ ಸಿನಿಮಾದ ದಾಖಲೆಯೂ ಮುರಿಯಬಹುದೆನ್ನುವುದು ಅವರೆಲ್ಲರ ಅಭಿಪ್ರಾಯ.

ಆದಿಪುರುಷ್​ ಸಿನಿಮಾವನ್ನು ರಾಮಾಯಣದ ಕತೆಯನ್ನು ಆಧರಿಸಿ ನಿರ್ಮಾಣ ಮಾಡಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಓಂ ರಾವತ್​ ಅವರು ಈ ಸಿನಿಮಾವನ್ನು ರಚಿಸಿ, ನಿರ್ದೇಶಿಸಿದ್ದಾರೆ. ಪ್ರಭಾಸ್​ ಈ ಸಿನಿಮಾದಲ್ಲಿ ರಾಮನ ಪಾತ್ರ ವಹಿಸಿದ್ದರೆ, ಕೃತಿ ಸನೂನ್​ ಜಾನಕಿಯ ಪಾತ್ರವನ್ನು ವಹಿಸಿದ್ದಾರೆ. ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರ ಮಾಡಿದ್ದು, ದೇವದತ್ ನಗೆ ಹನುಮಾನ್ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ : Adipurush Movie: ಆದಿಪುರುಷ್‌ ಪ್ರೀ ರಿಲೀಸ್ ಈವೆಂಟ್; ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಭಾಸ್

ಸಿನಿಮಾದ ಬ್ಯಾಕ್​​ಗ್ರೌಂಡ್​ ಸ್ಕೋರ್ ಅನ್ನು ಸಂಚಿತ್ ಬಲ್ಹಾರಾ ಹಾಗೂ ಅಂಕಿಂತ್​ ಬಲ್ಹಾರ ರೂಪಿಸಿದ್ದಾರೆ. ಅಜಯ್​ ಅತುಲ್​ ಹಾಗೂ ಸಂಕೇತ್​ ಪರಂಪರ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಗೀತ ನಿರ್ದೇಶಕರಾದ ಅಜಯ್​ ಅತುಲ್ ಅವರು ಮುಂಬೈನಿಂದ ಬೈಕ್​ ಸವಾರಿ ಮಾಡಿಕೊಂಡು ತಿರುಪತಿಗೆ ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮೈಸೂರು

Mysore Dasara : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಡಗರ

Mysore Dasara : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಡಗರ ಕಳೆಗಟ್ಟಿದೆ.

VISTARANEWS.COM


on

By

Mysore dasara
Koo

ಮೈಸೂರು: ‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ 2024 (Mysore Dasara) ಸಡಗರ ಕಳೆಗಟ್ಟಿದೆ. ಅ.12ರಂದು ಮೈಸೂರು ಅರಮನೆಯಲ್ಲಿ ದಶಮಿ ಕಾರ್ಯಕ್ರಮಗಳು ನಡೆಯಲಿದೆ. ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿದೆ.

ದಿನವಿಡೀ ಏನೆಲ್ಲ ಕಾರ್ಯಕ್ರಮ ನಡೆಯಲಿದೆ

-ಬೆಳಗ್ಗೆ 10:15ಕ್ಕೆ ಅರಮನೆ ಆವರಣದಲ್ಲಿ ಉತ್ತರ ಪೂಜೆ.
ಅರಮನೆಗೆ ಆಗಮಿಸಲಿರುವ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ.
-ಬೆಳಗ್ಗೆ 10 ಗಂಟೆಗೆ ಅರಮನೆ ಶ್ವೇತ ವರಹ ದೇವಸ್ಥಾನದಲ್ಲಿ ಜಟ್ಟಿಗಳ ಸಿದ್ಧತೆ.
-ಬೆಳಗ್ಗೆ 10:45 ರಿಂದ 11 ಗಂಟೆಗೆ ಜೆಟ್ಟಿ ಕಾಳಗ.
ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆಯಲಿರುವ ಜಟ್ಟಿ ಕಾಳಗ.
-ಬೆಳಗ್ಗೆ 11.10ಕ್ಕೆ ವಿಜಯ ಯಾತ್ರೆ ನಡೆಸಲಿರುವ ಯದುವೀರ್.
-ಬೆಳಗ್ಗೆ 11:20 ರಿಂದ 11:45ಕ್ಕೆ ಭುವನೇಶ್ವರಿ ದೇವಸ್ಥಾನಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಆಗಮನ.
-ಬನ್ನಿ ಪೂಜೆ ಸಲ್ಲಿಸಲಿರುವ ಯದುವೀರ್. ಬನ್ನಿ ಪೂಜೆಯ ಬಳಿಕ ಯದುವೀರ್ ಸ್ವಸ್ಥಾನಕ್ಕೆ ವಾಪಸ್.
ಪೂಜೆ ಬಳಿಕ ಕಂಕಣ ವಿಸರ್ಜನೆ ಮಾಡಿ ಅರಮನೆ ದಸರಾ ಸಮಾಪ್ತಿ.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

By

mysore dasara
Koo

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024
Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಬೆಂಗಳೂರಿಗೂ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

moderate rains and at isolated to scattered heavy to very heavy rains associated with thunderstorm
Koo

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

moderate rains and at isolated to scattered heavy to very heavy rains associated with thunderstorm
moderate rains and at isolated to scattered heavy to very heavy rains associated with thunderstorm

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಶನಿವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನಿವಾರ್ಯ ಕಾರಣದಿಂದ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜತೆಗೆ ವಾದಕ್ಕೆ ಕಾರಣವಾಗಬಹುದು.ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಮೀನ ರಾಶಿಯವರು ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ.ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 05.44 ವಾರ: ಶನಿವಾರ
ನಕ್ಷತ್ರ: ಶ್ರಾವಣ 16:27 ಯೋಗ: ಧೃತಿ 12:22
ಕರಣ: ಕೌಲವ 10:58 ಅಮೃತಕಾಲ: ಸಂಜೆ 06:28 ರಿಂದ 08:01
ದಿನದ ವಿಶೇಷ: ವಿಜಯದಶಮಿ, ಮೈಸೂರು ಜಂಬೂಸವಾರಿ, ಶಮೀಪೂಜೆ,

ಸೂರ್ಯೋದಯ : 06:10   ಸೂರ್ಯಾಸ್ತ : 06:02

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿವಾರ್ಯ ಕಾರಣದಿಂದ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜತೆಗೆ ವಾದಕ್ಕೆ ಕಾರಣವಾಗಬಹುದು.ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ವ್ಯಾಪಾರವನ್ನು ಬಲಪಡಿಸಲು ಇಂದು ನೀವು ಯಾವುದೇ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬಹುದು. ಇದಕ್ಕಾಗಿ ನಿಮ್ಮ ಆಪ್ತ ನಿಮಗೆ ಆರ್ಥಿಕವಾಗಿ ಸಹಾಯ ಮಾಡಬಹುದು.ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.ಉದ್ಯೋಗಿಗಳಿಗೆ ಭರವಸೆ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ – ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಮಕ್ಕಳ ಅವರ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಜನರ ಸಹಕಾರ ಸಿಗಲಿದೆ.ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ.ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದುವ ಸಾಧ್ಯತೆ ಇದೆ. ಕುಟುಂಬದ ಬೆಂಬಲ ಸಿಗಲಿದೆ.ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಇರಲಿದೆ. ಆರ್ಥಿಕ ಪ್ರಗತಿ ಸಾಧರಣವಾಗಿರಲಿದೆ.ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿವಾರ್ಯ ಕಾರಣದಿಂದ ಖರ್ಚು ಹೆಚ್ಚಾಗಲಿದೆ.ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಗಾತಿಯ ವರ್ತನೆ ಇಂದು ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆಯನ್ನುಂಟು ಮಾಡಬಹುದು. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ನಿಜವಾಗಿಯೂ ಅದ್ಭುತ ಮತ್ತು ಸೃಜನಶೀಲವಾಗಿರುವಂತಹ ಆಲೋಚನೆಗಳು ಬರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಒತ್ತಡದ ವಾತಾವರಣದಿಂದ ಹೊರ ಬರಲು ಧ್ಯಾನ,ಯೋಗ ಮಾಡಿ.ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು, ನೀವು ಈ ಸಲಹೆಯನ್ನು ಅನುಸರಿಸಿದರೆ, ನೀವು ಖಂಡಿತವಾಗಿಯೂ ಹಣವನ್ನು ಗಳಿಸುವಿರಿ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ವಿರಾಮದ ವಾತಾವರಣ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಧಾರ್ಮಿಕ ಭಾವನೆ ಉದ್ಭವಿಸಿ, ದೈವಿಕ ಜ್ಞಾನವನ್ನು ಪಡೆಯಲು ನೀವು ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುತ್ತವೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು.ಉದ್ಯೋಗಿಗಳಿಗೆ ಹೊಸ ಉತ್ಸಾಹ ಇರಲಿದೆ.ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು.ದೀರ್ಘಕಾಲದ ಕೆಲಸ ಇಂದು ಪೂರ್ಣ ಗೊಳ್ಳುವ ಸಾಧ್ಯತೆ.ಆರ್ಥಿಕ ವ್ಯವಹಾರದಲ್ಲಿ ಪ್ರಗತಿ.ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ.ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Mysore dasara
ಮೈಸೂರು1 ಗಂಟೆ ago

Mysore Dasara : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಡಗರ

mysore dasara
ಕರ್ನಾಟಕ1 ಗಂಟೆ ago

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

moderate rains and at isolated to scattered heavy to very heavy rains associated with thunderstorm
ಮಳೆ7 ಗಂಟೆಗಳು ago

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

dina bhavishya
ಭವಿಷ್ಯ8 ಗಂಟೆಗಳು ago

Dina Bhavishya : ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ

Old Hubballi riot case Union Minister Pralhad Joshi expresses displeasure over nia's decision to withdraw
ಹುಬ್ಬಳ್ಳಿ19 ಗಂಟೆಗಳು ago

Hubballi news : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ಎನ್‌ಐಎಯಿಂದ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರಲ್ಹಾದ ಜೋಶಿ ಆಕ್ರೋಶ

Online gambling Rs 20 lakh for rummy addiction debt Bank employee leaves home due to debtors
ಬೆಂಗಳೂರು21 ಗಂಟೆಗಳು ago

Online gambling : ರಮ್ಮಿ ಚಟಕ್ಕೆ 20 ಲಕ್ಷ ರೂ. ಸಾಲ; ಸಾಲಗಾರರ ಕಾಟಕ್ಕೆ ‘ನಾನು ಸೋತಿದ್ದೇನೆ’ ಎಂದು ಮನೆ ತೊರೆದ ಬ್ಯಾಂಕ್‌ ನೌಕರ

Kantilal Bhansali a close aide of former CM BS Yediyurappa attacked assaulted in gadag
ಗದಗ22 ಗಂಟೆಗಳು ago

Assault Case : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಅಪರಿಚಿತರು ಪರಾರಿ

Husband and wife arrested for honey-trapping in Hubballi-Dharwad
ಹುಬ್ಬಳ್ಳಿ23 ಗಂಟೆಗಳು ago

Honey Trap : ಹುಬ್ಬಳ್ಳಿ- ಧಾರವಾಡದಲ್ಲಿ ಹನಿಟ್ರ್ಯಾಪ್‌ಗೆ ಇಳಿದ ಗಂಡ-ಹೆಂಡತಿ

Heavy rains lash Yadgir Woman killed in lightning strike
ಮಳೆ23 ಗಂಟೆಗಳು ago

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Ayudha Puja celebrations across the karnataka state Temples housefull by devotees
ಬೆಂಗಳೂರು1 ದಿನ ago

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌