Site icon Vistara News

K. Shivram: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Baanelle Madhuchandrake movie actor K. Shivaram health condition is serious

ಬೆಂಗಳೂರು: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ (K. Shivram) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಎಚ್ ಸಿ ಜಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಈಗ ನಟನಿಗೆ 71 ವರ್ಷ.

ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು.  ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ  10 ಸಿನೆಮಾದಲ್ಲಿ ನಟಿಸಿದ್ದಾರೆ.

ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Dhanya Ramkumar: ಧನ್ಯಾ ರಾಮ್‌ಕುಮಾರ್ ನಟನೆಯ ʻಹೈಡ್ ಆ್ಯಂಡ್ ಸೀಕ್ʼ ಸಿನಿಮಾ ಟ್ರೈಲರ್‌ ಔಟ್‌!

2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

Exit mobile version