Site icon Vistara News

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Banned Films

ಬೆಂಗಳೂರು: ಭಾರತದಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನ ಕಾಣಬೇಕೆಂದರೆ ಮೊದಲು ಭಾರತೀಯ ಸೆನ್ಸಾರ್ ಮಂಡಳಿಯ ಅನುಮತಿ ಪಡೆಯಬೇಕು.  ಭಾರತೀಯ ಸೆನ್ಸಾರ್ ಮಂಡಳಿಯು ಉತ್ತಮವಾದ ಚಲನಚಿತ್ರಗಳನ್ನು ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಶ್ಲೀಲ ದೃಶ್ಯಾವಳಿ, ಕೆಟ್ಟ ಬೈಗುಳ ಪದಗಳಿರುವಂತಹ ಚಿತ್ರಗಳನ್ನು ಬ್ಯಾನ್ (Banned Film) ಮಾಡಲಾಗುತ್ತದೆ. ಇಂತಹ ಚಿತ್ರಗಳು ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಸೆನ್ಸಾರ್ ಮಂಡಳಿ ಅನುಮತಿ ನೀಡುವುದಿಲ್ಲ.

ಒಟಿಟಿ ಅಥವಾ ವಿದೇಶಿ ಮಾರುಕಟ್ಟೆಗಳಲ್ಲಿ ದೊಡ್ಡ ಹೆಸರು ಗಳಿಸಿರುವಂತಹ ಕೆಲವೊಂದು ಚಲನಚಿತ್ರಗಳು ಭಾರತದಲ್ಲಿ ಬಿಡುಗಡೆಯಾಗಲಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ಪ್ರಸಿದ್ಧ ಚಲನಚಿತ್ರಗಳನ್ನು ಭಾರತೀಯ ಸೆನ್ಸಾರ್ ಮಂಡಳಿಯು ಸ್ಪಷ್ಟ ವಿಷಯಗಳ ಕಾರಣದಿಂದ ಭಾರತದಲ್ಲಿ ನಿಷೇಧಿಸಿದೆ. ಅಂತಹ ಹಾಲಿವುಡ್ ಚಿತ್ರಗಳ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

1. ಫಿಫ್ಟಿ ಶೇಡ್ಸ್ ಆಫ್ ಗ್ರೇ(Fifty Shade Of Gray)

ಈ ಚಿತ್ರದ ಕಥೆ ಅನಾ ಎಂಬ ಕಾಲೇಜು ವಿದ್ಯಾರ್ಥಿನಿಯ ಸುತ್ತ ಸುತ್ತುತ್ತದೆ. ಆಕೆ ಒಬ್ಬ ವ್ಯಾಪಾರಿ ಉದ್ಯಮಿ ಕ್ರಿಶ್ಚಿಯನ್ನೊಂದಿಗೆ ಸಂಬಂಧ ಹೊಂದುತ್ತಾಳೆ. ಈ ಚಿತ್ರದಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಚಿತ್ರೀಕರಿಸಲಾಗಿದೆ. ಹಾಗಾಗಿ ಈ ಚಿತ್ರವನ್ನು ಭಾರತೀಯ ಸೆನ್ಸರ್ ಮಂಡಳಿ ನಿಷೇಧಿಸಿದೆ.

2. ದ ಡಾ ವಿನ್ಸಿ ಕೋಡ್ (The Da Vinci Code)

ಈ ಚಿತ್ರ ಡಿ ವಿನ್ಸಿ ಕೋಡ್ ರಾಬರ್ಟ್ ಲ್ಯಾಂಗ್ಡನ್ ಎಂಬ ಸಂಕೇತಶಾಸ್ತ್ರಜ್ಞನ ಬಗ್ಗೆ ಚಿತ್ರಿಸುತ್ತದೆ. ಅವರು ಪ್ಯಾರಿಸ್ ನಿಂದ ಲಂಡನ್ ಗೆ ಒಂದು ಕೊಲೆಯ ಬಗ್ಗೆ ತಿಳಿಯಲು ಹೋಗುತ್ತಾರೆ. ಈ ಚಿತ್ರದಲ್ಲಿ ಕ್ರಿಶ್ಚಿಯನ್ ವಿರೋಧಿ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸುವಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬಾರತೀಯ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ಬ್ಯಾನ್ ಮಾಡಿದೆ.

3. ದ ಗರ್ಲ್ ವಿತ್ ಡ್ರ್ಯಾಗನ್ ಟ್ಯಾಟೂ (The Girl With Dragon Tattoo)

ಈ ಚಿತ್ರ ನಲವತ್ತು ವರ್ಷಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬಳ ಪ್ರಕರಣವನ್ನು ಭೇದಿಸಲು ಕಂಪ್ಯೂಟರ್ ಹ್ಯಾಕರ್ ಅನ್ನು ನೇಮಿಸಿಕೊಳ್ಳುವ ಪತ್ರಕರ್ತನ ಸುತ್ತ ಸುತ್ತುತ್ತದೆ. 2011ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಸೆನ್ಸರ್ ಮಂಡಳಿ ತೆಗೆದುಹಾಕುವಂತೆ ಹೇಳಿತು. ಆದರೆ ನಿರ್ದೇಶಕ ಡೇವಿಡ್ ಫಿಂಚರ್ ಇದನ್ನು ನಿರಾಕರಿಸಿದ್ದರಿಂದ ಭಾರತದಲ್ಲಿ ಈ ಚಿತ್ರ ಬಿಡುಗಡೆಯಾಗಲಿಲ್ಲ.

4. ಡರ್ಟಿ ಗ್ರ್ಯಾಂಡ್ ಪಾ( durty Grand pa)

ಇದು  ಯುಎಸ್ ನ ಮಿಲಿಟರಿ ಪರಿಣತರನ್ನು ಆಧರಿಸಿದ ಚಿತ್ರವಾಗಿದೆ. ಒಬ್ಬ ಅಜ್ಜ ಮೊಮ್ಮಗ ಜೇಸನ್ ಎನ್ನುವವನನ್ನು ತನ್ನ ಜೊತೆ ಪ್ಲೋರಿಡಾಕ್ಕೆ ಕರೆದೊಯ್ದರು. ಪ್ರವಾಸದ ವೇಳೆ ಅಜ್ಜನ ಸರಣಿ ದುಷ್ಕೃತ್ಯಗಳ ಬಗ್ಗೆ ಆತನಿಗೆ ತಿಳಿದಿರುವುದಿಲ್ಲ. ಈ ಚಿತ್ರದಲ್ಲಿ ಲೈಂಗಿಕತೆಯ ಬಗ್ಗೆ ಬಿಂಬಿಸಿದ ಕಾರಣ ಇದು ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

5. ಬ್ಲೂ ಜಾಸ್ಮಿನ್ ( Blue Jasmine)

ಈ ಚಿತ್ರದಲ್ಲಿ ಕೆಲವು ಪಾತ್ರಗಳು ಹೆಚ್ಚು ಧೂಮಪಾನ ಮಾಡುತ್ತಿರುವುದು ಕಂಡುಬಂದ ಕಾರಣ ಅದನ್ನು ತೆಗೆಯುವಂತೆ ಸೆನ್ಸಾರ್ ಮಂಡಳಿ ತಿಳಿಸಿದ್ದು, ಇದಕ್ಕೆ ನಿರ್ದೇಶಕರು ಒಪ್ಪದ ಕಾರಣ ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

6. ಐ ಸ್ಪಿಟ್ ಆನ್ ಯುವರ್ ಗ್ರೇವ್ ( I Spit On Your Grave)

ಈ ಚಿತ್ರ ವಿವಾದಾತ್ಮಕವಾಗಿದ್ದು, ಹಲವಾರು ಭಯಾನಕ ಲೈಂಗಿಕ ಕಿರುಕುಳದ ದೃಶ್ಯಗಳನ್ನು ಹೊಂದಿದೆ. ಮೀರ್ ಜಾರ್ಚಿ ನಿರ್ದೇಶನದ ಈ ಚಿತ್ರವನ್ನು ಭಾರತ ಮಾತ್ರವಲ್ಲದೇ ಯುಕೆ, ಕೆನಡಾ, ಚೀನಾ, ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಲ್ಲಿ ನಿಷೇಧಿಸಲಾಗಿದೆ.

7. ಇಂಡಿಯಾನ ಜೋನ್ಸ್ ಆ್ಯಂಡ್ ದ ಟೆಂಪಲ್ ಆಫ್ ಡೂಮ್( Indiana Jones And The Temple Of Doom)

ಆರಾಧನೆಯ ಹೆಸರಿನಲ್ಲಿ ಬಲಿಪಶುಗಳನ್ನು ಬೆಂಕಿಗೆ ಎಸೆಯುವಂತಹ ಕ್ರೂರ ದೃಶ್ಯವನ್ನು ಒಳಗೊಂಡ ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲಿಲ್ಲ. ಭಾರತೀಯ ಸೆನ್ಸಾರ್ ಮಂಡಳಿ ಇದನ್ನು ಕೆಟ್ಟ ಆಚರಣೆಯ ಮನಸ್ಥಿತಿ ಎಂದು ನಿಷೇಧಿಸಿದೆ.

8. ಗೆಟ್ ಹಾರ್ಡ್(Get Hard)

ಕಾಮಿಡಿ ಥ್ರಿಲ್ಲರ್ ಜೇಮ್ಸ್ ಕಿಂಗ್ ಎಂಬ ವ್ಯಕ್ತಿಯನ್ನು ಬಗ್ಗೆ ತಿಳಿಸುತ್ತದೆ ಮತ್ತು ಅವರು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ. ಇದರಿಂದ ಜನರು ಆಕ್ರೋಶಗೊಳ್ಳಬಹುದು ಎಂದು ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

9. ಮ್ಯಾಜಿಕ್ ಮೈಕ್ XXL( magic mike XXL)

ಈ ಚಿತ್ರ ಸ್ಟ್ರಿಪ್ಪರ್ ಎಂಬ ಪುರುಷನ ಜೀವನವನ್ನು ಬಿಂಬಿಸುತ್ತದೆ. ಈ ವ್ಯಕ್ತಿ ಸಮಾವೇಶಕ್ಕಾಗಿ ಮಿರ್ಟಲ್ ಬೀಚ್ ಗೆ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಾನೆ. ಆ ವೇಳೆ ಅವರು ತಮ್ಮ ಹಿಂದಿನ ಹಳೆಯ ನೆನಪುಗಳನ್ನು ಪುನರುಜ್ಜೀವನ ಗೊಳಿಸುತ್ತಾರೆ. ಇದರಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಬಿಂಬಿಸಲಾದ್ದರಿಂದ ಭಾರತದಲ್ಲಿ ಮೊದಲ ಬಾರಿಗೆ ನಿಷೇಧಗೊಂಡಿತ್ತು. ನಂತರ ಅದರಲ್ಲಿರುವ ದೃಶ್ಯವನ್ನು ಕತ್ತರಿಸಲು ಸೆನ್ಸಾರ್ ಮಂಡಳಿ ತಿಳಿಸಿದರೂ ಅದನ್ನು ನಿರಾಕರಿಸಿದ ಕಾರಣ ಅದು ಎರಡನೇ ಬಾರಿ ನಿಷೇಧಗೊಂಡಿತ್ತು. ಹಾಗಾಗಿ ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Exit mobile version