Site icon Vistara News

Kannada New Movie: ಜವಾರಿ ಭಾಷೆಯ `ಬಯಲುಸೀಮೆ’ ಸಿನಿಮಾ ಟ್ರೈಲರ್‌ ಬಿಡುಗಡೆ ಮಾಡಿದ ಜೂ.ರೆಬಲ್ ಸ್ಟಾರ್!

abhishek ambareesh with Bayaluseeme Movie Team

ಬೆಂಗಳೂರು: ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆ ಇರುವ ‘ಬಯಲುಸೀಮೆ’ ಸಿನಿಮಾದ (Kannada New Movie) ಟ್ರೈಲರ್‌ ಬಿಡುಗಡೆಯಾಗಿದೆ. ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್‌ ಟ್ರೈಲರ್‌ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. 2 ನಿಮಿಷ 50 ಸೆಕೆಂಡ್ ಇರುವ ಟ್ರೈಲರ್‌ ಭಾರೀ ನಿರೀಕ್ಷೆ ಹೆಚ್ಚಿಸಿದೆ. ರೋಚಕ ತಿರುವುಗಳು, ಜವಾರಿ ಭಾಷೆಯ ಸಂಭಾಷಣೆ, ರಾಜಕೀಯ ಮೇಲಾಟದ ಸುತ್ತ ಕಥೆ ಸಾಗುತ್ತದೆ. ಈಗಾಗಲೇ ಹಾಡುಗಳ ಮೂಲಕ ಗಮನಸೆಳೆದಿರುವ ಬಯಲುಸೀಮೆ ಸಿನಿಬಳಗ ಟ್ರೈಲರ್‌ ಬಿಟ್ಟು ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ವರುಣ್ ಕಟ್ಟಿಮನಿ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ಆರ್ಮುಗಂ ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಇದನ್ನೂ ಓದಿ: Kannada New Movie | ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಹೊತ್ತು ತರಲಿದೆ ʻಬಯಲು ಸೀಮೆʼ!

ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿ ಆರ್ ಎಸ್ ಕ್ರಿಯೇಷನ್ಸ್ ಬ್ಯಾನರ್‌ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾವರ್ಕ್, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಉತ್ತರ ಕರ್ನಾಟಕದ ಖಡಕ್ ಖಾನಾವಳಿ ಊಟ ಇದ್ದಂಗೆ ಇರುವ ಬಯಲುಸೀಮೆ ಸಿನಿಮಾ ಇದೇ 18ಕ್ಕೆ ತೆರೆಗೆ ಬರಲಿದೆ.

Exit mobile version