BBK Season 10: ದೂರವಾಗುತ್ತ ಸಂತು-ಪಂತು ಜೋಡಿ? ಮನೆಯಿಂದ ಹೊರ ಹೋದವರು ಯಾರು? - Vistara News

ಬಿಗ್ ಬಾಸ್

BBK Season 10: ದೂರವಾಗುತ್ತ ಸಂತು-ಪಂತು ಜೋಡಿ? ಮನೆಯಿಂದ ಹೊರ ಹೋದವರು ಯಾರು?

BBK Season 10: ಬಿಗ್‌ಬಾಸ್‌ ಕನ್ನಡ ಸೀಸನ್‌ ಫಿನಾಲೆ ಹಂತಕ್ಕೆ ಬಂದಿದೆ. ಬಿಗ್‌ಬಾಸ್‌ ಮನೆಯೊಳಗೆ ಸ್ನೇಹಿತರಾಗಿ ಗುರುತಿಸಿಕೊಂಡಿರುವ ವರ್ತೂರು ಸಂತೋಷ್‌ ಮತ್ತು ತುಕಾಲಿ ಸಂತೋಷ್‌ ಪೈಕಿ ಒಬ್ಬರು ಹೊರ ಹೋಗುತ್ತಾರೆ ಎನ್ನಲಾಗಿದೆ.

VISTARANEWS.COM


on

big boss
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (BBK Season 10)ರ ಫಿನಾಲೆಯ ದಿನ ಸಮೀಪಿಸುತ್ತದೆ. ಈ ಮಧ್ಯೆ ಯಾರೆಲ್ಲ ಅಂತಿಮ ಹಂತಕ್ಕೆ ತಲುಪುತ್ತಾರೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಶುಕ್ರವಾರ ರಾತ್ರಿ ಬಿಗ್‌ಬಾಸ್‌ ಬಿನ್‌ಬ್ಯಾಗ್‌ ಮೇಲೆ ಕೂತಿದ್ದ ತುಕಾಲಿ ಸಂತೋಷ್ ಮತ್ತು ವರ್ತೂರು ಸಂತೋಷ್ ಇಬ್ಬರೂ ತಮ್ಮ ಜರ್ನಿಯನ್ನು ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದರು. ಇಬ್ಬರಲ್ಲಿ ಯಾರಾದರೂ ಹೊರಗೆ ಹೋದರೆ ಎಂದು ಪರಸ್ಪರ ಸಂತೈಸಿಕೊಂಡಿದ್ದರು. ಅವರ ಮಾತು ನಿಜವಾಗುವ ಘಳಿಗೆ ಸಮೀಪ ಬಂದಂತಿದೆ. ಈ ಬಗ್ಗೆ ಪ್ರೋಮೊದಲ್ಲಿ ಸುಳಿವು ದೊರಕಿದೆ. ಸಂತು-ಪಂತು ಎಂದೇ ಕರೆಯಲ್ಪಡುವ ಇವರು ಮೊದಲಿನಿಂದಲೂ ಬಿಗ್‌ಬಾಸ್‌ ಮನೆಯಲ್ಲಿ ಸ್ನೇಹಿತರಾಗಿ ಗುರುತಿಸಿಕೊಂಡಿದ್ದರು.

‘ಸೂಪರ್ ಸಂಡೆ ವಿತ್ ಸುದೀಪ್‌’ ಎಪಿಸೋಡ್‌ನಲ್ಲಿ ಸುದೀಪ್ ಸೇಫ್‌ ಆದ ಎಲ್ಲರನ್ನೂ ಹೇಳುತ್ತ ಕೊನೆಯಲ್ಲಿ, ʼʼವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರೇ ನಿಮ್ಮಿಬ್ಬರಲ್ಲಿ ಒಬ್ಬರನ್ನು ಇವತ್ತು ಹೊರಗಡೆ ಕಳಿಸಬೇಕಾಗಿದೆʼʼ ಎಂದು ಹೇಳಿದ್ದಾರೆ. ಅವರ ಮಾತು ಕೇಳಿ ಇಬ್ಬರ ಕಣ್ಣಲ್ಲಿ ನೀರು ತುಂಬಿಕೊಂಡಿದೆ. ಅಳುತ್ತಲೇ, ತುಕಾಲಿ ಸಂತೋಷ್, ʼʼನಾನು ಹೊರಡಬೇಕಿದ್ದರೆ, ಚೆನ್ನಾಗಿ ಆಡಿ ಗೆದ್ಕೊಂಡು ಬಾ ಎಂದು ಹೇಳೋಕೆ ಇಷ್ಟಪಡ್ತೀನಿʼʼ ಎಂದು ವರ್ತೂರು ಸಂತೋಷ್‌ ಅವರನ್ನು ಉದ್ದೇಶಿಸಿ ಹೇಳಿದರು. ಇತ್ತ ವರ್ತೂರು ಸಂತೋಷ್ ಭಾವುಕರಾಗಿ, ‘ʼತುಕಾಲಿ ಸಂತೋಷ್ ಗೆಲ್ಲುವುದನ್ನು ನಾನು ನೋಡಬೇಕು’ʼ ಎಂದು ಹೇಳಿರುವುದು ಪ್ರೋಮೊದಲ್ಲಿ ಕಂಡು ಬಂದಿದೆ.

ಯಾವಾಗಲೂ ತುಕಾಲಿ ಅವರನ್ನು ವಿರೋಧಿಸುವ ನಮ್ರತಾ ಕೂಡ, ʼʼಹಿಂದೆಲ್ಲ ನನಗೆ ಇವರಿಬ್ಬರೂ ದೂರ ಆಗಬೇಕು ಎಂದು ಜಾಸ್ತಿ ನನಗೆ ಅನಿಸುತ್ತಿತ್ತು. ಆದರೆ ಇವತ್ತು…ʼʼ ಎಂದು ಹೇಳಿ ʼʼಹಾಗಾಗಬಾರದುʼʼ ಎನ್ನುವಂತೆ ತಲೆಯಾಡಿಸಿದ್ದಾರೆ. ಈ ವೇಳೆ ಸಂಗೀತಾ ಶೃಂಗೇರಿ ಕೂಡ ಕಣ್ಣೀರು ಸುರಿಸಿದ್ದಾರೆ.

ಸುದೀಪ್‌ ಮೆಚ್ಚುಗೆ

ಇತ್ತ ಕಿಚ್ಚ ಸುದೀಪ್ ಕೂಡ ಸಂತು-ಪಂತು ಅವರ ಗೆಳೆತನವನ್ನು ಮನಃಪೂರ್ವಕವಾಗಿ ಹೊಗಳಿದ್ದಾರೆ. ʼʼಯಾರಲ್ಲಿಯೂ ನೋಡದ ಒಂದು ಭಾಂದವ್ಯವನ್ನು ನಿಮ್ಮಿಬ್ಬರಲ್ಲಿ, ಈ ಸೀಸನ್‌ನಲ್ಲಿ ನಾನು ನೋಡಿದ್ದೀನಿ. ನಿಷ್ಕಳಂಕವಾದ ಫ್ರೆಂಡ್‌ಶಿಪ್‌ ಇದು’ʼ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಹಾಗಾದರೆ ಸಂತು-ಪಂತು ಈ ಇಬ್ಬರಲ್ಲಿ ಯಾರಿಗೆ ಈ ವಾರ ಮನೆಯಿಂದ ಗೇಟ್‌ಪಾಸ್ ಸಿಗುತ್ತದೆ? ಯಾರು ಬಿಗ್‌ಬಾಸ್‌ ಮನೆಯಲ್ಲಿ ಉಳಿದುಕೊಳ್ಳುತ್ತಾರೆ? ಆಪ್ತ ಸ್ನೇಹಿತ ಇಲ್ಲದೆ ಮನೆಯೊಳಗೆ ಹೇಗಿರುತ್ತಾರೆ?
ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಂದಿನ ‘ಸೂಪರ್ ಸಂಡೆ ವಿತ್ ಸುದೀಪ್’ ಎಪಿಸೋಡ್‌ನಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ: BBK SEASON 10: ಬಿಗ್‌ಬಾಸ್‌ ವಿರುದ್ಧ ಮೊದಲ ಬಾರಿ ಕೇಳಿ ಬಂತು ಆರೋಪ

ಸ್ಪಷ್ಟನೆ ಕೊಟ್ಟ ಸುದೀಪ್‌

ಇನ್ನು ಬಿಗ್‌ಬಾಸ್‌ ಮನೆಯಲ್ಲಿ ಡ್ರೋನ್‌ ಪ್ರತಾಪ್‌ಗೆ ಅನ್ಯಾಯವಾಗಿದೆ ಎನ್ನುವ ಚರ್ಚೆಗೆ ತೆರೆ ಎಳೆದಿರುವ ಸುದೀಪ್‌ ಆ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ವಾರ ಉತ್ತಮವಾಗಿ ಆಡಿ ಹೆಚ್ಚು ಅಂಕ ಗಳಿಸಿದವರು ನೇರ ಫಿನಾಲೆಗೆ ಟಿಕೆಟ್‌ ಪಡೆಯುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ಪ್ರತಾಪ್‌ ಹೆಚ್ಚಿನ ಅಂಕ ಗಳಿಸಿದ್ದರು. ಆದರೆ ಮತದಾನ ನಡೆಸಿ ಆ ಮೂಲಕ ಹೆಚ್ಚು ವೋಟು ಪಡೆದ ಸಂಗೀತಾ ಶೃಂಗೇರಿ ಫಿನಾಲೆಗೆ ತಲುಪಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ‘ಕಿಚ್ಚನ ಪಂಚಾಯ್ತಿ’ಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸುದೀಪ್‌, ”ಬಿಗ್​ಬಾಸ್ ಎಂಬುದು ಒಂದು ವಾರದ ಆಟವಲ್ಲ. ಆಟದ ಜತೆಗೆ ಮನೆಯಲ್ಲಿನ ಸದಸ್ಯರ ವ್ಯಕ್ತಿತ್ವವೂ ಪ್ರಮುಖವಾಗುತ್ತದೆ. ವೀಕ್ಷಕರ ಅಭಿಪ್ರಾಯದ ಜತೆಗೆ ಮನೆಯ ಒಳಗಿರುವವರ ಅಭಿಪ್ರಾಯವೂ ಮುಖ್ಯವಾಗುತ್ತದೆ. ನೋಡುವವರಿಗೆ ಈ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದೇನೆʼʼ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Nutrition Alert
ಆರೋಗ್ಯ2 mins ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ15 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ17 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ23 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ25 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ37 mins ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ42 mins ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Ebrahim Raisi
ದೇಶ1 hour ago

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Hit And Run Case
ಕರ್ನಾಟಕ1 hour ago

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

IPL 2024
ಕ್ರೀಡೆ2 hours ago

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌