Site icon Vistara News

BICFF 2023: ಬೆಂಗಳೂರು ಇಂಟರ್‌ನ್ಯಾಷನಲ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಪ್ರದರ್ಶನವಾಗಲಿದೆ ʼವಿರಾಟಪುರ ವಿರಾಗಿʼ ಸಿನಿಮಾ

#image_title

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು ನಿರ್ದೇಶನದ ʼವಿರಾಟಪುರ ವಿರಾಗಿ’ ಸಿನಿಮಾ ಮಾರ್ಚ್ 23ರಿಂದ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BICFF 2023) ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಏಷಿಯನ್ ಸ್ಪರ್ಧೆಯಲ್ಲಿ ಇರಾನ್, ಇಸ್ರೇಲ್, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಮರಾಠಿ ಸೇರಿದಂತೆ ಒಟ್ಟು 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಈ ಹದಿನಾಲ್ಕು ಸಿನಿಮಾಗಳಲ್ಲಿ ವಿರಾಟಪುರ ವಿರಾಗಿ ಸಿನಿಮಾ ಕೂಡ ಒಂದು.

ಇದನ್ನೂ ಓದಿ: BICFF 2023: ಬೆಂಗಳೂರು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ವಿಜೇತರಿಗೆ ಅಪ್ಪು ಹೆಸರಲ್ಲಿ ನೆನಪಿನ ಕಾಣಿಕೆ
ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ.

ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿತ್ತು. ಸಿನಿಮಾದ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿದ್ದವು. ಸಿನಿಮಾ 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

ಇದನ್ನೂ ಓದಿ: International Film Festival : ಬೆಂಗಳೂರು ಅಂತಾರಾಷ್ಟ್ರಿಯ ಚಲನಚಿತ್ರೋತ್ಸವಕ್ಕೆ ಸಕಲ ಸಿದ್ಧತೆ, ಮಾ.23ಕ್ಕೆ ಚಾಲನೆ
ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

Exit mobile version