ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಬರುವ ಸಿನಿಮಾಗಳು ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (Roopesh Shetty) ನಾಯಕನಾಗಿ ಕಾಣಿಸಿಕೊಂಡಿರುವ “ಮಂಕು ಭಾಯ್ ಫಾಕ್ಸಿ ರಾಣಿ” ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿ ಉತ್ಸಾಹಿ ತಂಡವೇ ಇದರಲ್ಲಿ ಕೆಲಸ ಮಾಡಿದೆ. ಈಗಾಗಲೇ ಈ ಚಿತ್ರ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದುಕೊಂಡಿದ್ದು, ಬಿಡುಗಡೆಗೆ ತಯಾರಿ ನಡೆಸಿದೆ. ರೂಪೇಶ್ ಶೆಟ್ಟಿ ನಾಯಕನಾಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಬ್ರಹ್ಮಗಂಟು ಸೀರಿಯಲ್ ಕಲಾವಿದೆ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ಗೀತಾ ಭಾರತಿ ಭಟ್ ಅಭಿನಯಿಸಿದ್ದಾರೆ.
ಖ್ಯಾತ ಕಲಾವಿದ ಪ್ರಕಾಶ್ ತೂಮಿನಾಡ್, ಪಂಚಮಿ ರಾವ್, ಅರ್ಜುನ್ ಕಜೆ ತಾರಾಬಳಗದಲ್ಲಿದ್ದಾರೆ. ತುಳು ಸಿನಿಮಾಗಳಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಗಗನ್ ಎಂ. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.
ಇದನ್ನೂ ಓದಿ | Bigg Boss Kannada | ಕೋಸ್ಟಲ್‌ವುಡ್ ಖ್ಯಾತಿಯ ನಟ, ನಿರ್ದೇಶಕ ರೂಪೇಶ್ ಶೆಟ್ಟಿ 3ನೇ ಸ್ಪರ್ಧಿ
ಲವ್ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಎಂ.ಕೆ.ಕೆ.ಷಜಹಾನ್ ಛಾಯಾಗ್ರಹಣವಿದ್ದು, ವಿನ್ಯಾಸ್ ಮದ್ಯ ಶಮೀರ್ ಮುಡಿಪು ಸಂಗೀತ ಹಾಗೂ ಸುಶಾಂತ್ ಶೆಟ್ಟಿ, ಪ್ರಜ್ವಲ್ ಸುವರ್ಣ ಸಂಕಲನವಿದೆ. ಜೋಶ್ವ ಜೈಶಾನ್ ಕ್ರಾಸ್ತ ನಿರ್ಮಾಣ ಮಾಡಿರುವ ಈ ಚಿತ್ರದ ಫಸ್ಟ್ ಟ್ರ್ಯಾಕ್ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.
ಸೋನು ನಿಗಂ ಕಂಠದಲ್ಲಿ ಮೂಡಿಬಂದಿರುವ ʻಮಿಂಚಂತೆ ಮಿನುಗುತಿರೊʼ ಎಂಬ ಹಾಡು ಎ೨ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಇದನ್ನೂ ಓದಿ | Bigg Boss Kannada | ಸೋನುಗೆ ಎಷ್ಟೇ ಬುದ್ಧಿವಾದ ಹೇಳಿದರೂ ಅಷ್ಟೇ: ಸೋನು ವಿಷ್ಯ ಬೇಡವೋ ಶಿಷ್ಯ!