ಬಾಲಿವುಡ್ ನಟ ಗೋವಿಂದ (Actor Govinda) ಕಾಲಿಗೆ ಗುಂಡು ತಗುಲಿದೆ. ರಿವಾಲ್ವರ್ ಲಾಕ್ ಓಪನ್ ಆಗಿದ್ದರಿಂದ ಜೇಬಿಗೆ ರಿವಾಲ್ವರ್ ಇಟ್ಟುಕೊಳ್ಳುವಾಗ ಮಿಸ್ ಫೈರ್ ಆಗಿದೆ. ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.
ನಟ ಗೋವಿಂದ ಲೈಸೆನ್ಸ್ ರಿವಾಲ್ವರ್ ಬಳಕೆ ಮಾಡುತ್ತಿದ್ದರು. ಮನೆ ಬಿಡುವಾಗ ಗನ್ ಚೆಕ್ ಮಾಡುತ್ತಿದ್ದರು. ಈ ವೇಳೆ ಗೋವಿಂದ ಕಾಲಿಗೆ ಬುಲೆಟ್ ತಗುಲಿದೆ. ತನ್ನದೇ ರಿವಾಲ್ವರ್ನಿಂದ ಫೈರಿಂಗ್ ಆಗಿದೆ. ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್ಮೆಂಟ್ ಮುಂದುವರಿದಿದೆ. ಅದೃಷ್ಟವಶಾತ್ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಈ ಸಂಬಂಧ ವಿಚಾರಣೆ ನಡೆಸಲಿದ್ದಾರೆ.
ಇದನ್ನೂ ಓದಿ: Actor Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು
ಮುಂಜಾನೆ ಕೋಲ್ಕತ್ತಾಗೆ ಹೊರಡುವ ಮೊದಲು ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ಜುಹು ನಿವಾಸದಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಫ್ಲೈಟ್ ಇತ್ತು. ನಾನು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿದ್ದೆ. ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ. ಸದ್ಯ ವೈದ್ಯರು ಗುಂಡು ಹೊರತೆಗೆದಿದ್ದು, ಗೋವಿಂದ ಆರೋಗ್ಯ ಸ್ಥಿರವಾಗಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.
ಆಸ್ಪತ್ರೆಯಿಂದ ನಟ ಗೋವಿಂದ ಆಡಿಯೋ ಮೆಸೇಜ್ ರಿಲೀಸ್ ಮಾಡಿದ್ದಾರೆ. ಎಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಗುಂಡು ಬಿದ್ದಿದನ್ನು ತೆಗೆಯಲಾಗಿದೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾರೆ. ಗೋವಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ