ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ (Anant Ambani Wedding) ಮಹಾರಾಷ್ಟ್ರದ ಮುಂಬೈನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ (Jio World Convention Centre) ಸ್ವರ್ಗವೇ ಧರೆಗಿಳಿದಂತಹ ವಾತಾವರಣ ನಿರ್ಮಾಣವಾಗಿದೆ. ಅದ್ಧೂರಿ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಂದ ಹಿಡಿದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿವರೆಗೆ ನೂರಾರು ನಟ-ನಟಿಯರು, ಕ್ರಿಕೆಟಿಗರು, ಗಾಯಕರು, ಉದ್ಯಮಿಗಳು ಭಾಗಿಯಾಗಿದ್ದಾರೆ. ಐಶ್ವರ್ಯಾ ರೈ ಮಾತ್ರ ಬಚ್ಚನ್ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದಾರೆ.
ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಹಾಗೂ ಇತರರು ಒಟ್ಟಾಗಿ ಮದುವೆಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಐಶ್ವರ್ಯಾ ಇರಲಿಲ್ಲ. ಮದುವೆಗೆ ಹಾಜರಾಗುತ್ತಿಲ್ಲವೇನೋ ಎಂದು ಕೆಲವರು ಭಾವಿಸಿದರು. ಬಳಿಕ ಅವರು ಮದುವೆಗೆ ಹಾಜರಿ ಹಾಕಿದ್ದಾರೆ. ಇನ್ನು ಆ ಬಳಿಕ ಐಶ್ವರ್ಯಾ ರೈ ಅವರು ಮಗಳ ಜತೆ ಪೋಸ್ ಕೊಟ್ಟಿದ್ದರು. ಐಶ್ವರ್ಯಾ ರೈಗೆ ಬಚ್ಚನ್ ಕುಟುಂಬದ ಜತೆ ಕಿರಿಕ್ ಮಾಡಿಕೊಂಡಿರುವುದು ನಿಜ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್-ಜಯಾ ಬಚ್ಚನ್ ದಂಪತಿ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಮೊದಲಿನಿಂದಲೂ ಇದೆ. ಇತ್ತೀಚೆಗೆ ಅಮಿತಾಭ್ ಹಾಗೂ ಅಭಿಷೇಕ್ ವಿಚ್ಛೇದನ ಪಡೆದುಕೊಳ್ಳುತ್ತಾರೆ ಎಂಬ ಗಾಸಿಪ್‌ಗಳು ಇವೆ.
ಇದನ್ನೂ ಓದಿ: Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು
“ಐಶ್ವರ್ಯಾ ಯಾವಾಗಲೂ ತನ್ನ ಮಗಳ ಜೊತೆ ಏಕಾಂಗಿಯಾಗಿರುತ್ತಾರೆ. ಕುಟುಂಬದ ಸದಸ್ಯರು ಒಟ್ಟಿಗೆ ಇರುತ್ತಾರೆಯೇ?ಕೌಟುಂಬಿಕ ಸಮಸ್ಯೆಗಳು ಏನೇ ಇರಲಿ ಆದರೆ ಅವರು ಐಶ್ವರ್ಯಾ ಮತ್ತು ಆರಾಧ್ಯ ಅವರನ್ನು ಕರೆಯಬೇಕುʼʼಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಐಶ್ವರ್ಯಾ ಕೆಂಪು ಅನಾರ್ಕಲಿ ಸೂಟ್, ಪಚ್ಚೆ ನೆಕ್ಲೇಸ್ ಮತ್ತು ಮಾಂಗ್ತಿಕಾ ಧರಿಸಿದ್ದರು. ಆರಾಧ್ಯ ಅವರು ಹಸಿರು ಸೂಟ್‌ನಲ್ಲಿ ಸರಳ ಮಾಂಗ್ತಿಕಾದಲ್ಲಿ ಸುಂದರವಾಗಿ ಕಾಣುತ್ತಿದ್ದರು.
ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯ ಕಿರಿಯ ಪುತ್ರ ಅನಂತ್ ಅಂಬಾನಿ ಬಾಲ್ಯದ ಗೆಳತಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು, ರಾಜಕಾರಣಿಗಳು, ಹಿಂದಿ ಮತ್ತು ದಕ್ಷಿಣ ಭಾರತ ಚಿತ್ರರಂಗದ ಮತ್ತು ಬಹುತೇಕ ಎಲ್ಲ ಗಣ್ಯರು ಭಾಗವಹಿಸಿದ್ದರು.
ಗಣ್ಯರ ದಂಡೇ ಉಪಸ್ಥಿತಿ
ಅನಂತ್ ಅಂಬಾನಿ ಮದುವೆಯಲ್ಲಿ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್ ಧೋನಿ, ಅಮಿತಾಭ್ ಬಚ್ಚನ್, ಆಲಿಯಾ ಭಟ್, ರಣವೀರ್ ಸಿಂಗ್, ರಣಬೀರ್ ಕಪೂರ್, ಅನನ್ಯಾ ಪಾಂಡೆ, ರಜನಿಕಾಂತ್, ಮಹೇಶ್ ಬಾಬು, ಹಾರ್ದಿಕ್ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ಬ್ರಿಟನ್ ಮಾಜಿ ಪ್ರಧಾನಿಗಳಾದ ಬೋರಿಸ್ ಜಾನ್ಸನ್, ಟೋನಿ ಬ್ಲೇರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.
5 ಸಾವಿರ ಕೋಟಿ ರೂ. ಖರ್ಚು
ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಆಗಿದೆ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.
ವಿವಾಹ ಪೂರ್ವ ಕಾರ್ಯಕ್ರಮಗಳೂ ಅದ್ಧೂರಿಯಾಗಿ ನಡೆದವು. ಭಾರತದ ಜಾಮ್‌ನಗರದಲ್ಲಿರುವ ಅಂಬಾನಿ ಎಸ್ಟೇಟ್‌ನಲ್ಲಿ ಮಾರ್ಚ್ 1 ರಿಂದ 3 ರವರೆಗೆ ಮೊದಲ ವಿವಾಹ ಪೂರ್ವ ಆಚರಣೆಯು 1,200 ಅತಿಥಿಗಳೊಂದಿಗೆ ನಡೆಯಿತು, ಇದರಲ್ಲಿ ಬಿಲ್ ಗೇಟ್ಸ್, ಹಿಲರಿ ಕ್ಲಿಂಟನ್, ಜೇರೆಡ್ ಕುಶ್ನರ್, ಇವಾಂಕಾ ಟ್ರಂಪ್, ಕಾರ್ಲಿ ಕ್ಲೋಸ್ ಮತ್ತು ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ 1,200 ಅತಿಥಿಗಳು ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ ರಿಹಾನ್ನಾ ಅವರ ಪ್ರದರ್ಶನಕ್ಕೆ 6 ರಿಂದ 9 ಮಿಲಿಯನ್ ಡಾಲರ್ ವೆಚ್ಚವಾಗಿದೆ ಎನ್ನಲಾಗಿದೆ.