ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆಯಲು ಸಿದ್ಧರಾಗಿದ್ದಾರೆ. ಬುಧವಾರ ಸಂಜೆ,(ಮೇ. 15) ಐಶ್ವರ್ಯಾ ಅವರು ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡು ಬಂದರು. ಆದರೆ ಐಶ್ವರ್ಯಾ (Aishwarya Rai Injured) ಅವರ ಕೈಗೆ ಪೆಟ್ಟಾಗಿ ಬ್ಯಾಂಡೇಜ್ ಕೂಡ ಸುತ್ತಿಕೊಂಡಿದ್ದರು. ಹೀಗಾಗಿ ಐಶ್ವರ್ಯಾ ಫ್ಯಾನ್ಸ್ (Cannes Film Festival with daughter) ಆತಂಕಕ್ಕೆ ಒಳಗಾಗಿ ಕಮೆಂಟ್ ಮೂಲಕ ನಟಿಯ ಕ್ಷೇಮ ವಿಚಾರಿಸಿದ್ದಾರೆ.
ವೈರಲ್ ಆಗುತ್ತಿರುವ ವಿಡಿಯೊದಲ್ಲಿ ಐಶ್ವರ್ಯಾ ಅವರು ಮಗಳ ಜತೆ ಕಾರಿನಿಂದ ಇಳಿದಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್ ಹಾಕಲಾಗಿತ್ತು. ಕಪ್ಪು ಉಡುಪಿನೊಂದಿಗೆ ನೀಲಿ ಕೋಟ್ ಧರಿಸಿದ್ದರು ನಟಿ. ಆರಾಧ್ಯ ಅವರು ತಿಳಿ ನೀಲಿ ಹೂಡಿ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಕೆಲ ಸೆಕೆಂಡುಗಳ ಕಾಲ ಮಾಧ್ಯಮದವರತ್ತ ಕೈ ಬೀಸಿದ ಐಶ್ವರ್ಯಾ ನಂತರ ಮುಂಬೈ ವಿಮಾನ ನಿಲ್ದಾಣ ಪ್ರವೇಶಿಸಿದರು.
ಇದನ್ನೂ ಓದಿ: Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು
ಹಲವಾರು ಅಭಿಮಾನಿಗಳು ನಟಿಯನ್ನು ಕಂಡು ಕಮೆಂಟ್ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ಅಭಿಮಾನಿ, ” ಈ ನೋವಿನಲ್ಲೂ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಹೇಗೆ ಹೆಜ್ಜೆ ಹಾಕುತ್ತಾರೆʼʼಎಂದು ಕಮೆಂಟ್ ಮಾಡಿದ್ದಾರೆ. ʻʻನಟಿ ತನ್ನ ಮಗಳನ್ನು ನೋಡಿಕೊಳ್ಳುತ್ತಿರುವ ರೀತಿ. ಅದ್ಭುತʼʼಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.
ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.