Site icon Vistara News

Akshay Kumar: ಪವರ್-ಪ್ಯಾಕ್ಡ್ ಜೋಡಿಯ ‘ಬಡೇ ಮಿಯಾನ್ ಚೋಟೆ ಮಿಯಾನ್’ ಟೈಟಲ್ ಟ್ರ್ಯಾಕ್ ರಿಲೀಸ್!

Bade Miyan Chote Miyan Title Track

ಬೆಂಗಳೂರು: ಬಾಲಿವುಡ್‌ನ ಪವರ್-ಪ್ಯಾಕ್ಡ್ ಜೋಡಿಗಳಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾನ್ ಚೋಟೆ ಮಿಯಾನ್’ (Bade miyan chote miyan) ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಬಾಸ್ಕೊ-ಸೀಸರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಟೈಗರ್ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಅನಿರುದ್ಧ್ ರವಿಚಂದರ್ ಮತ್ತು ವಿಶಾಲ್ ಮಿಶ್ರಾ ಧ್ವನಿಯಾಗಿರುವ ಟೈಟಲ್ ಟ್ರ್ಯಾಕ್‌ಗೆ ವಿಶಾಲ್ ಮಿಶ್ರಾ ಟ್ಯೂನ್ ಹಾಕಿದ್ದಾರೆ. ಈ ಹಾಡಿಗೆ 100ಕ್ಕೂ ಹೆಚ್ಚು ಡ್ಯಾನ್ಸರ್ಸ್ ಕುಣಿದು ಕುಪ್ಪಳಿಸಿದ್ದಾರೆ. ಕನ್ನಡದಲ್ಲಿಯೂ ಹಾಡು ಮೂಡಿಬಂದಿದ್ದು, ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ ಶಾಸ್ತ್ರಿ, ಅಭಿಷೇಕ್ ಎಂ ಆರ್ ಹಾಗೂ ಋಷಿಕೇಶ ಬಿ ಆರ್ ಕಂಠವಿದೆ.

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಾಯಕರಾಗಿ ನಟಿಸಿದ್ದು, ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಹಾಲಿವುಡ್ ರೇಂಜ್‌ಗೆ ದೊಡ್ಡ ಬಜೆಟ್ ನಲ್ಲಿ’ಬಡೇ ಮಿಯಾನ್ ಚೋಟೆ ಮಿಯಾನ್’ ಚಿತ್ರ ನಿರ್ಮಿಸಲಾಗಿದೆ. ಅಲಿ ಅಬ್ಬಾಸ್ ಝಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಶು ಭಗ್ನಾನಿ, ದೀಪಿಕ್ಷಾ ದೇಶಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Akshay Kumar: ಅಬುಧಾಬಿಯಲ್ಲಿ ಹಿಂದೂ ದೇವಾಲಯ: ಫೋಟೊ ಹಂಚಿಕೊಂಡ ಅಕ್ಷಯ್ ಕುಮಾರ್!

ವಶು ಭಗ್ನಾನಿ ಮತ್ತು ಪೂಜಾ ಎಂಟರ್‌ಟೇನ್‌ಮೆಂಟ್ AAZ ಫಿಲಮ್ಸ್ ಸಹಯೋಗದಡಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಏಪ್ರಿಲ್ 2024 ಈದ್ ಸಂದರ್ಭದಲ್ಲಿ ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

Exit mobile version