Site icon Vistara News

Deepika Padukone: ಗುಡ್‌ ನ್ಯೂಸ್‌ ಕೊಟ್ಟೇ ಬಿಟ್ರು ದೀಪಿಕಾ ಪಡುಕೋಣೆ-ರಣವೀರ್ ಸಿಂಗ್!

Deepika Padukone announce pregnancy

ಬೆಂಗಳೂರು: ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ಈಗ ಗುಡ್​ ನ್ಯೂಸ್​ ನೀಡಿದ್ದಾರೆ. ದೀಪಿಕಾ ಪಡುಕೋಣೆ ಈಗ 2 ತಿಂಗಳ ಗರ್ಭಿಣಿ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ಫೆ. 29ರ ಗುರುವಾರ ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜೋಡಿ ಪರಸ್ಪರ ಪ್ರೀತಿ ಮಾಡಿ ಮದುವೆಯಾಗಿತ್ತು.

ಪೋಸ್ಟ್‌ನಲ್ಲಿ, ದೀಪಿಕಾ ಅವರು ತಮ್ಮ ಮೊದಲ ಮಗುವನ್ನು ನಿರೀಕ್ಷಿಸುವ ತಿಂಗಳನ್ನು ಮಾತ್ರ ಉಲ್ಲೇಖಿಸಿದ್ದಾರೆ. ಯಾವುದೇ ಕ್ಯಾಪ್ಷನ್​ ಇಲ್ಲ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಮುಂತಾದ ವಸ್ತುಗಳಿರುವ ಚಿತ್ರವನ್ನು ಅವರು ಪೋಸ್ಟ್​ ಮಾಡಿದ್ದಾರೆ. ‘ಸೆಪ್ಟೆಂಬರ್​ 2024 ’ ಎಂದು ಇದರಲ್ಲಿ ಬರೆಯಲಾಗಿದೆ. ಈಗ ದಂಪತಿಗೆ ಫ್ಯಾನ್ಸ್‌, ಸೆಲೆಬ್ರಿಟಿಗಳು ಸೇರಿದಂತೆ ಅಭಿನಂದನೆ ತಿಳಿಸುತ್ತಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂಸ ಬ್ರೇಕ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Deepika Padukone: ನಟಿ ದೀಪಿಕಾ ಪಡುಕೋಣೆ ಗರ್ಭಿಣಿ, ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಈ ಮೊದಲೇ ವದಂತಿಗಳು ಹಬ್ಬಿತ್ತು

ದಿ ವೈಟ್ ಲೋಟಸ್ ಸೀಸನ್ 3 ರಿಂದ ದೀಪಿಕಾ ಹೊರಗುಳಿದಿದ್ದಾರೆ ಎಂದು ವರದಿಯಾದ ಕೆಲವೇ ದಿನಗಳಲ್ಲಿ ದೀಪಿಕಾ ಗರ್ಭಿಣಿಯಾಗಿರುವ ಸುದ್ದಿ ಹೊರಬಂದಿತ್ತು. ಎಚ್‌ಒಬಿಯ ಅತ್ಯಂತ ಜನಪ್ರಿಯ ಶೋ ಆಗಿರುವ ದಿ ವೈಟ್ ಲೋಟಸ್ ಸೀಸನ್‌ 3ರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ವಾರಾಂತ್ಯದಲ್ಲಿ ದೀಪಿಕಾ ಕಾರ್ಯಕ್ರಮದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿತ್ತು.

ದೀಪಿಕಾ ಗರ್ಭಿಣಿಯಾಗಿದ್ದಾರೆಂಬ ವದಂತಿಗಳಿಗೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ‘ಫೈಟರ್‌’ ಚಿತ್ರದ ಪ್ರಚಾರದ ಫೋಟೋಗಳನ್ನು ದೀಪಿಕಾ ಹಂಚಿಕೊಂಡಾಗ, ಅಭಿಮಾನಿಗಳು ಹೊಟ್ಟೆ ಉಬ್ಬಿರುವುದನ್ನು ಅನ್ನು ಗಮನಿಸಿದ್ದರು. ಅಲ್ಲದೇ, ಕಮೆಂಟ್ ವಿಭಾಗದಲ್ಲಿ ಗರ್ಭಿಣಿಯೇ ಎಂಬ ಪ್ರಶ್ನೆಗಳು ತುಂಬಿದ್ದವು.

ಈ ವರ್ಷದ ಆರಂಭದಲ್ಲಿ ದೀಪಿಕಾ ರಣವೀರ್ ಜತೆ ಮಕ್ಕಳನ್ನು ಹೊಂದಲು ಬಯಸುವುದಾಗಿ ಹೇಳಿದ್ದರು. ಪತ್ರಿಕೆಯೊಂದಿಗೆ ಮಾತನಾಡಿದ್ದ ದೀಪಿಕಾ, “ಖಂಡಿತವಾಗಿಯೂ. ರಣವೀರ್ ಮತ್ತು ನಾನು ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ನಮ್ಮ ಸ್ವಂತ ಕುಟುಂಬವನ್ನು ಪ್ರಾರಂಭಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ” ಎಂದು ಹೇಳಿದ್ದರು.

Exit mobile version