ಬೆಂಗಳೂರು: ಇಂದು (ಏ.14) ಮುಂಜಾನೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಹಲವಾರು ಬಾರಿ ಗುಂಡು ಹಾರಿಸಿ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಶುರು ಮಾಡಿದ್ದಾರೆ.
ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
मुंबई में अभिनेता #सलमानखान के बांद्रा स्थित आवास के बाहर का दृश्य, जहां आज सुबह दो अज्ञात लोगों ने गोलीबारी की। पुलिस और फॉरेंसिक टीम मौके पर मौजूद#SalmanKhan #Firing #Bandra pic.twitter.com/90Hr8UIG35
— Shailendra Pandey (@shailfilm) April 14, 2024
ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹಿಂದೊಮ್ಮೆ ಬೆದರಿಕೆ ಹಾಕಿದ್ದ. ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿʼʼ ಎಂದು ಹೇಳಿದ್ದ. “ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆʼʼ ಎಂದು ಬಿಷ್ಣೋಯ್ ಹೇಳಿದ್ದ. ಇದಾದ ಕೆಲವೇ ದಿನಗಳಲ್ಲಿ, ಕೃಷ್ಣಮೃಗವನ್ನು ಕೊಂದ ಆರೋಪದ ಮೂಲಕ ಸಲ್ಮಾನ್ ತನ್ನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿಕೆ ನೀಡಿದ್ದ.
Today at around 5 am, two unidentified people opened fire outside the house of actor Salman Khan in Bandra. Police have received information about 3 rounds of firing. Mumbai Police's Crime Branch has reached the spot for investigation: Mumbai Police
— ANI (@ANI) April 14, 2024
(file pic) pic.twitter.com/9eY8qGTtGa
ಇದನ್ನೂ ಓದಿ: Salman Khan: ಬಿಡಿಗಾಸೂ ಕೈಯಲ್ಲಿ ಇಲ್ಲದೇ ಇದ್ದಾಗ ಸಲ್ಮಾನ್ ಖಾನ್ ಸಹೋದರಿಯನ್ನು ಮದುವೆಯಾಗಿದ್ರಂತೆ ಈ ನಟ!
2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್ನ ಬಿಷ್ಣೋಯ್ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಇದೀಗ ಮತ್ತೆ ಸಲ್ಮಾನ್‌ಗೆ ಬೆದರಿಕೆ ಬಂದಿದೆ ಎಂದು ಪೊಲೀಸರು ಮತ್ತಷ್ಟು ಸಲ್ಮಾನ್ ಅವರಿಗೆ ಭದ್ರತೆ ಹೆಚ್ಚಿಸಿದ್ದಾರೆ.