ಬೆಂಗಳೂರು: ನಟಿ ಜಾನ್ವಿ ಕಪೂರ್ (Janhvi Kapoor) ಅವರು ಜುಲೈ 18 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಧಾಂಶು ಸರಿಯಾ ಅವರ ‘ಉಲಾಜ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೀಗ ವರದಿಯ ಪ್ರಕಾರ ನಟಿಯ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ಮದುವೆಯಲ್ಲಿ ಜಾಹ್ನವಿ ಕಪೂರ್ ಕಣ್ಮನ ಸೆಳೆದಿದ್ದರು. ಗೋಲ್ಡನ್ ಡ್ರೆಸ್‌ನಲ್ಲಿ ಮಿಂಚಿದ್ದರು. ಆ ನಂತರ ಅದ್ಧೂರಿ ಮದುವೆಯನ್ನು ಮುಗಿಸಿಕೊಂಡು ಜಾಹ್ನವಿ ಕಪೂರ್ ಚೆನ್ನೈಗೆ ತೆರಳಿದ್ದರು.
ಚೆನ್ನೈನಲ್ಲಿ ಜಾಹ್ನವಿ ಕಪೂರ್ ಸೀ ಫುಡ್ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್ಅವರಿಗೆ ಫುಡ್ಪಾಯ್ಸನ್ಆಗಿದೆ. ಇನ್ನೂ ಅನಾರೋಗ್ಯದಿಂದ ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಕುಸಿದು ಬಿದ್ದರು ಎನ್ನುವ ಸುದ್ದಿಯೂ ಇದೆ. ಬೋನಿ ಕಪೂರ್ ಇನ್ನೊಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಜಾಹ್ನವಿ ಕಪೂರ್ ಅವರನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಹೇಳಿದ್ದಾರೆ.
ಜಾಹ್ನವಿ ಕಪೂರ್ ‘ಉಲಾಜ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ. ಉಲಾಜ್ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್? ಟ್ರೋಲ್ ಆದ್ರು ನಟಿ!
ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.